Ola S1X: ಕಡಿಮೆ ಬೆಲೆಗೆ ಓಲಾದಿಂದ ಹೊಸ 'ಎಸ್1ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್, ಘೋಷಣೆ?
ಭಾರತದಲ್ಲಿ ಓಲಾ (Ola) ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಅದರ ಎಸ್1 ಸರಣಿ ಸ್ಕೂಟರ್‌ಗಳಿಗೆ ಪ್ರತೇಕ ಅಭಿಮಾನಿ ಬಳಗವಿದೆ. ಇತ್ತೀಚೆಗೆ ರೂ.1.10 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಎಸ್1 ಏರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿ, ಗರಿಷ್ಠ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆದುಕೊಂಡು ದೊಡ್ಡಮಟ್ಟದಲ್ಲಿ ಸುದ್ದಿ ಮಾಡಿತ್ತು.
ಓಲಾ ಕಂಪನಿಯು ಎಸ್1 ಏರ್ ಸ್ಕೂಟರ್‌ಗಿಂತ ಅಗ್ಗವಾಗಿರುವ ಮತ್ತೊಂದು ನೂತನ ಎಲೆಕ್ಟ್ರಿಕ್ ಸ್ಕೂಟರ್ ಪರಿಚಯಿಸಲು ಸಜ್ಜಾಗಿದೆ ಎಂದು ವರದಿಯಾಗಿದೆ. ಎಸ್1ಎಕ್ಸ್ (S1X) ಹೆಸರಿನ ಹೊಸ ಸ್ಕೂಟರ್ ಅಭಿವೃದ್ಧಿಪಡಿಸುವ ಕಾರ್ಯದಲ್ಲಿ ಕಂಪನಿ ನಿರತವಾಗಿದೆ. ಇದು, ಬಿಡುಗಡೆಯಾದ ಮೇಲೆ ಓಲಾದ ಎಂಟ್ರಿ ಲೆವೆಲ್ ಮಾದರಿಯಾಗಲಿದ್ದು, ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಹುಡುಕುವ ಖರೀದಿದಾರರಿಗೆ ತುಂಬಾ ಅನುಕೂಲವಾಗಲಿದೆ.

ದೇಶೀಯ ಮಾರುಕಟ್ಟೆಯಲ್ಲಿ ಮುಂಬರಲಿರುವ ಎಸ್1ಎಕ್ಸ್, ಬೇರೆ ಕಂಪನಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿದೆ. ಪ್ರಮುಖವಾಗಿ 'ICE ಕಿಲ್ಲರ್' ಎಂದು ಓಲಾ ಕಂಪನಿಯೇ ಹೇಳಿಕೊಂಡಿದೆ. ಇದಕ್ಕೆ ಕಾರಣವು ಇದ್ದು, ಭಾರತದಲ್ಲಿ 125 ಸಿಸಿ ಪೆಟ್ರೋಲ್ ಚಾಲಿತ ಸ್ಕೂಟರ್‌ಗಳ ಬೆಲೆಯು ಸುಮಾರು ರೂ.1 ಲಕ್ಷ ಅಸುಪಾಸಿನಲ್ಲಿದೆ. ಈ ಎಸ್1ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಅದಕ್ಕಿಂತ ಕಡಿಮೆ ದರಕ್ಕೆ ಬರಲಿದ್ದು, ಬೆಲೆಗೆ ತಕ್ಕಂತೆಯೇ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ.
ಓಲಾ ಕಂಪನಿ ಬಹಿರಂಗಪಡಿಸಿರುವ ಚಿತ್ರಗಳನ್ನು ನೋಡಿದಾದ ಎಸ್1ಎಕ್ಸ್ ವಿನ್ಯಾಸ ಈಗಿರುವ ಎಸ್1 ಸರಣಿ ಸ್ಕೂಟರ್‌ಗಳಿಗೆ ಒಂದಷ್ಟು ಹೋಲಿಕೆಯಾಗುತ್ತದೆ. ನೂತನ ಎಸ್1ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ರೇಂಜ್ ಪ್ರಮುಖ ವಿಷಯವಾಗಲಿದ್ದು, ಇದು, ಸಂಪೂರ್ಣ ಚಾರ್ಜಿನಲ್ಲಿ 100 km ರೇಂಜ್ ನೀಡುವ ಸಾಧ್ಯತೆಯಿದೆ. ಆದರೆ, ಸದ್ಯಕ್ಕೆ ಈ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಕಳೆದ ಕೆಲವು ದಿನಗಳ ಹಿಂದೆ, ಲಾಂಚ್ ಆದ ಓಲಾ ಎಸ್1 ಏರ್ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಆಗಸ್ಟ್ 15ವರೆಗೆ ಗ್ರಾಹಕರು, ರೂ.1,09,999 ಬೆಲೆಯಲ್ಲಿ ಬುಕ್ಕಿಂಗ್ ಮಾಡಬಹುದು. ಆ ಬಳಿಕ, ರೂ.1,19,999 ದರವಿರುತ್ತದೆ. ಜುಲೈ 27ರಂದು ಈ ಸ್ಕೂಟರ್‌ಗಾಗಿ ಕಂಪನಿ ಆರ್ಡರ್ ತೆಗೆದುಕೊಳ್ಳುವುದನ್ನು ಆರಂಭಿಸಿತ್ತು. ಮಾಹಿತಿ ಪ್ರಕಾರ, ಒಂದು ವಾರ ಕಳೆಯುವುದರಲ್ಲಿ 50,000ಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡು ದಾಖಲೆ ನಿರ್ಮಿಸಿದೆ.
ಓಲಾ ಎಸ್1 ಏರ್ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮಾತನಾಡುವುದಾದರೆ, ಇದು, 3 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, ಹಬ್ ಮೋಟಾರ್ ಸಹಾಯದಿಂದ ಕಾರ್ಯನಿರ್ವಹಿಸುತ್ತದೆ. 6 hp ಗರಿಷ್ಠ ಪವರ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 90 kmph ಟಾಪ್ ಸ್ವೀಡ್ ಪಡೆಯಲಿದ್ದು, ಕೇವಲ 3.3 ಸೆಕೆಂಡುಗಳಲ್ಲಿ 0 - 40 kmph ವೇಗವನ್ನು ಹೊಂದಲಿದೆ.
ಈ ಓಲಾ ಎಸ್1 ಏರ್ ಸ್ಕೂಟರ್ ವೈಶಿಷ್ಟ್ಯಗಳ ಕುರಿತು ಹೇಳುವುದಾದರೆ, ಇದು, ಅತ್ಯಾಧುನಿಕ ಹೆಡ್‌ಲ್ಯಾಂಪ್, 7 ಇಂಚಿನ TFT ಸ್ಕ್ರೀನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ರಿವರ್ಸ್ ಮೋಡ್, OTA ಅಪ್‌ಡೇಟ್ಸ್, ಮ್ಯೂಸಿಕ್ ಪ್ಲೇಬ್ಯಾಕ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದರೊಟ್ಟಿಗೆ ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ಸ್ ಎಂಬ ಮೂರು ರೈಡಿಂಗ್ ಮೋಡ್ ಒಳಗೊಂಡಿದೆ.
ನಿಯಾನ್, ಸ್ಟೆಲ್ಲರ್ ಬ್ಲೂ, ಪೊರ್ಚೆಲೈನ್ ವೈಟ್, ಕೋರಲ್ ಗ್ಲಾಮ್ ಜೊತೆಗೆ ಐದು ಬಣ್ಣದ ಆಯ್ಕೆಯಲ್ಲಿ ಓಲಾ ಎಸ್1 ಏರ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಲಭ್ಯವಿದೆ. ಫ್ರಂಟ್ ಟೆಲಿಸ್ಕೋಪಿಕ್ ಪೋರ್ಕ್ಸ್, ರೇರ್ ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಹೊಂದಿದ್ದು, ಬೆಲೆ ಕಡಿಮೆಯಿರುವುದರಿಂದ ಎಸ್1 ಪ್ರೊ ರೀತಿಯಲ್ಲಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿಲ್ಲ. ಕೇವಲ ಡ್ರಮ್ ಬೇಕ್ ಆಯ್ಕೆಯನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.
Source: TOI Auto


Click it and Unblock the Notifications








