ಭಾರತದಿಂದ ಬ್ರಿಟನ್‌ಗೆ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650 ರಫ್ತು ಪ್ರಾರಂಭ

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ರಾಯಲ್ ಎನ್‌ಫೀಲ್ಡ್ ತನ್ನ ಹೊಸ ಸೂಪರ್ ಮಿಟಿಯೊರ್ 650 ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳಿನಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ಬೈಕಿನ ಆರಂಭಿಕೆ ಬೆಲೆಯು ರೂ.3.48 ಲಕ್ಷವಾಗಿದೆ.

ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಸೂಪರ್ ಮಿಟಿಯೊರ್ 650 ಅನ್ನು ರಫ್ತು ಮಾಡಲು ಪ್ರಾರಂಭಿಸಿದೆ. ಭಾರತದಿಂದ ರಫ್ತಾಗಿರುವ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650 (Royal Enfield Super Meteor 650) ಮಾದರಿಯ ಮೊದಲ ಬ್ಯಾಚ್ ಇದಾಗಿದೆ. ಶೀಘ್ರದಲ್ಲೇ ಇತರ ಮಾರುಕಟ್ಟೆಗಳಿಗೂ ರಫ್ತು ಮಾಡುವ ಸಾಧ್ಯತೆಗಳಿದೆ. ದೇಶಿಯ ಮಾರುಕಟ್ಟೆಯಲ್ಲಿ ಈ ಬೈಕಿನ ವಿತರಣೆಯನ್ನು ಪ್ರಾರಂಭಿಸುವ ಮೊದಲು ರಫ್ತನ್ನು ಪ್ರಾರಂಭಿಸಿದೆ. ವರದಿಗಳ ಪ್ರಕಾರ, ಭಾರತ ಮತ್ತು ವಿದೇಶಗಳಲ್ಲಿ ಸೂಪರ್ ಮಿಟಿಯೊರ್ 650 ಬೈಕಿನ ವಿತರಣೆಯನ್ನು ಏಕಕಾಲದಲ್ಲಿ ಪ್ರಾರಂಭಿಸಲಿದೆ.

ಬ್ರಿಟನ್‌ಗೆ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650 ರಫ್ತು ಪ್ರಾರಂಭ

ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650 ಬೈಕ್ ಸ್ಟ್ಯಾಂಡರ್ಡ್ ಮತ್ತು ಟೂರರ್ ಎಂಬ ಎರಡೂ ರೂಪಾಂತರಗಳಲ್ಲಿ ಲಭ್ಯವಿದೆ. ಈ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650 ಬೈಕ್ 648cc, ಏರ್ ಮತ್ತು ಆಯಿಲ್-ಕೂಲ್ಡ್, ಪ್ಯಾರಲಲ್-ಟ್ವಿನ್ ಎಂಜಿನ್‌ ಅನ್ನು ಹೊಂದಿದೆ. ಇದೇ ಎಂಜಿನ್ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್ ಗಳಲ್ಲಿದೆ. ಕಂಪನಿಯು ಸೂಪರ್ ಮಿಟಿಯೊರ್‌ನ ಎಂಜಿನ್ ಮತ್ತು ಅದರ ಗೇರಿಂಗ್ ಅನ್ನು ನವೀಕರಿಸಿದೆ.

ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650 ಅದೇ 648cc, ಪ್ಯಾರಲಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 46.2 ಬಿಹೆಚ್‍ಪಿ ಪವರ್ ಮತ್ತು 52 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇನ್ನು ಆಯಾಮದಲ್ಲಿ, ಹೊಸ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650 ಬೈಕ್ 2260 mm ಉದ್ದ, 890 mm ಅಗಲ ಮತ್ತು 1155 mm ಎತ್ತರವನ್ನು ಹೊಂದಿದೆ.

ಇನ್ನು ಈ ಹೊಸ ಬೈಕ್ 1500 mm ವ್ಹೀಲ್ ಬೇಸ್ ಮತ್ತು 135 mm ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಇನ್ನು ಈ ಮಿಟಿಯೊರ್ 650 ಬೈಕ್ ಸೀಟ್ 740 ಎಂಎಂ ಎತ್ತರವನ್ನು ಹೊಂದಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650 ಬೈಕಿನ ಬಣ್ಣಗಳ ಆಯ್ಕೆಯ ಬಗ್ಗೆ ಹೇಳುವುದಾದರೆ, ಈ ಬೈಕಿನ ಸ್ಟ್ಯಾಂಡರ್ಡ್ ರೂಪಾಂತರವು ಆಸ್ಟ್ರಲ್ ಬ್ಲೂ, ಆಸ್ಟ್ರಲ್ ಬ್ಲಾಕ್, ಆಸ್ಟ್ರಲ್ ಗ್ರೀನ್, ಇಂಟರ್ ಸ್ಟೆಲ್ಲರ್ ಗ್ರೀನ್ ಮತ್ತು ಇಂಟರ್ ಸ್ಟೆಲ್ಲರ್ ಗೆರಿ.ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಇನ್ನು ಟೂರರ್ ರೂಪಾಂತರವು ಸೆಲೆಸ್ಟಿಯಲ್ ಬ್ಲೂ ಮತ್ತು ಸೆಲೆಸ್ಟಿಯಲ್ ರೆಡ್ ಎಂಬ ಎರಡೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಗ್ರಾಹಕರು ಇದರಲ್ಲಿ ತಮ್ಮ ಮೆಚ್ಚಿನ ಬಣ್ಣದ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ರಾಯಲ್ ಎನ್‌ಫೀಲ್ಡ್ ಕ್ರೂಸರ್ 650 ಸಿಸಿ ಬೈಕ್‌ನಲ್ಲಿ 19 ಇಂಚಿನ ಮುಂಭಾಗ ಮತ್ತು 16 ಇಂಚಿನ ಹಿಂಬದಿಯ ಚಕ್ರಗಳನ್ನು ಕ್ರಮವಾಗಿ 100/90 ಮತ್ತು 150/80 ಟೈರ್‌ಗಳೊಂದಿಗೆ ಅಳವಡಿಸಲಾಗಿದೆ. ಇನ್ನು ಪ್ರಮುಖವಾಗಿ ಬ್ರೇಕಿಂಗ್ ಸಿಸ್ಟಂಗಳ ಬಗ್ಗೆ ಹೇಳುವುದಾದರೆ, ಮುಂಭಾಗ ಮತ್ತು 300 ಎಂಎಂ ಹಿಂಭಾಗದ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.

ಇನ್ನು ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಸ್ಟ್ಯಾಂಡರ್ಡ್ ಫಿಟ್ಮೆಂಟ್ ಆಗಿ ಪಡೆಯುತ್ತದೆ. ರಾಯಲ್ ಎನ್‌ಫೀಲ್ಡ್ ಸೂಪರ್ ಮೀಟಿಯರ್ 650 ಬೈಕ್ ಯುಎಸ್‌ಡಿ ಫೋರ್ಕ್ ಸಸ್ಪೆಕ್ಷನ್ ಅನ್ನು ಹೊಂದಿದೆ. ಇನ್ನು ಈ ಬೈಕ್ ಸಂಪೂರ್ಣ ಎಲ್‌ಇಡಿ ಹೆಡ್‌ಲ್ಯಾಂಪ್ ಅನ್ನು ಒಳಗೊಂಡಿರುವ ಕಂಪನಿಯ ಮೊದಲ ಬೈಕ್ ಆಗಿದೆ. ಇದು ಒಟ್ಟು 241 ಕೆಜಿ ತೂಕದ ಅತ್ಯಂತ ಭಾರವಾದ ರಾಯಲ್ ಎನ್‌ಫೀಲ್ಡ್ ಬೈಕ್ ಆಗಿದೆ. ಈ ಕ್ರೂಸರ್ ಟ್ರಿಪ್ಪರ್ ನ್ಯಾವಿಗೇಷನ್ ಪಾಡ್ ಅನ್ನು ಸ್ಟ್ಯಾಂಡರ್ಡ್ ಆಗಿ ಪಡೆಯುತ್ತದೆ.

ಈ ಬೈಕ್ ಟಿಯರ್‌ಡ್ರಾಪ್ ಆಕಾರದ ಫ್ಯೂಯಲ್ ಟ್ಯಾಂಕ್, ವೃತ್ತಾಕಾರದ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ಎಂಜಿನ್ ಕೇಸಿಂಗ್‌ಗಳಲ್ಲಿ ಬ್ಲ್ಯಾಕ್ ಫಿನಿಶ್ ಮತ್ತು ಅಲ್ಯೂಮಿನಿಯಂ ಫಿನಿಶ್ಡ್ ಸ್ವಿಚ್ ಕ್ಯೂಬ್‌ಗಳನ್ನು ಒಳಗೊಂಡಿದೆ. ಸೊಲೊ ಟೂರರ್ ಥೀಮ್ ರಾಯಲ್ ಎನ್‌ಫೀಲ್ಡ್ ಸೂಪರ್ ಮೀಟಿಯರ್ 650 ಅಚ್ಚುಕಟ್ಟಾಗಿ ಬಾರ್-ಎಂಡ್ ಮಿರರ್‌ಗಳು, ಬಾರ್-ಎಂಡ್ ಫಿನಿಶರ್, ಫ್ರಂಟ್ ಮತ್ತು ರಿಯರ್ ಎಲ್‌ಇಡಿ, ಇಂಡಿಕೇಟರ್‌ಗಳು, ಸೋಲೋ ಫಿನಿಶರ್ ಕಿಟ್, ಕಾಂಪ್ಯಾಕ್ಟ್ ಇಂಜಿನ್ ಗಾರ್ಡ್, ಡೀಲಕ್ಸ್ ರೈಡರ್ ಫೂಟ್ ಪೆಗ್‌ಗಳು ಸೇರಿದಂತೆ ಬೆಸ್ಪೋಕ್ ಅಕ್ಸೆಸರೀಸ್ ಶ್ರೇಣಿಯೊಂದಿಗೆ ಬರುತ್ತಿದೆ.

Article Published On: Wednesday, February 1, 2023, 16:20 [IST]
English summary
Royal enfield super meteor 650 exports starts to uk details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+