125 ಕಿ.ಮೀ ರೇಂಜ್ ನೀಡುವ ಒಕಾಯ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಕೆಲವು ದಿನಗಳ ಹಿಂದೆ ಟೀಸರ್‌ಗಳನ್ನು ಬಿಡುಗಡೆ ಮಾಡಿದ ನಂತರ, ಒಕಾಯ ಇವಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಒಕಾಯ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.99,999 ಆಗಿದೆ

ಹೊಸ ಒಕಾಯ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಮೆಟಾಲಿಕ್ ಬ್ಲಾಕ್, ಮೆಟಾಲಿಕ್ ಸಯಾನ್, ಮ್ಯಾಟ್ ಗ್ರೀನ್, ಮೆಟಾಲಿಕ್ ಗ್ರೇ, ಮೆಟಾಲಿಕ್ ಸಿಲ್ವರ್ ಮತ್ತು ಮೆಟಾಲಿಕ್ ವೈಟ್ ಎಂಬ ಆರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಹೊಸ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ತಯಾರಕರು ಹೊಂದಿರುವ 550+ ಔಟ್‌ಲೆಟ್‌ಗಳ ಮೂಲಕ ಮಾರಾಟ ಮಾಡಲಾಗುತ್ತದೆ.ಒಕಾಯಾ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಸಿಂಗಲ್ ಚಾರ್ಜ್‌ನಲ್ಲಿ 125 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 3.53 kWh ಗಾತ್ರವನ್ನು ಹೊಂದಿರುವ ಡ್ಯುಯಲ್ Li-ion LFP ಬ್ಯಾಟರಿ ಪ್ಯಾಕ್‌ಗಳಿವೆ.

ಒಕಾಯ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಬ್ಯಾಟರಿಯು ವಾಟರ್ ಫ್ರೋಫ್ ಮತ್ತು ಧೂಳು-ನಿರೋಧಕವಾಗಿದೆ. ಇನ್ನು ವಿಶೇಷವೆಂದರೆ ಬ್ಯಾಟರಿ ಅವಧಿಯನ್ನು ವಿಸ್ತರಿಸಲು ಬದಲಾಯಿಸಬಹುದಾದ ತಂತ್ರಜ್ಞಾನದೊಂದಿಗೆ ಬರುತ್ತದೆ. ಇದು ಸಂಪೂರ್ಣವಾಗಿ ಚಾರ್ಜ್ ಆಗಲು ಸುಮಾರು 4-5 ಗಂಟೆಗಳ ಅವಧಿಯನ್ನು ತೆಗೆದುಕೊಳ್ಳುತ್ತದೆ. Okaya EV ಬ್ಯಾಟರಿ ಮತ್ತು ಮೋಟರ್‌ನಲ್ಲಿ 3-ವರ್ಷದ ವಾರಂಟಿಯನ್ನು ನೀಡುತ್ತಿದೆ. ಫಾಸ್ಟ್ F3 ಲೋಡಿಂಗ್ ಸಾಮರ್ಥ್ಯದ ಆಧಾರದ ಮೇಲೆ ಟಾಪ್ ಸ್ಪೀಡ್ 70 ಆಗಿರುತ್ತದೆ. ಇದು 1200W ಮೋಟಾರ್ ಡೆಲಿವರಿಂಗ್ ಪೀಕ್‌ನಿಂದ ಚಾಲಿತವಾಗಿದೆ.

ಹೊಸ ಒಕಾಯ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಫೀಚರ್ಸ್ ಗಳ ಬಗ್ಗೆ ಹೇಳುವುದಾದರೆ, ಇದರಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ರಿಜನರೇಟಿವ್ ಬ್ರೇಕಿಂಗ್, ರಿವರ್ಸ್ ಮೋಡ್ ಮತ್ತು ಪಾರ್ಕಿಂಗ್ ಮೋಡ್ ಅನ್ನು ಹೊಂದಿದೆ. ಇನ್ನು ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್‌ಗಳನ್ನು ನೀಡಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಉತ್ತಮ ಸಸ್ಪೆಕ್ಷನ್ ಸೆಟಪ್ ಅನ್ನು ಹೊಂದಿದೆ.

ಹೊಸದಾಗಿ ಬಿಡುಗಡೆಯಾದ ಫಾಸ್ಟ್ ಎಫ್3 ಸ್ಕೂಟರ್ ಬಗ್ಗೆ ಒಕಾಯಾ ಎಲೆಕ್ಟ್ರಿಕ್ ವೆಹಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಅನ್ಶುಲ್ ಗುಪ್ತಾ ಮಾತನಾಡಿ, "ಒಕಾಯಾ ಫಾಸ್ಟ್ ಎಫ್3 ಕ್ರಾಂತಿಕಾರಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನವಾಗಿದ್ದು, ಭಾರತದಲ್ಲಿ ಉತ್ತಮ ಗುಣಮಟ್ಟದ ಮತ್ತು ವಿಶ್ವಾಸಾರ್ಹ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಪರಿಚಯಿಸಿದ್ದೇವೆ. ಇದು ಬಳಕೆದಾರರಿಗೆ ಆರಾಮದಾಯಕ ಮತ್ತು ಸುರಕ್ಷಿತ ಸವಾರಿಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ ಮತ್ತು ಇತ್ತೀಚಿನ ತಂತ್ರಜ್ಞಾನ ಮತ್ತು ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದೆ.

ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದೆ. Faast F3 ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಗೇಮ್ ಚೇಂಜರ್ ಆಗಲಿದೆ ಮತ್ತು ಇವಿ ಜಾಗದಲ್ಲಿ ನಮ್ಮ ಅಸ್ತಿತ್ವವನ್ನು ಇನ್ನಷ್ಟು ಬಲಪಡಿಸಲು ನಮಗೆ ಸಹಾಯ ಮಾಡುತ್ತದೆ ಎಂದು ನಮಗೆ ವಿಶ್ವಾಸವಿದೆ ಎಂದು ಹೇಳಿದರು. ಈ ಹೊಸ ಒಕಾಯ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರಲ್ಲಿ ಡ್ಯುಯಲ್ 110-130mm ಕಾಂಬಿ ಬ್ರೇಕ್‌ಗಳೊಂದಿಗೆ ಬರುತ್ತದೆ.

ಹೊಸ ಒಕಾಯ ಫಾಸ್ಟ್ ಎಫ್3 ಎಲೆಕ್ಟ್ರಿಕ್ ಸ್ಕೂಟರ್ ಕಳ್ಳತನವಾಗುವ ಟೆಕ್ಷನ್ ಕಡಿಮೆ ಮಾಡಬಹುದಾದ, ವೀಲ್ ಲಾಕ್ ವೈಶಿಷ್ಟ್ಯವನ್ನು ಹೊಂದಿದೆ. ಈ ಸ್ಕೂಟರ್‌ನಲ್ಲಿರುವ ವ್ಹೀಲ್ ಗಳು ಕಳ್ಳತನಕ್ಕೆ ಪ್ರಯತ್ನಿಸಿದರೆ ಅಥವಾ ಅದನ್ನು ಲಾಕ್ ಆಗಿರುವಾಗ ಯಾರಾದರೂ ತಳ್ಳಲು ಪ್ರಯತ್ನಿಸಿದರೆ ಆಟೋಮ್ಯಾಟಿಕ್ ಆಗಿ ಲಾಕ್ ಆಗುತ್ತದೆ, ಕದಿಯಲು ಹೆಚ್ಚು ಕಷ್ಟವಾಗುತ್ತದೆ ಮತ್ತು ಅತ್ಯಂತ ಸುರಕ್ಷಿತವಾಗಿರುತ್ತದೆ. ಇನ್ನು ಜಾಗತಿಕವಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಹೆಚ್ಚಿನ ಜನರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ.

ಇದರಿಂದ ಹಲವಾರು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಪಡಿಸುವ ಕಡೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ. ಇದರ ನಡುವೆ ಹೋಂಡಾ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಕಡೆ ಗಮನಹರಿಸುತ್ತಿದೆ. ಇನ್ನು ಭಾರತೀಯ ಮಾರುಕಟ್ಟೆಗೆ ಬಂದರೆ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯನ್ನು ಪಡೆದುಕೊಳುತ್ತಿದೆ. ಇಂಧನ ಬೆಲೆ ದುಬಾರಿಯಾಗಿರುವುದರಿಂದ ಹೆಚ್ಚಿನ ಜನರು ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ, ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದೆ.

More from DriveSpark

Article Published On: Friday, February 10, 2023, 13:28 [IST]
English summary
Okaya launched faast f3 electric scooter in india range price details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+