ಬಹುಬೇಡಿಕೆಯ ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಆಫರ್

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ (ಹೆಚ್‌ಎಂಎಸ್‌ಐ) ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ತನ್ನ ಆಕ್ಟಿವಾ ಸ್ಕೂಟರ್ ಮೇಲೆ ಸೀಮಿತ ಅವಧಿಯ ಆಫರ್ ಅನ್ನು ಘೋಷಿಸಿದೆ. ಹೊಸ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಖರೀದಿಸುವ ಗ್ರಾಹಕರಿಗೆ ಸುವರ್ಣವಕಾಶವಾಗಿದೆ

ಈ ಸೀಮಿತ ಅವಧಿಯ ಕೊಡುಗೆಯ ಅಡಿಯಲ್ಲಿ, ಖರೀದಿದಾರರು ಶೇ.5 ರಷ್ಟು (ರೂ. 5,000 ವರೆಗೆ) ಕ್ಯಾಶ್‌ಬ್ಯಾಕ್ ಪಡೆಯಬಹುದು. ಈ ಕ್ಯಾಶ್‌ಬ್ಯಾಕ್ ಕೊಡುಗೆಯು SBI ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಮಾನ್ಯವಾಗಿರುತ್ತದೆ ಮತ್ತು ಆರು ತಿಂಗಳು ಮತ್ತು ಅದಕ್ಕಿಂತ ಹೆಚ್ಚಿನ ಅವಧಿಯ EMI ವಹಿವಾಟುಗಳಲ್ಲಿ ಲಭ್ಯವಿದೆ. ಇದಲ್ಲದೆ, ಕನಿಷ್ಠ ವಹಿವಾಟು ಮೌಲ್ಯವು ರೂ 40,000 ಆಗಿರಬೇಕು. ಈ ಸೀಮಿತ ಅವಧಿಯ ಆಫರ್‌ನ ಅಡಿಯಲ್ಲಿ ಲಭ್ಯವಿರುವ ಇತರ ಪ್ರಯೋಜನಗಳೆಂದರೆ ರೂ. 3,000 ಕಡಿಮೆ ಡೌನ್ ಪೇಮೆಂಟ್ ಮತ್ತು ಶೇಕಡಾ 7.99 ಬಡ್ಡಿ ದರವಾಗಿದೆ.

ಬಹುಬೇಡಿಕೆಯ ಹೋಂಡಾ ಆಕ್ಟಿವಾ ಸ್ಕೂಟರ್ ಮೇಲೆ ಭರ್ಜರಿ ಆಫರ್

ಈ ಕೊಡುಗೆಯು ಜನವರಿ 1 ರಿಂದ ಮಾರ್ಚ್ 31, 2022 ರವರೆಗೆ ಮಾನ್ಯವಾಗಿರುತ್ತದೆ. ಖರೀದಿದಾರರು ಎರಡು ಕೊಡುಗೆಗಳನ್ನು ಒಟ್ಟಿಗೆ ಸೇರಿಸಲು ಸಾಧ್ಯವಿಲ್ಲ ಎಂದು ಕಂಪನಿಯು ಸೇರಿಸಿದೆ. ಈ ಕೊಡುಗೆಯು ಸೀಮಿತ ಅವಧಿಗೆ ಮಾತ್ರ ಮಾನ್ಯವಾಗಿರುತ್ತದೆ. ಹೋಂಡಾ ಆಕ್ಟಿವಾ ಸ್ಕೂಟರ್ ಖರೀದಿ ಮೇಲೆ ಆಫರ್ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ಹತ್ತಿರದ ಹೋಂಡಾ ಡೀಲರ್ ಶಿಪ್‌ಗೆ ಬೇಟಿ ನೀಡಿ. ಹೋಂಡಾ ಆಕ್ಟಿವಾ ಶ್ರೇಣಿಯು ಎರಡು ಮಾದರಿಗಳನ್ನು ಒಳಗೊಂಡಿದೆ . ಇದು ಹೋಂಡಾ ಆಕ್ಟಿವಾ 6ಜಿ ಮತ್ತು ಆಕ್ಟಿವಾ 125 ಆಗಿದೆ.

ಹೋಂಡಾ ಆಕ್ಟಿವಾ ದೇಶದಲ್ಲಿ ಹೆಚ್ಚು ಮಾರಾಟವಾಗುವ ಸ್ಕೂಟರ್ ಆಗಿದೆ. ದೇಶದಲ್ಲಿ ಮಾರಾಟವಾಗುವ ಪ್ರತಿ ಎರಡನೇ ಸ್ಕೂಟರ್ ಮತ್ತು ಪ್ರತಿ ಮೂರನೇ ದ್ವಿಚಕ್ರ ವಾಹನವು ಆಕ್ಟಿವಾ ಆಗಿರುತ್ತದೆ ಮತ್ತು ಮಾರಾಟದ ವಿಷಯದಲ್ಲಿ ಮೊದಲ ಸ್ಥಾನದಲ್ಲಿದೆ. ಮೊದಲಿಗೆ ಹೋಂಡಾ ಆಕ್ಟಿವಾ 125 ಸ್ಕೂಟರ್ ಬಗ್ಗೆ ಹೇಳುವುದಾದರೆ ಸ್ಟ್ಯಾಂಡರ್ಡ್, ಅಲಾಯ್ ಮತ್ತು ಡಿಲಕ್ಸ್ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ವಿಶ್ವಾಸಾರ್ಹವಾದ ಹಾಗೂ ಹೆಚ್ಚು ಮೈಲೇಜ್ ನೀಡುವ ಈ ಸ್ಕೂಟರ್ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ.

ಈ ಹೋಂಡಾ ಆಕ್ಟಿವಾ 125 ಸ್ಕೂಟರ್ ನಲ್ಲಿ 124 ಸಿಸಿ ಏರ್-ಕೂಲ್ಡ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 6,500 ಆರ್‌ಪಿಎಂನಲ್ಲಿ 8.18 ಬಿಹೆಚ್‍ಪಿ ಪವರ್ ಮತ್ತು 5,000 ಆರ್‌ಪಿಎಂನಲ್ಲಿ 10.3 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಬಿಎಸ್ 6 ಎಂಜಿನ್ ಹೊಂದಿರುವ ಈ ಆಕ್ಟಿವಾ 125 ಸ್ಕೂಟರಿನಲ್ಲಿ ಪರಿಷ್ಕರಿಸಿದ ಎಲ್‍ಇ‍‍ಡಿ ಹೆಡ್ ಲ್ಯಾಂಪ್, ಮುಂಭಾಗ ಹಾಗೂ ಸೈಡ್‍‍ನಲ್ಲಿ ಕ್ರೋಮ್ ಟ್ರಿಮ್ ಹಾಗೂ ಇದರ ಮುಂಭಾಗದಲ್ಲಿ ಹೊಸ ಎಪ್ರಾನ್‍‍ಗಳನ್ನು ಒಳಗೊಂಡಿವೆ.

ಇನ್ನು ಜನಪ್ರಿಯ ಹೋಂಡಾ ಆಕ್ಟಿವಾ 125 ಸ್ಕೂಟರ್ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಹಿಂಭಾಗದಲ್ಲಿ ಮೂರು-ಹಂತದ ಹೊಂದಾಣಿಕೆ ಮಾಡಬಹುದಾದ ಸ್ಪ್ರಿಂಗ್-ಲೋಡೆಡ್ ಹೈಡ್ರಾಲಿಕ್ ಸೆಟಪ್ ಅನ್ನು ಹೊಂದಿದೆ. ಈ ಆಕ್ಟಿವಾ 125 ಸ್ಕೂಟರ್ ಸ್ಕೂಟರ್ ನಲ್ಲಿ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಎಸಿಜಿ ಸ್ಟಾರ್ಟರ್, ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ನಂತಹ ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

ಈ ಹೋಂಡಾ ಆಕ್ಟಿವಾ 6ಜಿ ಸ್ಕೂಟರ್ ಬಗ್ಗೆ ಹೇಳುವುದಾದರೆ, ಈ ಬಿಎಸ್-6 ಆಕ್ಟಿವಾ 6ಜಿ ಸ್ಕೂಟರನ್ನು ಹೊಸ ಫೀಚರ್ ಗಳು ಮತ್ತು ಉತ್ತಮ ಗ್ರೌಂಡ್ ಕ್ಲಿಯರೆನ್ಸ್ ಮತ್ತು ಉದ್ದವಾದ ವೀಲ್‌ಬೇಸ್‌ ಅನ್ನು ಒಳಗೊಂಡಿದೆ. ಈ ಹೋಂಡಾ ಆಕ್ಟಿವಾ 6ಜಿ ಡಿಲಕ್ಸ್ ರೂಪಾಂತರದಲ್ಲಿ ಎಸಿಜಿ ಸ್ಟಾರ್ಟರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಇನ್ನು ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಮತ್ತು ಫ್ಯುಯಲ್ ಫಿಲ್ಲರ್ ಕ್ಯಾಪ್ ಅನ್ನು ಕೂಡ ಹೊಂದಿದೆ.

ಈ ಹೋಂಡಾ ಆಕ್ಟಿವಾ 6ಜಿ ಸ್ಕೂಟರಿನಲ್ಲಿ 109 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 7.79 ಬಿಹೆಚ್‍ಪಿ ಪವರ್ ಮತ್ತು 8.79 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಸ್ಕೂಟರ್ ಕಂಪನಿಯ ಪಿಜಿಎಂ-ಫೈ ತಂತ್ರಜ್ಞಾನವನ್ನು ಸಹ ಒಳಗೊಂಡಿದೆ. ಇದರಿಂದಾಗಿ ಈ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರಿಗೆ ಉತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ಮೈಲೇಜ್ ಅನ್ನು ನೀಡುತ್ತದೆ. ಹೋಂಡಾ ಆಕ್ಟಿವಾ ಹೊಸ ಪ್ರೀಮಿಯಂ ಆವೃತ್ತಿಯ ರೂಪಾಂತರವನ್ನು ಪಡೆಯುತ್ತದೆ. ಇದು ಹೋಂಡಾ ಆಕ್ಟಿವಾ ಪ್ರೀಮಿಯಂ ಎಡಿಷನ್ ಆಗಿದೆ.

Most Read Articles

Kannada
English summary
Honda activa scooter available with cashback offers details in kannada
Story first published: Saturday, January 21, 2023, 17:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X