ಪೆಟ್ರೋಲ್ ಖರ್ಚು ಉಳಿಸಿ: ನಿಮ್ಮ ಹೆಂಡತಿಗೆ ಎಲೆಕ್ಟ್ರಿಕ್ ಸ್ಕೂಟರ್ ಕೊಡಿಸಿ.. ತುಂಬಾ ಕಡಿಮೆ ಬೆಲೆ, ಜಾಸ್ತಿ ದೂರ ಓಡುತ್ತವೆ!
ಪ್ರತಿಯೊಬ್ಬರಿಗೂ ದಿನಬಳಕೆಗೆ ದ್ವಿಚಕ್ರ ವಾಹನಗಳು (Two Wheeler) ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಮಹಿಳೆಯರಿಗೆ ಸ್ಕೂಟರ್‌ಗಳು ಮಕ್ಕಳನ್ನು ಹತ್ತಿರದ ಶಾಲೆಗೆ ಬಿಟ್ಟುಬರುವುದಕ್ಕೆ.. ಮಾರ್ಕೆಟ್‌ಗೆ ಹೋಗಿ ದಿನಸಿ ತರುವುದಕ್ಕೆ ನೆರವಾಗುತ್ತವೆ. ನಿಮ್ಮ ಹೆಂಡತಿಗೆ ಹೊಸ ಸ್ಕೂಟರ್‌ವೊಂದನ್ನು ಉಡುಗೊರೆಯಾಗಿ ನೀಡಲು ಆಲೋಚಿಸಿದ್ದೀರಾ.. ಹಾಗಾದರೆ ಎಲೆಕ್ಟ್ರಿಕ್ ಸ್ಕೂಟರ್‌ಗಳು ಉತ್ತಮ ಆಯ್ಕೆಯಾಗಲಿವೆ. ಸಾಮಾನ್ಯ ಪೆಟ್ರೋಲ್ ಸ್ಕೂಟರ್‌ಗಳಿಗೆ ಹೋಲಿಕೆ ಮಾಡಿದರೆ, ಇವುಗಳು ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ಒಮ್ಮೆ ಚಾರ್ಜ್ ಮಾಡಿದರೆ ಸಾಕು ಗರಿಷ್ಠ ದೂರವು ಓಡುತ್ತವೆ. ಇಲ್ಲಿ 2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಖರೀದಿಗೆ ದೊರೆಯುವ ಓಲಾ ಎಸ್1ಎಕ್ಸ್, ಟಿವಿಎಸ್ ಐಕ್ಯೂಬ್ ಮತ್ತು ಎಥರ್ ರಿಜ್ಟಾ ಇ-ಸ್ಕೂಟರ್‌ಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಓಲಾ ಎಸ್1ಎಕ್ಸ್ (Ola S1X) ಕುರಿತಂತೆ ಮಾತನಾಡೋಣ. ಈ ಎಲೆಕ್ಟ್ರಿಕ್ ಸ್ಕೂಟರ್ ರೂ.69,999 ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ಈ ಓಲಾ ಎಸ್1ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್, 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 4.1 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ಸ್ ಎಂಬ ರೈಡಿಂಗ್ ಮೋಡ್ ಆಯ್ಕೆಯನ್ನು ಒಳಗೊಂಡಿದೆ. ಎಲ್‌ಸಿಡಿ ಸ್ಕ್ರೀನ್ (4.3-ಇಂಚು) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಟಿವಿಎಸ್ ಐಕ್ಯೂಬ್ (TVS iQube) ಕೂಡ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.1.07 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 2.2 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 75 ಕಿಲೋಮೀಟರ್‌ವರೆಗೆ ಓಡುತ್ತದೆ. ಜೊತೆಗೆ 75 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

ನೂತನ ಐಕ್ಯೂಬ್ ಇ-ಸ್ಕೂಟರ್ ಬ್ಯಾಟರಿ ಪ್ಯಾಕ್ 0 ರಿಂದ 80% ಚಾರ್ಜ್ ಆಗಲು 2 ಗಂಟೆ 45 ನಿಮಿಷ ತೆಗೆದುಕೊಳ್ಳುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪರ್ಲ್ ವೈಟ್ & ವಾಲ್ನಟ್ ಬ್ರೌನ್ ಬಣ್ಣಗಳ (ಕಲರ್) ಆಯ್ಕೆಯೂ ಸಿಗುತ್ತದೆ.
ಎಥರ್ ರಿಜ್ಟಾ (Ather Rizta) ಬಗ್ಗೆ ಹೇಳುವುದಾದರೆ, ಇದೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಆಗಿದ್ದು, ರೂ.1.25 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 123 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಈ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್, ಬ್ಯಾಟರಿಯು 6 ಗಂಟೆ 40 ನಿಮಿಷಗಳಲ್ಲಿ 0 ರಿಂದ 80% ಚಾರ್ಜ್ ಆಗುತ್ತದೆ. ಪ್ಯಾಂಗೊಂಗ್ ಬ್ಲೂ ಮೊನೊ, ಡೆಕ್ಕನ್ ಗ್ರೇ ಮೊನೊ & ಸಿಯಾಚಿನ್ ವೈಟ್ ಮೊನೊ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) 200 ಎಂಎಂ ಡಿಸ್ಕ್ ಹಾಗೂ ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಇನ್ನು, ಓಲಾ ಎಸ್1ಎಕ್ಸ್, ಟಿವಿಎಸ್ ಐಕ್ಯೂಬ್ ಹಾಗೂ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್‌ಗಳು ಸಾಕಷ್ಟು ಉತ್ತಮವಾಗಿವೆ. ಇವುಗಳು ದಿನಬಳಕೆಗೂ ಹೆಚ್ಚು ಸೂಕ್ತವಾಗಿದ್ದು, ಕಡಿಮೆ ಖರ್ಚಿನಲ್ಲಿ ಹೆಚ್ಚಿನ ದೂರ ಕೂಡ ಓಡಬಲ್ಲವು. ಈ ಹಿನ್ನೆಲೆ, ನಿಮ್ಮ ಹೆಂಡತಿಗೆ ಉಡುಗೊರೆ ನೀಡಲು ಈ ಸ್ಕೂಟರ್‌ಗಳನ್ನು ಆಯ್ದುಕೊಳ್ಳಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications