ಭಾರತದಲ್ಲಿ ಕ್ರಾಂತಿ ಮಾಡಿದ ರಿವೋಲ್ಟ್ RV400 ಎಲೆಕ್ಟ್ರಿಕ್ ಬೈಕ್ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯನ್ನು ಪಡೆದುಕೊಳ್ಳುತಿದೆ. ಜನಪ್ರಿಯ ದ್ವಿಚಕ್ರ ವಾಹನ ಕಂಪನಿಗಳು ಎಲೆಕ್ಟ್ರಿಕ್ ದಿಚಕ್ರ ವಾಹನಗಳ ಉತ್ಪಾದನೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತಿದೆ. ಹಲವು ಹೊಸ ಕಂಪನಿಗಳು ಎಲೆಕ್ಟ್ರಿಕ್ ವಾಹನ ವಿಭಾಗವನ್ನು ಪ್ರವೇಶೀಸಲಿದೆ. ಎಲೆಕ್ಟ್ರಿಕ್ ಬೈಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ರಿವೋಲ್ಟ್ ಕಂಪನಿಯು ಇ-ಕಾಮರ್ಸ್ ಮಾರುಕಟ್ಟೆ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ.

ಎಲೆಕ್ಟ್ರಿಕ್ ಬೈಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ರಿವೋಲ್ಟ್ ಕಂಪನಿಯು ತನ್ನ RV400 ಎಲೆಕ್ಟ್ರಿಕ್ ಬೈಕ್ ಅನ್ನು ಬುಕ್ ಮಾಡುವ ಸಲುವಾಗಿ ಇ-ಕಾಮರ್ಸ್ ಮಾರುಕಟ್ಟೆ ಸ್ಥಳವಾದ ಫ್ಲಿಪ್‌ಕಾರ್ಟ್‌ನೊಂದಿಗೆ ತನ್ನ ಸಹಯೋಗವನ್ನು ಘೋಷಿಸಿದೆ. ಫ್ಲಿಪ್‌ಕಾರ್ಟ್‌ನ ವ್ಯಾಪಕ ವ್ಯಾಪ್ತಿಯು, ಗ್ರಾಹಕರ ಒಳನೋಟಗಳು ಮತ್ತು ಆನ್‌ಲೈನ್ ಮಾರುಕಟ್ಟೆ ಅನುಭವದ ಮೂಲಕ, ರಿವೋಲ್ಟ್ ತನ್ನ ಗ್ರಾಹಕರಿಗೆ ತನ್ನ ಎಲೆಕ್ಟ್ರಿಕ್ ಬೈಕ್‌ಗಾಗಿ ತಡೆರಹಿತ ಖರೀದಿ ಅನುಭವವನ್ನು ನೀಡಲು ಸಾಧ್ಯವಾಗುತ್ತದೆ.

Revolt RV400

ರಿವೋಲ್ಟ್ RV400 (Revolt RV400) ಬೈಕ್ ಫ್ಲಿಪ್‌ಕಾರ್ಟ್‌ನಲ್ಲಿ 1,38,950 ರೂಗಳ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ ಮತ್ತು ಗ್ರಾಹಕರು ಇ-ಕಾಮರ್ಸ್ ವೆಬ್‌ಸೈಟ್‌ನಲ್ಲಿ ವಿಶೇಷ ಕೊಡುಗೆಗಳು ಸೇರಿದಂತೆ ವಿಶೇಷ ಪ್ರಯೋಜನಗಳನ್ನು ಪಡೆಯಬಹುದು. ಹೊಸ ಈಗ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿರುವ RV400 ಎಲೆಕ್ಟ್ರಿಕ್ ಮೋಟಾರ್‌ಸೈಕಲ್, 5 kW ಮೋಟಾರ್‌ನೊಂದಿಗೆ 3 kWh ಬ್ಯಾಟರಿಯಲ್ಲಿ ಚಲಿಸುತ್ತದೆ.

ಈ ಹೊಸ ರಿವೋಲ್ಟ್ RV400 ಬೈಕ್ 85 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇಕೋ ಮೋಡ್‌ನಲ್ಲಿ 150 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಈ ಹೊಸ ರಿವೋಲ್ಟ್ ಎಲೆಕ್ಟ್ರಿಕ್ ಬೈಕಿನ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ USD ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಒಳಗೊಂಡಿದೆ.

ಇನ್ನು ಈ ಹೊಸ ರಿವೋಲ್ಟ್ RV400 ಎಲೆಕ್ಟಿಕ್ ಬೈಕಿನ ಸುರಕ್ಷತೆಯಲ್ಲಿ ಪ್ರಾಮುಖ್ಯತೆಯನ್ನು ವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗ ಮತ್ತು ಹಿಂಭಾಗದ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ. ಇನ್ನು ಈ ಹೊಸ ರಿವೋಲ್ಟ್ RV400 ಬೈಕ್ 4.5 ಗಂಟೆಗಳಲ್ಲಿ 0 ರಿಂದ 100 ಪ್ರತಿಶತದಷ್ಟು ಚಾರ್ಜ್ ಮಾಡುತ್ತದೆ. ಹೊಸ ರಿವೋಲ್ಟ್ RV400 ಎಲೆಕ್ಟಿಕ್ ಬೈಕ್ ಉತ್ತಮ ಪರ್ಫಾಮೆನ್ಸ್ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತಿದೆ.

ರಟ್ಟನ್ ಎಂಟರ್‌ಪ್ರೈಸ್ ಲಿಮಿಟೆಡ್‌ನ ಅಧ್ಯಕ್ಷೆ ಅಂಜಲಿ ರತ್ತನ್ ಅವರು ಮಾತನಾಡಿ, ಫ್ಲಿಪ್‌ಕಾರ್ಟ್‌ನೊಂದಿಗೆ ಅದರ ಪ್ಲಾಟ್‌ಫಾರ್ಮ್‌ನಲ್ಲಿ ರಿವೋಲ್ಟ್ ಮೋಟಾರ್ಸ್ ಮಾರಾಟಕ್ಕೆ ಪಾಲುದಾರರಾಗಲು ನಾವು ಉತ್ಸುಕರಾಗಿದ್ದೇವೆ. ಈ ಸಹಯೋಗವು ಪರಿಸರ ಪ್ರಜ್ಞೆಯ ಗ್ರಾಹಕರನ್ನು ತಲುಪಲು ಮತ್ತು ಅವರಿಗೆ ನಿಜವಾದ ಪರಿವರ್ತಕ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅನ್ನು ನೀಡಲು ನಮಗೆ ಅನುಮತಿಸುತ್ತದೆ.

ಫ್ಲಿಪ್‌ಕಾರ್ಟ್‌ನ ಪರಿಣತಿ ಮತ್ತು ವ್ಯಾಪ್ತಿಯೊಂದಿಗೆ, ಈ ಪಾಲುದಾರಿಕೆಯು ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಯನ್ನು ವೇಗಗೊಳಿಸುತ್ತದೆ ಮತ್ತು ಭಾರತ ಮತ್ತು ಅದರಾಚೆ ಸುಸ್ಥಿರ ಚಲನಶೀಲತೆಯ ಕ್ರಾಂತಿಯನ್ನು ಹೆಚ್ಚಿಸುತ್ತದೆ ಎಂದು ನಾವು ನಂಬುತ್ತೇವೆ ಎಂದು ಹೇಳಿದರು. ದ್ವಿಚಕ್ರ ವಾಹನ ಬ್ರ್ಯಾಂಡ್ ಅನ್ನು 2022ರ ನವೆಂಬರ್ ತಿಂಗಳಿನಲ್ಲಿ ರಟ್ಟನ್ ಇಂಡಿಯಾ ಎಂಟರ್‌ಪ್ರೈಸಸ್ ಲಿಮಿಟೆಡ್ ಸ್ವಾಧೀನಪಡಿಸಿಕೊಂಡಿತು.

ತ್ತೀಚಿನ ಸುದ್ದಿಗಳಲ್ಲಿ, ರಿವೋಲ್ಟ್‌ನ RV400 ಬೈಕ್‌ಗಳನ್ನು ಕೊಚ್ಚಿ ಪೊಲೀಸ್ ಇಲಾಖೆಯ ಫ್ಲೀಟ್‌ಗೆ ಸೇರಿಸಲಾಗಿದೆ . ಈ ವರ್ಷದ ಮಾರ್ಚ್‌ನಲ್ಲಿ, ಕಂಪನಿಯು ರಾಯ್‌ಪುರ, ವಾಪಿ, ಬಹದ್ದೂರ್‌ಗಢ, ಮುಂಬೈ, ಔರಂಗಾಬಾದ್, ಭುವನೇಶ್ವರ್, ಕೋಟಾ, ಆಗ್ರಾ, ಝಾನ್ಸಿ, ಮೀರತ್, ಸೂರತ್, ಡೆಹ್ರಾಡೂನ್, ಗಾಜಿಯಾಬಾದ್ ಮತ್ತು ಫರಿದಾಬಾದ್‌ನಂತಹ ಭಾರತದ ವಿವಿಧ ನಗರಗಳಲ್ಲಿ 15 ಹೊಸ ಡೀಲರ್‌ಶಿಪ್‌ಗಳೊಂದಿಗೆ ತನ್ನ ಅಸ್ತಿತ್ವವನ್ನು ವಿಸ್ತರಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

More from DriveSpark

Article Published On: Friday, August 11, 2023, 19:03 [IST]
English summary
Revolt rv400 electric bike now available on flipkart details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+