ಭಾರತದಲ್ಲಿ ಇತಿಹಾಸ ಸೃಷ್ಟಿಸಲು ಬರಲಿದೆ ಹೋಂಡಾ Activa ಎಲೆಕ್ಟ್ರಿಕ್ ಸ್ಕೂಟರ್: ಇಲ್ಲಿದೆ ಮಾಹಿತಿ
ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೋಂಡಾ ಆಕ್ಟಿವಾ ಸ್ಕೂಟರ್‌ಗಳನ್ನು ಪ್ರತಿಯೊಬ್ಬರು ಇಷ್ಟಪಟ್ಟು ಖರೀದಿಸುತ್ತಾರೆ. ಅದು ದೀರ್ಘಕಾಲ ಬಾಳಿಕೆ ಹಾಗೂ ಉತ್ತಮ ಮೈಲೇಜ್ ನೀಡುವುದರಿಂದ ಹೆಚ್ಚಿನ ಗ್ರಾಹಕರನ್ನು ಆಕರ್ಷಿಸುತ್ತಿದೆ. ಇತ್ತೀಚೆಗೆ ಹೋಂಡಾ ಕಂಪನಿ ತನ್ನ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ನ್ನು (ಇವಿ) ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ದೃಢಪಡಿಸಿದೆ.
ಜಪಾನ್ ದೇಶದ ಪ್ರಮುಖ ವಾಹನ ತಯಾರಕ ಕಂಪನಿ 'ಹೋಂಡಾ' ಮುಂದಿನ ವರ್ಷ ಅಂದರೆ, 2024ರ ಜನವರಿಯಲ್ಲಿ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಲಾಂಚ್ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ನೂತನ ಸ್ಕೂಟರ್ ಗ್ರಾಹಕರಿಗೆ ಖರೀದಿಗೆ ದೊರೆತ ಮೇಲೆ, ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಗರಿಷ್ಠ ಪಾಲನ್ನು ಹೊಂದಿರುವ ಓಲಾ, ಎಥರ್ ಹಾಗೂ ಟಿವಿಎಸ್ ಕಂಪನಿಗಳಿಗೆ ಭಾರೀ ಪೈಪೋಟಿ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಮುಂಬರಲಿರುವ ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್, ಸವಾರರಿಗೆ ಉತ್ತಮ ರೈಡಿಂಗ್ ಅನುಭವವನ್ನು ನೀಡಲಿದೆಯಂತೆ. ಬಹುತೇಕ ಈ ಸ್ಕೂಟರ್, 50 kmph ಟಾಪ್ ಸ್ವೀಡ್ ಹೊಂದಿರಬಹುದು. ಸುರಕ್ಷತೆಯ ದೃಷ್ಟಿಯಿಂದ ಸ್ಥಿರ ಬ್ಯಾಟರಿ (fixed battery) ಆಯ್ಕೆಯನ್ನು ಪಡೆದಿರಲಿದೆ. ಜೊತೆಗೆ ಸಂಪೂರ್ಣ ಚಾರ್ಜಿನಲ್ಲಿ 100 kmph ರೇಂಜ್ ನೀಡಲಿದೆ. ಹೊರಭಾಗದ ವಿನ್ಯಾಸ, ಬ್ರೇಕಿಂಗ್ ಸಿಸ್ಟಮ್ ಹಾಗೂ ಸಸ್ಪೆನ್ಷನ್ ಸೆಟಪ್, ICE ಚಾಲಿತ ಹೋಂಡಾ ಆಕ್ಟಿವಾಗೆ ಹೋಲುತ್ತದೆ
ದೇಶೀಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯಿಂದ 'ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್' ಲಾಂಚ್ ಮಾಡಿದ ಬಳಿಕ, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ಲಾಟ್‌ಫಾರ್ಮ್ ಆಧರಿಸಿ, ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆಯಾಗುವ ಸಾಧ್ಯತೆಯಿದ್ದು, ಇವು ಬದಲಾಯಿಸಬಹುದಾದ ಬ್ಯಾಟರಿ ಆಯ್ಕೆಯನ್ನು ಹೊಂದಬಹುದು. ನಗರಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಹೆಚ್ಚು ಭಾರವಿಲ್ಲದೇ ಹಗುರವಾಗಿಯು ಈ ಸ್ಕೂಟರ್‌ಗಳಿರಬಹುದು. ಇದರಿಂದ ಮುಂಬರಲಿರುವ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಸಾಕಷ್ಟು ನೀರಿಕ್ಷೆಗಳು ಹೆಚ್ಚಿವೆ.

ಹೋಂಡಾ ಕಂಪನಿ ಆಕ್ಟಿವಾ ಇವಿ ನಂತರ, ತನ್ನ ಎರಡನೇ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಬದಲಾಯಿಸಬಹುದಾದ ಬ್ಯಾಟರಿ (swappable battery) ಆಯ್ಕೆಯಲ್ಲಿ ಖರೀದಿಗೆ ನೀಡಲಿದೆ. ಅದಕ್ಕೂ ಮೊದಲು ದೇಶಾದ್ಯಂತ 6000 ಬ್ಯಾಟರಿ (battery swapping) ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಕೆಲಸ ಮಾಡುತ್ತಿದೆ. ಆ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪ್ರಮುಖವಾಗಿ ಹೋಂಡಾ ಆಕ್ಟಿವಾ ಎಲೆಕ್ರ್ಟಿಕ್ ಸ್ಕೂಟರ್ ತಯಾರಿಕೆಗೆ ಬಳಸುವ ಕಚ್ಚಾವಸ್ತುಗಳನ್ನು ಸ್ಥಳೀಯವಾಗಿಯೇ ತಯಾರಿಸಲಾಗುತ್ತದೆ ಎಂದು ವರದಿಯಾಗಿದೆ.
ಕಳೆದ ಜನವರಿಯಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಹೋಂಡಾ ಆಕ್ಟಿವಾ 6G, 109 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 7.84 hp ಗರಿಷ್ಠ ಪವರ್ 8.90 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5.3 ಲೀಟರ್ ಫ್ಯುಯೆಲ್ ಟ್ಯಾಂಕ್ ಹೊಂದಿದ್ದು, 60kpl ಮೈಲೇಜ್ ನೀಡುತ್ತದೆ. ಈ ಸ್ಕೂಟರ್ ರೂಪಾಂತರಗಳಿಗೆ ಅನುಗುಣವಾಗಿ ರೂ.75,655 ದಿಂದ ರೂ.81,656 ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಾಗಲಿದೆ.
ಹೋಂಡಾ ಆಕ್ಟಿವಾದ ಟಾಪ್ ಎಂಡ್ ಆವೃತ್ತಿಯಾದ ಹೆಚ್ ಸ್ಮಾರ್ಟ್ ಅಲಾಯ್ ವೀಲ್ಸ್, ಕೀಲೆಸ್, ಸೈಲೆಂಟ್ ಸ್ಟಾರ್ಟರ್ ಮತ್ತು ಆಟೋ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹತ್ತು ಹಲವು ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಇನ್ನು, ಹೋಂಡಾದ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಗ್ರಾಹಕರು ಕಾತರದಿಂದ ಕಾಯುತ್ತಿದ್ದಾರೆ. ಇದು ಕೂಡ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ಸಾಧ್ಯತೆಯಿದ್ದು, ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.


Click it and Unblock the Notifications