ಬುಕ್ಕಿಂಗ್‌ನಲ್ಲಿ ಸುನಾಮಿ: ಟ್ರಯಂಫ್ ಸ್ಪೀಡ್ 400 ಬೈಕಿಗೆ ಭರ್ಜರಿ ಡಿಮ್ಯಾಂಡ್: ರಾಯಲ್ ಎನ್‌ಫೀಲ್ಡ್‌ಗೆ ನಡುಕ
ಬಜಾಜ್ ಜೊತೆಗೆ ಟ್ರಯಂಫ್ ಮೋಟಾರ್‌ಸೈಕಲ್ ಇತ್ತೀಚೆಗೆ ಭಾರತದಲ್ಲಿ ಬಹು ನಿರೀಕ್ಷಿತ ಟ್ರಯಂಫ್ ಸ್ಪೀಡ್ 400 ಬೈಕ್ ಅನ್ನು ಬಿಡುಗಡೆಗೊಳಿಸಿತು. ಬಿಡುಗಡೆಯಾದ 10 ದಿನಗಳಲ್ಲಿ, ಟ್ರಯಂಫ್ ಸ್ಪೀಡ್ 400 (Triumph Speed 400) ಜೊತೆಗೆ ಸ್ಕ್ರ್ಯಾಂಬ್ಲರ್ 400 ಎಕ್ಸ್ (Scrambler 400 X) 10,000 ಬುಕಿಂಗ್‌ಗಳನ್ನು ಪಡೆದು ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಸಂಚಲನವನ್ನು ಮೂಡಿಸುತ್ತಿದೆ.
ಭಾರತದಲ್ಲಿ, ಟ್ರಯಂಫ್ ಸ್ಪೀಡ್ 400 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.33 ಲಕ್ಷವಾಗಿದೆ. ಈ ಬೆಲೆಯು ಅನೇಕರು ನಿರೀಕ್ಷಿಸಿದ್ದಕ್ಕಿಂತ ಕಡಿಮೆಯಾಗಿದೆ. ಈ ಮೊದಲ 10,000 ಗ್ರಾಹಕರು ಮೋಟಾರ್‌ಸೈಕಲ್ ಅನ್ನು ವಿಶೇಷ ಪರಿಚಯಾತ್ಮಕ ಬೆಲೆಗೆ ಪಡೆಯುತ್ತಾರೆ. ಪ್ರಸ್ತುತ, ಟ್ರಯಂಫ್ ಸ್ಪೀಡ್ 400 ಬೈಕ್ ಅನ್ನು ಖರೀದಿಸಲು ಬಯಸುವ ಗ್ರಾಹಕರು ವಾಹನ ತಯಾರಕರ ಅಧಿಕೃತ ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಟೋಕನ್ ಮೊತ್ತ ರೂ. 2,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಹೊಸ ಟ್ರಯಂಫ್ ಸ್ಪೀಡ್ 400 ಬೈಕ್ ಬಗ್ಗೆ ಹೇಳುವುದಾದರೆ, ಈ ಬೈಕ್ ತನ್ನ 'ಟಿಯರ್-ಡ್ರಾಪ್' ಆಕಾರದ ಫ್ಯೂಯಲ್ ಟ್ಯಾಂಕ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಟರ್ನ್ ಇಂಡಿಕೇಟರ್‌ಗಳು, ರಿಯರ್-ವ್ಯೂ ಮಿರರ್‌ಗಳು ಮತ್ತು ಎಲ್‌ಇಡಿ ಟೈಲ್ ಲ್ಯಾಂಪ್‌ಗಳಂತಹ ವೃತ್ತಾಕಾರದ ವಿನ್ಯಾಸದ ಅಂಶಗಳೊಂದಿಗೆ ಆಕರ್ಷಕವಾದ ನಿಯೋ-ರೆಟ್ರೊ ಥೀಮ್ ಅನ್ನು ಹೊಂದಿದೆ. ಇನ್ನು ಈ ಹೊಸ ಬೈಕ್ ಸಾಕಷ್ಟು ಟ್ರಯಂಫ್ ವಿನ್ಯಾಸದ ಅಂಶಗಳನ್ನು ಸಹ ಹೊಂದಿದೆ.
ಟ್ರಯಂಫ್ ಸ್ಪೀಡ್ 400 ಬೈಕಿನಲ್ಲಿ 398.15cc, ಲಿಕ್ವಿಡ್-ಕೂಲ್ಡ್, 4-ವಾಲ್ವ್, DOHC, ಓವರ್‌ಸ್ಕ್ವೇರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8,000rpm ನಲ್ಲಿ 39.5bhp ಮತ್ತು 6,500rpm ನಲ್ಲಿ 37.5Nm ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ ಸ್ಪೀಡ್ ಗೇರ್‌ಬಾಕ್ಸ್ ಅನ್ನು ಸಹ ಹೊಂದಿದೆ.

ಹಾರ್ಡ್‌ವೇರ್‌ಗೆ ಸಂಬಂಧಿಸಿದಂತೆ, ಟ್ರಯಂಫ್ ಸ್ಪೀಡ್ 400 ಬೈಕಿನಲ್ಲಿ ಬೋಲ್ಟ್-ಆನ್ ರಿಯರ್ ಸಬ್‌ಫ್ರೇಮ್ ಮತ್ತು ಟ್ವಿನ್-ಸೈಡೆಡ್ ಅಲ್ಯೂಮಿನಿಯಂ ಸ್ವಿಂಗರ್ಮ್‌ನೊಂದಿಗೆ ಫ್ರೇಮ್ ಅನ್ನು ಹೊಂದಿದೆ. ಈ ಬೈಕಿನ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 43mm USD ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಗ್ಯಾಸ್-ಚಾರ್ಜ್ಡ್ ಮೊನೊಶಾಕ್‌ನಿಂದ ನೋಡಿಕೊಳ್ಳಲಾಗುತ್ತದೆ.
ಟ್ರಯಂಫ್ ಸ್ಪೀಡ್ 400 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ. ಇನ್ನು ಈ ಬೈಕಿನಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ABS ಸಹಾಯವನ್ನು ಸಹ ಹೊಂದಿದೆ.

ಈ ಹೊಸ ಬೈಕಿನಲ್ಲಿ 17 ಇಂಚಿನ ಅಲಾಯ್ ವೀಲ್ಸ್ ಪಡೆದಿದೆ. ಈ ಬೈಕ್, ಫ್ರಂಟ್ 110/70 ಹಾಗೂ ರೇರ್ 150/60 ಅಳತೆಯ ಮೆಟ್ಜೆಲರ್ Sportec M9RR ಟೈಯರ್ಸ್ ಹೊಂದಿರುವುದು ವಿಶೇಷವಾಗಿದೆ. ಇನ್ನು ಟ್ರಯಂಫ್ ಕಂಪನಿಯೊಂದಿಗೆ ಬಜಾಬ್ ಕಂಪನಿ ಪಾಲುದಾರಿಕೆ ಹೊಂದಿರುವುದು ಗೊತ್ತೇ ಇದೆ.
ಮಹಾರಾಷ್ಟ್ರದ ಚಕನ್ ನಲ್ಲಿ ಬಜಾಬ್ ಆಟೋ ನೂತನವಾಗಿ ನಿರ್ಮಿಸಿರುವ 'ಚೇತಕ್ 2' ಎಂಬ ಹೆಸರಿನ ತಯಾರಿಕಾ ಘಟಕದಲ್ಲಿ ಟ್ರಯಂಫ್ ಸ್ಪೀಡ್ 400, ಸ್ಕ್ರ್ಯಾಂಬ್ಲರ್ 400 X ಬೈಕ್ ನ 5000 ಯುನಿಟ್ ಗಳನ್ನು ಉತ್ಪಾದಿಸಲಾಗುತ್ತದೆ. ಈ ಪ್ಲಾಂಟ್ 25,000 ಬೈಕ್ ರೆಡಿ ಮಾಡುವ ಸಾಮರ್ಥ್ಯವನ್ನು ಪಡೆದಿದೆ. ಟ್ರಯಂಫ್ ಕಂಪನಿ ಇವೆರೆಡು ಬೈಕ್‌ಗಳಿಗೆ ಎರಡು ವರ್ಷಗಳ ಅನ್-ಲಿಮಿಟೆಡ್ ಮೈಲೇಜ್ ವಾರಂಟಿಯನ್ನು ನೀಡುತ್ತಿದೆ.


Click it and Unblock the Notifications








