ಕಡಿಮೆ ಬೆಲೆಗೆ ಸಿಗುವ ಬೆಂಗಳೂರು ಮೂಲದ ಎಲೆಕ್ಟ್ರಿಕ್ ಕಂಪನಿ ಸ್ಕೂಟರ್‌ಗಳಿವು: ದೇಶದಲ್ಲಿ ಇವುಗಳೇ ಫೇಮಸ್!
ದೇಶೀಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಕಳೆದ ಎರಡು ವರ್ಷದಿಂದ ಇ - ಸ್ಕೂಟರ್‌ಗಳು ಮುನ್ನೆಲೆಗೆ ಬರುತ್ತಿವೆ. ಬೆಂಗಳೂರು ಮೂಲದ ಓಲಾ (Ola) ಎಥರ್ (Ather) ಹಾಗೂ ಸಿಂಪಲ್ ಎನರ್ಜಿ (Simple Energy) ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವಿದೆ.
ಇತ್ತೀಚೆಗೆ ಬಿಡುಗಡೆಗೊಂಡ ಸಿಂಪಲ್ ಎನರ್ಜಿ ಕಂಪನಿಯ ಸಿಂಪಲ್ ಡಾಟ್ ಒನ್ (Simple Dot One) ಸ್ಕೂಟರ್ ಬಗ್ಗೆ ಮೊದಲಿಗೆ ತಿಳಿಯೋಣ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್, ರೂ.1 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಾಂಚ್ ಆಗಿದ್ದು, ಆರಂಭದಲ್ಲಿ ಬೆಂಗಳೂರಿನಲ್ಲಿ ವಿತರಣೆಯಾಗಲಿದೆ. ಆ ನಂತರ, ದೇಶದ ಇತರೆ ನಗರಗಳ ಗ್ರಾಹಕರಿಗೆ ಸಿಗುತ್ತದೆ. ಸಿಂಪಲ್ ಡಾಟ್ ಒನ್ ಇ-ಸ್ಕೂಟರ್, 3.7 kWh ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣ ಚಾರ್ಜ್ ನಲ್ಲಿ 151 ಕಿಲೋಮೀಟರ್ ರೇಂಜ್ ಕೊಡುತ್ತದೆ. ಇದರಲ್ಲಿವ 8.5 kW ಎಲೆಕ್ಟ್ರಿಕ್ ಮೋಟಾರ್ 72 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಕೆಲವೇ 2.7 ಸೆಕೆಂಡುಗಳಲ್ಲಿ 0 - 40 kmph ವೇಗವನ್ನು ಪಡೆಯಲಿದೆ. CBS (ಕಾಂಬಿ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.
ನೂತನ ಸಿಂಪಲ್ ಡಾಟ್ ಒನ್ ಎಲೆಕ್ಟ್ರಿಕ್ ಸ್ಕೂಟರ್, 7.0-ಇಂಚಿನ ಟಚ್‌ಸ್ಕ್ರೀನ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಬ್ಲೂಟೂತ್ ಕನೆಕ್ಟಿವಿಟಿ, ಒಟಿಎ ಅಪ್‌ಡೇಟ್‌ಗಳೊಂದಿಗೆ ಆಂಡ್ರಾಯ್ಡ್ ಒಎಸ್, ಅಲಾಯ್ ವೀಲ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ ಬ್ರೆಜನ್ ಬ್ಲಾಕ್, ಗ್ರೇಸ್ ವೈಟ್ ಸೇರಿದಂತೆ 4 ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

ಓಲಾ ಎಸ್1 ಎಕ್ಸ್ (Ola S1 X) ಎಲೆಕ್ಟ್ರಿಕ್ ಸ್ಕೂಟರ್, ಗ್ರಾಹಕರ ಕೈಗೆಟುಕುವ ಬೆಲೆಗೆ ಖರೀದಿಗೆ ದೊರೆಯಲಿದ್ದು, ರೂ.1,09,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 3 kWh ಸಾಮರ್ಥ್ಯದ ಬ್ಯಾಟರಿ ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 151 ಕಿಲೋಮೀಟರ್ ರೇಂಜ್ ಕೊಡುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಪ್ಯಾಕ್, ಗೃಹ ವಿದ್ಯುಚ್ಛಕ್ತಿ ಬಳಕೆಯಲ್ಲಿ 7.4 ಗಂಟೆಯಲ್ಲಿ ಚಾರ್ಜ್ ಆಗುತ್ತದೆ.
ಈ ಓಲಾ ಎಸ್1 ಎಕ್ಸ್ ಇ-ಸ್ಕೂಟರ್, ಹಬ್ ಮೌಂಟೆಡ್ ಎಲೆಕ್ಟ್ರಿಕ್ ಮೋಟಾರ್ ಒಳಗೊಂಡಿದ್ದು, 3.3 ಸೆಕೆಂಡುಗಳಲ್ಲಿ 0 - 40 kmph ಹಾಗೂ 5.5 ಸೆಕೆಂಡುಗಳಲ್ಲಿ 0 - 60 kmph ವೇಗವನ್ನು ಪಡೆಯಲಿದೆ. 90 kmph ಟಾಪ್ ಸ್ವೀಡ್ ಹೊಂದಿದೆ. 5-ಇಂಚಿನ LCD ಡಿಸ್ಪ್ಲೇ, LED ಲೈಟಿಂಗ್, ಸೈಡ್-ಸ್ಟ್ಯಾಂಡ್ ಅಲರ್ಟ್, ರಿವರ್ಸ್ ಮೋಡ್ ಸೇರಿದಂತೆ ವಿವಿಧ ಫೀಚರ್ಸ್ ಪಡೆದಿದೆ.
ಎಥರ್ 450ಎಸ್ (ather 450s) ಎಲೆಕ್ಟ್ರಿಕ್ ಸ್ಕೂಟರ್, ರೂ.1,29,999 ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 2.9 kWh ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 115 km ರೇಂಜ್ ಕೊಡುತ್ತದೆ. 90 kmph ಟಾಪ್ ಸ್ವೀಡ್ ಪಡೆದಿದ್ದು, ಕೇವಲ 3.9 ಸೆಕೆಂಡುಗಳಲ್ಲಿ 0 - 40 kmph ವೇಗವನ್ನು ಹೊಂದಲಿದೆ.

ಈ ಎಥರ್ 450ಎಸ್ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಉಪಯೋಗ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 5.4 kW (7.2 hp) ಗರಿಷ್ಠ ಪವರ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಸ್ಮಾರ್ಟ್ಇಕೋ, ಇಕೋ, ರೈಡ್, ಸ್ಪೋರ್ಟ್ ಎಂಬ ನಾಲ್ಕು ರೈಡಿಂಗ್ ಮೋಡ್ ಆಯ್ಕೆಯನ್ನು ಪಡೆದಿದ್ದು, ಫ್ರಂಟ್ & ರೇರ್ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








