ಆಗಸ್ಟ್‌ನಲ್ಲಿ ಬಿಡುಗಡೆಯಾದ ಪ್ರಖ್ಯಾತ ದ್ವಿಚಕ್ರ ವಾಹನಗಳಿವು.. 73,700 ಆರಂಭಿಕ ಬೆಲೆ, ಅತ್ಯಾಕರ್ಷಕ ವೈಶಿಷ್ಟ್ಯಗಳು!

ಭಾರತದ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ದಿನಬಳಕೆಗಾಗಿ ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ದೇಶೀಯ ಮಾರುಕಟ್ಟೆಯಲ್ಲಿ ಈ ಆಗಸ್ಟ್‌ನಲ್ಲಿ ವಿವಿಧ ಸ್ಕೂಟರ್ ಹಾಗೂ ಬೈಕ್‌ಗಳನ್ನು ಬಿಡುಗಡೆ ಮಾಡಲಾಯಿತು. ಪ್ರಮುಖವಾಗಿ ಹೊಸ ಬಣ್ಣದ ಆಯ್ಕೆಯಲ್ಲಿ ಹೀರೋ ಗ್ಲಾಮರ್ (Hero Glamour) ಮೋಟಾರ್‌ಸೈಕಲ್, ನವೀಕರಿಸಿದ ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಹಾಗೂ ಓಲಾ ರೋಡ್‌ಸ್ಟರ್ (Ola Roadster) ಸರಣಿಯ ಮೂರು ಎಲೆಕ್ಟ್ರಿಕ್ ಬೈಕ್‌ಗಳನ್ನು ಪರಿಚಯಿಸಲಾಯಿತು. ಬನ್ನಿ.. ಈ ನೂತನ ದ್ವಿಚಕ್ರ ವಾಹನಗಳ ವಿಶೇಷತೆ ಬಗ್ಗೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.

ಮೊದಲಿಗೆ ಹೊಚ್ಚ ಹೊಸ ಹೀರೋ ಗ್ಲಾಮರ್ (Hero Glamour) ಬೈಕ್ ಕುರಿತಂತೆ ಮಾತನಾಡೋಣ. ಇದು 'ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್' ಎಂಬ ಆಕರ್ಷಕ ಬಣ್ಣದ ಆಯ್ಕೆಯಲ್ಲಿ ಮಾರುಕಟ್ಟೆಗೆ ಬಂದಿದೆ. ಈ ಹೊಸ ಬಣ್ಣವನ್ನು ಪಡೆದಿರುವ ಡ್ರಮ್ ಬ್ರೇಕ್ ರೂಪಾಂತರ (ವೇರಿಯೆಂಟ್) ರೂ.83,598 ಹಾಗೂ ಡಿಸ್ಕ್ ಬ್ರೇಕ್ ರೂಪಾಂತರ ರೂ.87,598 ಎಕ್ಸ್ ಶೋರೂಂ ದರವನ್ನ ಹೊಂದಿದೆ.

2024 August 3 Famous Two Wheelers Launched In India Hero Glamour TVS Jupiter 110 Ola Roadster Series

ಈ ಹೀರೋ ಗ್ಲಾಮರ್ ಮೋಟಾರ್‌ಸೈಕಲ್‌, 124.7 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 10.72 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 10.6 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಡಿಜಿಟಲ್ ಇನ್‌ಸ್ಟ್ರುಮೆಂಟೇಶನ್ ಸ್ಕ್ರೀನ್, ಸ್ಮಾರ್ಟ್‌ಫೋನ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನವೀಕರಣಗಳನ್ನು ಪಡೆದುಕೊಂಡು ಬಿಡುಗಡೆಯಾದ ಟಿವಿಎಸ್ ಜುಪಿಟರ್ 110 (TVS Jupiter 110) ಬಗ್ಗೆ ಹೇಳುವುದಾದರೆ, ಈ ಸ್ಕೂಟರ್‌ ರೂ.73,700 ದಿಂದ ರೂ.87,250 (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ 113 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ 7.91 ಹೆಚ್‌ಪಿ ಗರಿಷ್ಠ ಶಕ್ತಿ ಮತ್ತು 9.8 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

2024 August 3 Famous Two Wheelers Launched In India Hero Glamour TVS Jupiter 110 Ola Roadster Series

ನೂತನ ಟಿವಿಎಸ್ ಜುಪಿಟರ್ 110 ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಇಂಟಲಿಜೆಂಟ್ ಸ್ಟಾರ್ಟ್/ ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ಯುಎಸ್‌‍ಬಿ ಚಾರ್ಜರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಮುಂಭಾಗ (ಫ್ರಂಟ್) 220 ಎಂಎಂ ಪೆಟಲ್ ಡಿಸ್ಕ್ ಹಾಗೂ ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ.

ಈ ಆಗಸ್ಟ್‌ನಲ್ಲಿ ಓಲಾ ರೋಡ್‌ಸ್ಟರ್ (Ola Roadster) ಎಲೆಕ್ಟ್ರಿಕ್ ಬೈಕ್ ಕೂಡ ಮೂರು ರೂಪಾಂತರ (ವೇರಿಯೆಂಟ್) ಆಯ್ಕೆಯಲ್ಲಿ ಮಾರಾಟಕ್ಕೆ ಬಂದಿದೆ. ರೋಡ್‌ಸ್ಟರ್ (Roadster), ರೋಡ್‌ಸ್ಟರ್ ಎಕ್ಸ್ (Roadster X) ಮತ್ತು ರೋಡ್‌ಸ್ಟರ್ ಪ್ರೊ (Roadster Pro) ಎಂಬ ವಿಧದಲ್ಲಿ ಖರೀದಿಗೆ ಲಭ್ಯವಿದೆ. ರೂ.74,999 ದಿಂದ ರೂ.2,49,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

2024 August 3 Famous Two Wheelers Launched In India Hero Glamour TVS Jupiter 110 Ola Roadster Series

ಓಲಾ ರೋಡ್‌ಸ್ಟರ್ 2.5 ಕೆಡಬ್ಲ್ಯೂಹೆಚ್, 3.5 ಕೆಡಬ್ಲ್ಯೂಹೆಚ್, 4.5 ಕೆಡಬ್ಲ್ಯೂಹೆಚ್, 6 ಕೆಡಬ್ಲ್ಯೂಹೆಚ್, 8 ಕೆಡಬ್ಲ್ಯೂಹೆಚ್ ಮತ್ತು 16 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 200 ಕಿಲೋಮೀಟರ್‌ ರಿಂದ 579 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, September 1, 2024, 13:00 [IST]
English summary
2024 august 3 famous two wheelers launched india hero glamour tvs jupiter 110 ola roadster series
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+