TVS - OLA - HERO: ವರಮಹಾಲಕ್ಷ್ಮಿ ಹಬ್ಬಕ್ಕೆ ಕೈಗೆಟುಕುವ ದರಕ್ಕೆ ಸಿಗುವ ಎಲೆಕ್ಟ್ರಿಲ್ ಸ್ಕೂಟರ್‌ಗಳಿವು
ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು (ಇವಿ) ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸುತ್ತಿವೆ. ಈ ವರಮಹಾಲಕ್ಷ್ಮಿ ಹಬ್ಬಕ್ಕೆ ನೀವು ಹೊಸ ಇ-ಸ್ಕೂಟರ್ ಖರೀದಿಸಲು ನಿರ್ಧರಿಸಿದ್ದರೆ, ನಿಮ್ಮ ಕೈಗೆಟುಕುವ ಬೆಲೆಗೆ ಆಕರ್ಷಕ ವೈಶಿಷ್ಟ್ಯ, ವಿನ್ಯಾಸದೊಂದಿಗೆ ಸಿಗುವ ಟಿವಿಎಸ್, ಓಲಾ, ಹೀರೋ ಹಾಗೂ ಎಥರ್ ಕಂಪನಿ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ನಮ್ಮ ಬೆಂಗಳೂರಿನ ಓಲಾ (OLA) ಕಂಪನಿ ಇತ್ತೀಚೆಗೆ ಬಿಡುಗಡೆಗೊಳಿಸಿದ ಎಸ್1 ಎಕ್ಸ್ ಸರಣಿ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ತಿಳಿಯೋಣ. ಇವು, ಎಸ್1 ಎಕ್ಸ್ (2 kWh), ಎಸ್1 ಎಕ್ಸ್ (3 kWh) ಮತ್ತು ಎಸ್1 ಎಕ್ಸ್ ಪ್ಲಸ್ ಎಂಬ ಮೂರು ರೂಪಾಂತರದ ಆಯ್ಕೆಯಲ್ಲಿ ಖರೀದಿಗೆ ದೊರೆಯಲಿದ್ದು, ಕ್ರಮವಾಗಿ ರೂ.80,000, ರೂ.90,000 ಮತ್ತು ರೂ.1 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿವೆ.

2 kWh ಬ್ಯಾಟರಿ ಪ್ಯಾಕ್ ಪಡೆದಿರುವ ಎಸ್1 ಎಕ್ಸ್, ಕೊಂಚ ಕಡಿಮೆ ಅಂದ್ರೆ 91 km ರೇಂಜ್ ಕೊಡಲಿದ್ದು, 85 kmph ಟಾಪ್ ಸ್ವೀಡ್ ಹೊಂದಿದೆ. 3 kWh ಬ್ಯಾಟರಿ ಹೊಂದಿರುವ ಎಸ್1 ಎಕ್ಸ್ ಹಾಗೂ ಎಸ್1 ಎಕ್ಸ್ ಪ್ಲಸ್ ಸಂಪೂರ್ಣ ಚಾರ್ಜಿನಲ್ಲಿ 151 km ರೇಂಜ್ ಕೊಡಲಿದ್ದು, 90 kmph ಟಾಪ್ ಸ್ವೀಡ್ ಪಡೆಯಲಿವೆ. ಬೆಲೆಗೆ ತಕ್ಕಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿವೆ.
ಓಲಾದ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್ ಎಂದು ಖ್ಯಾತಿಗಳಿಸಿರುವ ಎಸ್1 ಏರ್, ಪ್ರಸ್ತುತ ರೂ.1.20 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಇದರಲ್ಲಿ, 3 kWh ಬ್ಯಾಟರಿ ಪ್ಯಾಕ್ ಬಳಸಲಾಗಿದ್ದು, ಸಂಪೂರ್ಣ ಚಾರ್ಜಿನಲ್ಲಿ 151 km ರೇಂಜ್ ನೀಡುವ ಸಾಮರ್ಥ್ಯ ಒಳಗೊಂಡಿದ್ದು, 90 kmph ಟಾಪ್ ಸ್ವೀಡ್ ಹೊಂದಿದೆ. 0-60 kmph ವೇಗವನ್ನು ಪಡೆಯಲು 5.7 ಸೆಕೆಂಡು ತೆಗೆದುಕೊಳ್ಳುತ್ತದೆ.

ಟಿವಿಎಸ್ ಕಂಪನಿಯ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಐಕ್ಯೂಬ್, ದೇಶೀಯ ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಐಕ್ಯೂಬ್ ಹಾಗೂ ಐಕ್ಯೂಬ್ ಎಸ್ ಎಂಬ ಎರಡು ರೂಪಾಂತರದ ಆಯ್ಕೆಯಲ್ಲಿ ಸಿಗಲಿದೆ. ರೂ.1.20 ಲಕ್ಷ ಆರಂಭಿಕ ದರದಲ್ಲಿ ದೊರೆಯುತ್ತದೆ. ಇವುಗಳಲ್ಲಿ 3.04 kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಬಳಸಲಾಗಿದ್ದು, 100 km ರೇಂಜ್ ಕೊಡಲಿವೆ.
ಈ ಟಿವಿಎಸ್ ಐಕ್ಯೂಬ್ ಇ- ಸ್ಕೂಟರ್, 75 km/h ಟಾಪ್ ಸ್ವೀಡ್ ಹೊಂದಿದ್ದು, ಇದರ ಬ್ಯಾಟರಿ ಪ್ಯಾಕ್, 0 - 80% ಚಾರ್ಜ್ ಆಗಲು 4 ಗಂಟೆ 30 ನಿಮಿಷ ತೆಗೆದುಕೊಳ್ಳುತ್ತದೆ. ಜೊತೆಗೆ ಐಕ್ಯೂಬ್ ಯುವ ಗ್ರಾಹಕರನ್ನು ಆಕರ್ಷಿಸುವ ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದು, ಪ್ರಮುಖವಾಗಿ TFT ಇನ್ಸ್ಟ್ರುಮೆಂಟ್ ಕ್ಲಸ್ಟರ್ ಇದ್ದು, ಬ್ಲೂಟೂತ್ ಮೂಲಕ ಸ್ಮಾರ್ಟ್‌ಫೋನ್‌ನೊಂದಿಗೆ ಡಿಸ್‌ಪ್ಲೇಯನ್ನು ಕನೆಕ್ಟ್ ಮಾಡಬಹುದು.

ಭಾರತದಲ್ಲಿ ಹೀರೋ ವಿಡಾ ವಿ1 (Hero Vida V1) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಇದು, ಎರಡು ರೂಪಾಂತರಗಳಲ್ಲಿ ಆಯ್ಕೆಯಲ್ಲಿ ದೊರೆಯುತ್ತದೆ. ಅವುಗಳೆಂದರೆ, ಪ್ಲಸ್ ಮತ್ತು ಪ್ರೊ. ಇವುಗಳ ಬೆಲೆಯು ರೂ.1.45 ಲಕ್ಷದಿಂದ ಆರಂಭವಾಗಲಿದೆ. ವಿಡಾ ವಿ1 ಪ್ರೊ ರೂಪಾಂತರದಲ್ಲಿ 3.94 kWh ಬ್ಯಾಟರಿ ಪ್ಯಾಕ್ ಬಳಸಲಾಗಿದ್ದು, 165 km ರೇಂಜ್ ನೀಡುತ್ತದೆ. ಜೊತೆಗೆ ಭರ್ಜರಿ ವೈಶಿಷ್ಟ್ಯಗಳನ್ನು ಹೊಂದಿದೆ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಎಥರ್ 450 ಎಸ್ ಸ್ಕೂಟರ್, ರೂ.1,29,999 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಈ ಸ್ಕೂಟರ್, 2.9 kWh ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, 115 km ರೇಂಜ್ ನೀಡುತ್ತದೆ. 3.9 ಸೆಕೆಂಡುಗಳಲ್ಲಿ 0-40 ವೇಗವನ್ನು ಪಡೆಯಲಿದ್ದು, 90 km/h ಟಾಪ್ ಸ್ವೀಡ್ ಹೊಂದಿದೆ. ಸ್ಮಾರ್ಟ್ಇಕೋ, ಇಕೋ, ರೈಡ್, ಸ್ಪೋರ್ಟ್ ಎಂಬ ರೈಡಿಂಗ್ ಮೋಡ್ ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications