ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಿದ ಹೊಸ ಹಾರ್ಲೆ-ಡೇವಿಡ್ಸನ್ ಬೈಕಿನ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭ

ಅಮೆರಿಕ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹಾರ್ಲೆ-ಡೇವಿಡ್ಸನ್ ತನ್ನ ಬಹುನಿರೀಕ್ಷಿತ ಹೊಸ ಹಾರ್ಲೆ-ಡೇವಿಡ್ಸನ್ X440 (Harley-Davidson X440) ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕೊನೆಗೂ ಬಿಡುಗಡೆಗೊಳಿಸಿದ್ದಾರೆ. ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಗೊಂಡು ಹೊಸ ಸಂಚಲನವನ್ನು ಮೂಡಿಸುತ್ತಿದೆ.

ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನ ಖರೀದಿಗಾಗಿ ಅಧಿಕೃತ ಬುಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಈ ಬೈಕ್ ಅನ್ನು ಖರೀದಿಸಲು ಬಯಸುವಾ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಹಾರ್ಲೆ-ಡೇವಿಡ್ಸನ್ ಡೀಲರ್‌ಶಿಪ್‌ಗಳು, ಆನ್‌ಲೈನ್ ಮತ್ತು ದೇಶದಾದ್ಯಂತ ಆಯ್ದ ಹೀರೋ ಮೋಟೋಕಾರ್ಪ್ ಔಟ್‌ಲೆಟ್‌ಗಳಲ್ಲಿ ಮೂಲಕ ಬುಕ್ಕಿಂಗ್ ಮಾಡಿಕೊಳ್ಳಬಹುದು. ಇನ್ನು ಈ ಬೈಕಿನ ವಿತರಣೆಯು ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಪ್ರಾರಂಭವಾಗುತ್ತದೆ.

Harley-Davidson X440

ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ 3 ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದ್ದು, ಇದು ಡೆನಿಮ್, ವಿವಿಡ್ ಮತ್ತು ಎಸ್ ಆಗಿದೆ. ಇದರಲ್ಲಿ ಈ ರೂಪಾಂತರಗಳಲ್ಲಿ, 'ಡೆನಿಮ್' ಮೂಲ ರೂಪಾಂತರವಾಗಿದೆ, ಆದರೆ 'S' ಟಾಪ್ ರೂಪಾಂತರವಾಗಿದೆ. ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರವಾಗಿದೆ ರೂ.2.29 ಲಕ್ಷದಿಂದ ಪ್ರಾರಂಭವಾಗುತ್ತವೆ.

ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಮಿಡ್-ಸ್ಪೆಕ್ 'ವಿವಿಡ್' ರೂಪಾಂತರದ ಬೆಲೆ ರೂ.2.49 ಲಕ್ಷವಾದರೆ, ಈ ಬೈಕಿನ ಎಸ್ ಎಂಬ ಟಾಪ್ ರೂಪಾಂತರದ ಬೆಲೆಯು ರೂ.2.69 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಇದು ಹಾರ್ಲೆ-ಡೇವಿಡ್ಸನ್ ಕಂಪನಿಯ ಅತ್ಯಂತ ಕೈಗೆಟುವ ಬೈಕ್ ಇದಾಗಿದೆ.

Harley-Davidson X440

ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಬೈಕಿನಲ್ಲಿ ದೊಡ್ಡ ಮಸ್ಕಲರ್ ಫ್ಯೂಯಲ್ ಟ್ಯಾಂಕ್ ಮತ್ತು ನಯವಾದ ಟೇಲ್ ವಿಭಾಗದೊಂದಿಗೆ ಸುಂದರವಾಗಿ ಕಾಣುತ್ತದೆ. ಹೆಚ್ಚುವರಿಯಾಗಿ, ಈ ಬೈಕ್ ನ್ಯೂ-ರೆಟ್ರೊ ಲುಕ್ ನೀಡಲು ವೃತ್ತಾಕಾರದ ವಿನ್ಯಾಸದ ಅಂಶಗಳನ್ನು ಒಳಗೊಂಡಿದೆ. ಈ ಹೊಸ ಹಾರ್ಲೆ-ಡೇವಿಡ್ಸನ್ X440ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿವೆ.

ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, ಈ ಬೈಕಿನಲ್ಲಿ ಸಿಂಗಲ್-ಸಿಲಿಂಡರ್, ಆಯಿಲ್-ಕೂಲ್ಡ್, 440cc ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಸರಿಸುಮಾರು 27 bhp ಪವರ್ ಮತ್ತು 38 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

Harley-Davidson X440

ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಮಸ್ಟರ್ಡ್ ಡೆನಿಮ್, ಮೆಟಾಲಿಕ್ ಡಾರ್ಕ್ ಸಿಲ್ವರ್, ಮೆಟಾಲಿಕ್ ಥಿಕ್ ಸಿಲ್ವರ್ ಮತ್ತು ಮ್ಯಾಟ್ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳ ಈ ಬಣ್ಣಗಳಲ್ಲಿ, ಮೊದಲ ಮತ್ತು ಕೊನೆಯ ಬಣ್ಣಗಳು ಕ್ರಮವಾಗಿ ಬೇಸ್ ಮತ್ತು ಟಾಪ್-ಸ್ಪೆಕ್ ಮಾದರಿಗಳಿಗೆ ಪ್ರತ್ಯೇಕಿಸುತ್ತದೆ. ಈ ಬೈಕ್ ಆಕರ್ಷಕ ಬಣ್ಣಗಳ ಆಯ್ಕೆಯು ಗ್ರಾಹಕರನ್ನು ಸೆಳೆಯುತ್ತದೆ.

ಹೊಸ ಬೈಕಿನಲ್ಲಿ LED ಲೈಟಿಂಗ್, ಆಂಬಿಯೆಂಟ್ ಲೈಟ್ ಸೆನ್ಸರ್‌ನೊಂದಿಗೆ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಹೆಚ್ಚಿನ ಫೀಚರ್ಸ್ ಗಳನ್ನು ಹೊಂದಿವೆ. ಇತರ ಗಮನಾರ್ಹ ಫೀಚರ್ಸ್ ಗಳು ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್, ಮ್ಯೂಸಿಕ್ ಕಂಟ್ರೋಲ್ ಮತ್ತು ಗೇರ್ ಸ್ಥಾನವನ್ನು ಪ್ರದರ್ಶಿಸುತ್ತದೆ. ಕೈಗೆಟುಕುವ ಬೆಲೆ ಮತ್ತು ಆಕರ್ಷಕ ವಿನ್ಯಾಸದ ಮೂಲಕ ಈ ಬೈಕ್ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತದೆ.

More from DriveSpark

Article Published On: Wednesday, July 5, 2023, 11:15 [IST]
English summary
New harley davidson x440 bookings open in india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+