ಆಕರ್ಷಕ ಬೆಲೆಯ ಹೊಸ Okaya Faast F2F ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳು
Okaya EV ತನ್ನ ಹೊಸ Faast F2F ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಈ ಹೊಸ Okaya Faast F2F ಎಲೆಕ್ಟ್ರಿಕ್ ಸ್ಕೂಟರ್ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.83,999 ಆಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಭಾರತದಲ್ಲಿ ಬೇಡಿಕೆಯನ್ನು ಪಡೆದುಕೊಳ್ಳುವ ವೇಳೆ ಈ ಹೊಸ ಸ್ಕೂಟರ್ ಲಗ್ಗೆಯಿಟ್ಟಿದೆ.
ಹೊಸ Okaya Faast F2F ಎಲೆಕ್ಟ್ರಿಕ್ ಸ್ಕೂಟರ್ ಸಿಂಗಲ್ ಚಾರ್ಜ್‌ನಲ್ಲಿ 70-80 ಕಿಮೀ ರೇಂಜ್ ಅನ್ನು ನೀಡುತ್ತದೆ ಈ ಎಲೆಕ್ಟ್ರಿಕ್ ಸ್ಕೂಟರ್ ಲೋಡ್‌ಗೆ ಅನುಗುಣವಾಗಿ ಗಂಟೆಗೆ 55 ಕಿಮೀ ವೇಗವನ್ನು ಹೊಂದಿದೆ. ಈ ಹೊಸ Faast F2F ಎಲೆಕ್ಟ್ರಿಕ್ ಸ್ಕೂಟರ್ ಕೈಗೆಟುಕುವ ಬೆಲೆಗೆ ಸಿಟಿ ಸ್ಕೂಟರ್‌ಗಾಗಿ ಹುಡುಕುತ್ತಿರುವ ಖರೀದಿದಾರರನ್ನು ಗುರಿಯಾಗಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಹೊಸ Okaya Faast F2F ಎಲೆಕ್ಟ್ರಿಕ್ ಸ್ಕೂಟರ್ 800W-BLDC-ಹಬ್ ಮೋಟಾರ್‌ನಿಂದ ಚಾಲಿತವಾಗಿದೆ.

ಈ ಹೊಸ Okaya Faast F2F ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 2.2 kWh ಲಿಥಿಯಂ-ಐಯಾನ್ - LFP ಬ್ಯಾಟರಿ ಪ್ಯಾಕ್‌ನೊಂದಿಗೆ ಜೋಡಿಸಲಾಗಿದೆ. ಈ ಬ್ಯಾಟರಿ ಪ್ಯಾಕ್ ಮತ್ತು ಮೋಟಾರ್ 2 ವರ್ಷಗಳ ವಾರಂಟಿಯೊಂದಿಗೆ ಬರುತ್ತದೆ. ಈ Okaya Faast F2F ಎಲೆಕ್ಟ್ರಿಕ್ ಸ್ಕೂಟರ್ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಈ ಸ್ಕೂಟರ್ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಸ್ಪ್ರಿಂಗ್ ಲೋಡೆಡ್ ಹೈಡ್ರಾಲಿಕ್ ರಿಯರ್ ಶಾಕ್ ಅಬ್ಸಾರ್ಬರ್‌ಗಳನ್ನು ಹೊಂದಿದೆ
ಈ ಹೊಸ Okaya ಎಲೆಕ್ಟ್ರಿಕ್ ಸ್ಕೂಟರ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, DRL ಹೆಡ್ ಲ್ಯಾಂಪ್‌ಗಳು ಮತ್ತು ಟೈಲ್ ಲ್ಯಾಂಪ್‌ಗಳೊಂದಿಗೆ ಬರುತ್ತದೆ. ಹೊಸ Okaya Faast F2F ಎಲೆಕ್ಟ್ರಿಕ್ ಸ್ಕೂಟರ್ 6 ಹೊಸ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಇವುಗಳು ಮೆಟಾಲಿಕ್ ಬ್ಲಾಕ್, ಮೆಟಾಲಿಕ್ ಸಯಾನ್, ಮ್ಯಾಟ್ ಗ್ರೀನ್, ಮೆಟಾಲಿಕ್ ಗ್ರೇ, ಮೆಟಾಲಿಕ್ ಸಿಲ್ವರ್ ಮತ್ತು ಮೆಟಾಲಿಕ್ ವೈಟ್ ಆಗಿದೆ.
ಈ ಹೊಸ Faast F2F ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಇಕೋ, ಸಿಟಿ ಮತ್ತು ಸ್ಪೋರ್ಟ್ಸ್ ಎಂಬ 3 ರೈಡಿಂಗ್ ಮೋಡ್ ಗಳನ್ನು ಹೊಂದಿದೆ. ಈ Okaya Faast F2F ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿಯ ಮೇಲೆ 2 ವರ್ಷಗಳ ಮತ್ತು 20,000 ಕಿ.ಮೀ ವಾರಂಟಿಯನ್ನು ನೀಡುತ್ತಿದೆ. ಈ ಹೊಸ Okaya ಎಲೆಕ್ಟ್ರಿಕ್ ಸ್ಕೂಟರ್ 10 ಇಂಚಿನ ಟ್ಯೂಬ್‌ಲೆಸ್ ಟೈರ್‌ಗಳಲ್ಲಿ ಚಲಿಸುತ್ತದೆ. ಇದನ್ನು 4-5 ಗಂಟೆಗಳಲ್ಲಿ ಬ್ಯಾಟರಿಯನ್ನು ಸಂಪೂರ್ಣವಾಗಿ ಚಾರ್ಜ್ ಮಾಡಬಹುದು.
ಬಿಡುಗಡೆಗೆ ವೇಳೆ ಮಾತನಾಡಿದ, ಒಕಾಯಾ ಎಲೆಕ್ಟ್ರಿಕ್ ವೆಹಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಅನ್ಶುಲ್ ಗುಪ್ತಾ ಮಾತನಾಡಿ, ಫಾಸ್ಟ್ ಎಫ್2ಎಫ್ ಬಿಡುಗಡೆಯೊಂದಿಗೆ ನಾವು ಭಾರತದಲ್ಲಿ ಉನ್ನತ ಗುಣಮಟ್ಟದ ಮತ್ತು ವಿಶ್ವಾಸಾರ್ಹ ಇವಿಗಳಿಗೆ ಹೊಸ ಮಾನದಂಡವನ್ನು ಹಲವಾರು ಹಂತಗಳಲ್ಲಿ ಹೊಂದಿಸಿದ್ದೇವೆ. ಅದರ ವಿಶಿಷ್ಟ ಮತ್ತು ವಿಶ್ವಾಸಾರ್ಹ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ, ನಾವು ಹೆಚ್ಚು ವ್ಯಾಪಕ ಸರಣಿಯ ಗ್ರಾಹಕ ವಿಭಾಗಗಳಿಗೆ ವಿಸ್ತರಿಸುತ್ತೇವೆ.
ಆರಾಮದಾಯಕ ಮತ್ತು ಸೊಗಸಾದ Faast F2F ಪವರ್-ಸಮರ್ಥವಾಗಿದೆ ಮತ್ತು ನಮ್ಮ ಸಅಮರ್ಥ ಮಾರಾಟದ ನಂತರದ ಸೇವೆಗಳಿಂದ ಸಮಾನವಾಗಿ ಬೆಂಬಲಿತವಾಗಿದೆ. ಕೈಗೆಟಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಮೊಬಿಲಿಟಿಗೆ ಬದಲಾಯಿಸಲು ಬಯಸುವ ಜನರಿಗೆ ಇದು ಪರಿಪೂರ್ಣ ಆಯ್ಕೆಯಾಗಿ ಹೊರಹೊಮ್ಮುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ಹೇಳಿದ್ದರು. ಇನ್ನು ಒಕಾಯ ಇವಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೂಡ ಬಿಡುಗಡೆಗೊಳಿಸಲಾಗಿದೆ. .
ಈ ಹೊಸ ಒಕಾಯ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.99,999 ಆಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಮೆಟಾಲಿಕ್ ಬ್ಲಾಕ್, ಮೆಟಾಲಿಕ್ ಸಯಾನ್, ಮ್ಯಾಟ್ ಗ್ರೀನ್, ಮೆಟಾಲಿಕ್ ಗ್ರೇ, ಮೆಟಾಲಿಕ್ ಸಿಲ್ವರ್ ಮತ್ತು ಮೆಟಾಲಿಕ್ ವೈಟ್ ಎಂಬ ಆರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಹೊಸ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ತಯಾರಕರು ಹೊಂದಿರುವ 550+ ಔಟ್‌ಲೆಟ್‌ಗಳ ಮೂಲಕ ಮಾರಾಟ ಮಾಡಲಾಗುತ್ತದೆ.


Click it and Unblock the Notifications








