ಸದ್ದಿನಲ್ಲೇ ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸಲು ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬಿಡುಗಡೆ

ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ (Royal Enfield) ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಸಂಸ್ಥೆ ರಾಯಲ್ ಎನ್‍ಫೀಲ್ಡ್ ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 (Royal Enfield Bullet 350) ಬೈಕ್ ಅನ್ನು ಬಿಡುಗಡೆಗೊಳಿಸಿದೆ.

ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಮಿಲಿಟರಿ ರೆಡ್ ಮತ್ತು ಬ್ಲ್ಯಾಕ್, ಸ್ಟ್ಯಾಂಡರ್ಡ್ ಮರೂನ್ ಮತ್ತು ಬ್ಲಾಕ್ ಮತ್ತು ಬ್ಲ್ಯಾಕ್ ಗೋಲ್ಡ್ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನ ಪ್ರಾರಂಭಿಕ ಬೆಲೆಯು ರೂ.1.73 ಲಕ್ಷವಾಗಿದೆ.

Royal Enfield Bullet 350

ಇನ್ನು ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನ ಸ್ಟ್ಯಾಂಡರ್ಡ್ ಆವೃತ್ತಿಯ ಬೆಲೆಯು ರೂ.1.97 ಲಕ್ಷವಾದರೆ, ಟಾಪ್-ಸ್ಪೆಕ್ ಬ್ಲ್ಯಾಕ್ ಗೋಲ್ಡ್ ರೂಪಾಂತರದ ಬೆಲೆಯು ರೂ.2.16 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. 2023ರ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಹಿಂದಿನ ಮಾದರಿಯಂತೆ ಕಾಣಿಸುತ್ತಿದೆ. ಆದರೆ ಬ್ರ್ಯಾಂಡ್ ಕೆಲವು ಗಮನಾರ್ಹವಾದ ನವೀಕರಣಗಳನ್ನು ಮಾಡಿದೆ, ಅದು ನಿರೀಕ್ಷಿಸಿದಷ್ಟು ಸ್ಪಷ್ಟವಾಗಿಲ್ಲ.

ಈ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಜೆ-ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ, ಇದೇ ಪ್ಲಾಟ್‌ಫಾರ್ಮ್ ಅನ್ನು ಕ್ಲಾಸಿಕ್ 350, ಹಂಟರ್ 350 ಮತ್ತು ಮೆಟಿಯೊರ್ 350 ಬೈಕ್ ಗಳು ಕೂಡ ಆಧರಿಸಿದೆ. ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನಲ್ಲಿ 349 ಸಿಸಿ, ಏರ್-ಆಯಿಲ್ ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ.

Royal Enfield Bullet 350

ಈ ಎಂಜಿನ್ 20 bhp ಪವರ್ ಮತ್ತು 27 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ರಾಯಲ್ ಎನ್‌ಫೀಲ್ಡ್ ಈ ಎಂಜಿನ್ ಅನ್ನು ಮರುಪರಿಶೀಲಿಸಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಚಾರ್ಜ್ಡ್ ಶಾಕ್ ಅಬ್ಸಾರ್ಬರ್‌ಗಳನ್ನು ಹೊದಿದೆ.

ಇನ್ನು ಪ್ರಮುಖವಾಗಿ ಸುರಕ್ಷತೆಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ. ಜೊತೆಗೆ ಡಿಸ್ಕ್ ಮತ್ತು ಡ್ರಮ್ ಸೆಟಪ್ ಅನ್ನು ರೂಪಾಂತರವನ್ನು ಅವಲಂಬಿಸಿರುತ್ತದೆ. ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನ ಸಾಂಪ್ರದಾಯಿಕ ವಿನ್ಯಾಸದಲ್ಲಿ ಬದಲಾವಣೆಗಳನ್ನು ಮಾಡಿಲ್ಲ. ಇದು ಸಿಂಗಲ್-ಪೀಸ್ ಸೀಟ್ ಮತ್ತು ವೃತ್ತಾಕಾರದ ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ನೊಂದಿಗೆ ಬರುವುದನ್ನು ಮುಂದುವರೆಸಿದೆ ಆದರೆ ಇದು ಸಣ್ಣ ಹುಡ್ ಅನ್ನು ಹೊಂದಿರುವುದಿಲ್ಲ.

Royal Enfield Bullet 350

ಈ ಬೈಕಿನ ಫ್ಯೂಯಲ್ ಟ್ಯಾಂಕ್ ಪ್ರಸಿದ್ಧ ಮದ್ರಾಸ್ ಸ್ಟ್ರೈಪ್ಸ್ ಮತ್ತು ಲೋಹದಿಂದ ಮಾಡಿದ ಬುಲೆಟ್ 350 ಬ್ಯಾಡ್ಜ್ ಅನ್ನು ಹೊಂದಿದೆ. ಇನ್ನು ಈ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕಿನಲ್ಲಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಕ್ಲಾಸಿಕ್ 350 ನೊಂದಿಗೆ ಹಂಚಿಕೊಳ್ಳಲಾಗಿದೆ ಮತ್ತು ಅನಲಾಗ್ ಸ್ಪೀಡೋಮೀಟರ್ ಮತ್ತು ಸಣ್ಣ ಡಿಜಿಟಲ್ ಡಿಸ್ಪ್ಲೇಯಂತಹ ಮಾಹಿತಿಯನ್ನು ತೋರಿಸುತ್ತದೆ ಅದು ಸರ್ವಿಸ್ ಅಲರ್ಟ್, ಓಡೋಮೀಟರ್, ಇಕೋ ಸೂಚಕ ಮತ್ತು ಇಂಧನ ಗೇಜ್ ಮಾಹಿತಿಯನ್ನು ಪ್ರದರ್ಶಿಸುತ್ತದೆ.

ಹೊಸ ಬುಲೆಟ್ 350 ಬೈಕ್ 195 ಕೆಜಿ ತೂಕವನ್ನು ಹೊಂದಿದೆ. ಇದು ಹಿಂದಿನ ಮಾದರಿಯ ಎಲೆಕ್ಟ್ರಿಕ್-ಸ್ಟಾರ್ಟ್ ಆವೃತ್ತಿಗಿಂತ ಸುಮಾರು ನಾಲ್ಕು ಕಿಲೋಗ್ರಾಂಗಳಷ್ಟು ಭಾರವಾಗಿರುತ್ತದೆ. ಇನ್ನು ಈ ಬೈಕಿನ ಗ್ರೌಂಡ್ ಕ್ಲಿಯರೆನ್ಸ್ 170 ಎಂಎಂ ಮತ್ತು ಸೀಟ್ ಎತ್ತರ 805 ಎಂಎಂ ಆಗಿದೆ. ಇನ್ನು ಈ ಬೈಕ್ ಇಂಧನ ಟ್ಯಾಂಕ್ ಸಾಮರ್ಥ್ಯವನ್ನು 13 ಲೀಟರ್ ಎಂದು ನಿಗದಿಪಡಿಸಲಾಗಿದೆ. ಹೊಸ ಬುಲೆಟ್ 350 ಬೈಕಿಗೆ ಭಾರತದಲ್ಲಿ ಯಾವುದೇ ನೇರ ಪ್ರತಿಸ್ಪರ್ಧಿಯನ್ನು ಹೊಂದಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಶಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.

More from DriveSpark

Article Published On: Friday, September 1, 2023, 13:46 [IST]
English summary
New royal enfield bullet 350 launched in india price features details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+