ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಿದ ಹಾರ್ಲೆ-ಡೇವಿಡ್ಸನ್ ಬೈಕಿನ ಬುಕ್ಕಿಂಗ್ ತಾತ್ಕಾಲಿಕ ಸ್ಥಗಿತ!

ಅಮೆರಿಕ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹಾರ್ಲೆ-ಡೇವಿಡ್ಸನ್ ತನ್ನ ಬಹುನಿರೀಕ್ಷಿತ ಹೊಸ ಹಾರ್ಲೆ-ಡೇವಿಡ್ಸನ್ X440 (Harley-Davidson X440) ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕೊನೆಗೂ ಇತ್ತೀಚೆಗೆ ಬಿಡುಗಡೆಗೊಳಿತು. ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಗೊಂಡು ಭಾರತದಲ್ಲಿ ಹೊಸ ಸಂಚಲನವನ್ನು ಮೂಡಿಸುತ್ತಿದೆ.

ಹಾರ್ಲೆ-ಡೇವಿಡ್ಸನ್ ಕಂಪನಿಯು ಅತ್ಯಂತ ಕೈಗೆಟುಕುವ ಹಾರ್ಲೆಗಾಗಿ ಭರ್ಜರಿ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ ಎಂದು ಹೇಳಿಕೊಂಡಿದೆ. ಹಾರ್ಲೆ-ಡೇವಿಡ್ಸನ್ X44 ಬೈಕಿನ ಉತ್ಪಾದನೆಯನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಾರಂಭಿಸುತ್ತದೆ. ರಾಜಸ್ಥಾನದ ನೀಮ್ರಾನಾದಲ್ಲಿರುವ ಅದರ 'ಗಾರ್ಡನ್ ಫ್ಯಾಕ್ಟರಿ'ಯಲ್ಲಿ ಉತ್ಪಾದನೆ ಮಾಡುತ್ತಾರೆ. ಅಲ್ಲಿ ಪ್ರಸ್ತುತ, ಬೇಡಿಕೆಗೆ ಪ್ರತಿಕ್ರಿಯೆಯಾಗಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುತ್ತಿದೆ.

Harley-Davidson X440

ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನ ಟೆಸ್ಟ್ ಡ್ರೈವ್ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದ್ದು, ಅಕ್ಟೋಬರ್‌ನಲ್ಲಿ ಗ್ರಾಹಕರಿಗೆ ಬೈಕ್‌ಗಳನ್ನು ವಿತರಿಸಲು ಪ್ರಾರಂಭಿಸುವುದಾಗಿ ಹೀರೋ ಹೇಳಿದೆ. ಮುಂದಿನ ಆನ್‌ಲೈನ್ ಬುಕಿಂಗ್ ವಿಂಡೋ ಯಾವಾಗ ತೆರೆಯುತ್ತದೆ ಎಂಬುದನ್ನು ಇದು ಇನ್ನೂ ಘೋಷಿಸದಿದ್ದರೂ, ಬುಕಿಂಗ್ ಮತ್ತೆ ತೆರೆದಾಗ ಬೆಲೆಗಳು ಹೆಚ್ಚಾಗುತ್ತವೆ ಎಂದು ಸೂಚಿಸಿದೆ. ಸದ್ಯ ಈ ಬೈಕಿಗೆ ಬುಕ್ಕಿಂಗ್ ಅನ್ನು ಸ್ಥಗಿತಗೊಳಿಸಲಾಗಿದೆ.

ಇನ್ನು ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ 3 ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದ್ದು, ಇದು ಡೆನಿಮ್, ವಿವಿಡ್ ಮತ್ತು ಎಸ್ ಆಗಿದೆ. ಇದರಲ್ಲಿ ಈ ರೂಪಾಂತರಗಳಲ್ಲಿ, 'ಡೆನಿಮ್' ಮೂಲ ರೂಪಾಂತರವಾಗಿದೆ, ಆದರೆ 'S' ಟಾಪ್ ರೂಪಾಂತರವಾಗಿದೆ. ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರವಾಗಿದೆ ರೂ.2.29 ಲಕ್ಷದಿಂದ ಪ್ರಾರಂಭವಾಗುತ್ತವೆ.

Harley-Davidson X440

ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಮಿಡ್-ಸ್ಪೆಕ್ 'ವಿವಿಡ್' ರೂಪಾಂತರದ ಬೆಲೆ ರೂ.2.49 ಲಕ್ಷವಾದರೆ, ಈ ಬೈಕಿನ ಎಸ್ ಎಂಬ ಟಾಪ್ ರೂಪಾಂತರದ ಬೆಲೆಯು ರೂ.2.69 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಇದು ಹಾರ್ಲೆ-ಡೇವಿಡ್ಸನ್ ಕಂಪನಿಯ ಅತ್ಯಂತ ಕೈಗೆಟುವ ಬೈಕ್ ಇದಾಗಿದೆ. ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, ಈ ಬೈಕಿನಲ್ಲಿ ಸಿಂಗಲ್-ಸಿಲಿಂಡರ್, ಆಯಿಲ್-ಕೂಲ್ಡ್, 440cc ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಸರಿಸುಮಾರು 27 bhp ಪವರ್ ಮತ್ತು 38 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

Harley-Davidson X440

ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನಲ್ಲಿ ದೊಡ್ಡ ಮಸ್ಕಲರ್ ಫ್ಯೂಯಲ್ ಟ್ಯಾಂಕ್ ಮತ್ತು ನಯವಾದ ಟೇಲ್ ವಿಭಾಗದೊಂದಿಗೆ ಸುಂದರವಾಗಿ ಕಾಣುತ್ತದೆ. ಹೆಚ್ಚುವರಿಯಾಗಿ, ಈ ಬೈಕ್ ನ್ಯೂ-ರೆಟ್ರೊ ಲುಕ್ ನೀಡಲು ವೃತ್ತಾಕಾರದ ವಿನ್ಯಾಸದ ಅಂಶಗಳನ್ನು ಒಳಗೊಂಡಿದೆ. ಈ ಹೊಸ ಹಾರ್ಲೆ-ಡೇವಿಡ್ಸನ್ X440ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿವೆ.

ಇದರೊಂದಿಗೆ ಹೊಸ ಬೈಕಿನಲ್ಲಿ LED ಲೈಟಿಂಗ್, ಆಂಬಿಯೆಂಟ್ ಲೈಟ್ ಸೆನ್ಸರ್‌ನೊಂದಿಗೆ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಹೆಚ್ಚಿನ ಫೀಚರ್ಸ್ ಗಳನ್ನು ಹೊಂದಿವೆ. ಇತರ ಗಮನಾರ್ಹ ಫೀಚರ್ಸ್ ಗಳು ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್, ಮ್ಯೂಸಿಕ್ ಕಂಟ್ರೋಲ್ ಮತ್ತು ಗೇರ್ ಸ್ಥಾನವನ್ನು ಪ್ರದರ್ಶಿಸುತ್ತದೆ. ಕೈಗೆಟುಕುವ ಬೆಲೆ ಮತ್ತು ಆಕರ್ಷಕ ವಿನ್ಯಾಸದ ಮೂಲಕ ಈ ಬೈಕ್ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತದೆ.

ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಮಸ್ಟರ್ಡ್ ಡೆನಿಮ್, ಮೆಟಾಲಿಕ್ ಡಾರ್ಕ್ ಸಿಲ್ವರ್, ಮೆಟಾಲಿಕ್ ಥಿಕ್ ಸಿಲ್ವರ್ ಮತ್ತು ಮ್ಯಾಟ್ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳ ಈ ಬಣ್ಣಗಳಲ್ಲಿ, ಮೊದಲ ಮತ್ತು ಕೊನೆಯ ಬಣ್ಣಗಳು ಕ್ರಮವಾಗಿ ಬೇಸ್ ಮತ್ತು ಟಾಪ್-ಸ್ಪೆಕ್ ಮಾದರಿಗಳಿಗೆ ಪ್ರತ್ಯೇಕಿಸುತ್ತದೆ. ಈ ಬೈಕ್ ಆಕರ್ಷಕ ಬಣ್ಣಗಳ ಆಯ್ಕೆಯು ಗ್ರಾಹಕರನ್ನು ಸೆಳೆಯುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳನ್ನು ಫಾಲೋ ಮಾಡಿ.

More from DriveSpark

Article Published On: Saturday, July 29, 2023, 14:15 [IST]
English summary
Harley davidson x440 roadster online bookings to close on august 3 deliveries details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+