Hero: ಆಕರ್ಷಕ ಬಣ್ಣದೊಂದಿಗೆ ಹೊಸ ಹೀರೋ ಗ್ಲಾಮರ್ ಬೈಕ್ ಬಿಡುಗಡೆ.. ರೂ.83,598 ಬೆಲೆ, ವಿಶೇಷತೆಗಳೇನು?

ಹೀರೋ ಮೋಟೋಕಾರ್ಪ್ (Hero MotoCorp) ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶದ ಮೂಲೆಮೂಲೆಯಲ್ಲಿಯೂ ಕಂಪನಿ ಮಾರಾಟಗೊಳಿಸುವ ಬೈಕ್ ಮತ್ತು ಸ್ಕೂಟರ್‌ಗಳು ಜನರ ಮನಸ್ಸನ್ನು ಗೆದ್ದಿವೆ. ಇವುಗಳು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಹೀರೋ ಕಂಪನಿಯು ಗುರುವಾರ ಹೊಸ ಬಣ್ಣದ ಆಯ್ಕೆಯೊಂದಿಗೆ 2024ರ ಗ್ಲಾಮರ್ (Glamour) ಬೈಕ್‌ನ್ನು ಬಿಡುಗಡೆಗೊಳಿಸಿದೆ. ಇಲ್ಲಿ ನೂತನ ಮೋಟಾರ್‌ಸೈಕಲ್‌ನ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯಗಳ (Features) ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ನೂತನ ಹೀರೋ ಗ್ಲಾಮರ್ (Hero Glamour) ಬೈಕ್, ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್ (Black Metallic Silver) ಎಂಬ ನವೀನ ಬಣ್ಣದ ಆಯ್ಕೆಯಲ್ಲಿ ಮಾರುಕಟ್ಟೆಗೆ ಬಂದಿದೆ. ಈ ಬಣ್ಣವನ್ನು ಹೊಂದಿರುವ ಡ್ರಮ್ ಬ್ರೇಕ್ (Drum Brake) ರೂಪಾಂತರ (ವೇರಿಯೆಂಟ್) ರೂ.83,598 ಹಾಗೂ ಡಿಸ್ಕ್ ಬ್ರೇಕ್ (Disc Brake) ರೂಪಾಂತರ ರೂ.87,598 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ.

2024 Hero Glamour Launched In India Rs 83 598 Price Details

ಹೊಸ ಬಣ್ಣದ ಆಯ್ಕೆಯನ್ನು (ಕಲರ್ ಸ್ಕೀಮ್) ಹೊರತುಪಡಿಸಿ, 2024 ಹೀರೋ ಗ್ಲಾಮರ್ ಹಿಂದಿನ ಮಾದರಿಯಂತೆಯೇ (ಮಾಡೆಲ್) ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿದೆ. ಆದಾಗ್ಯೂ, ನೂತನ ಬಣ್ಣ ಈ ಮೋಟಾರ್‌ಸೈಕಲ್‌ನ್ನು ಮತ್ತಷ್ಟು ಆಕರ್ಷಕವಾಗಿ ಕಾಣುವಂತೆ ಮಾಡಿದ್ದು, ಒಂದೇ ನೋಟದಲ್ಲಿ ಹೆಚ್ಚಿನ ಸಂಖ್ಯೆಯ ಯುವಕರನ್ನು ಸೆಳೆಯುವುದರಲ್ಲಿ ಎರಡು ಮಾತಿಲ್ಲ.

ಹೊಸ ಹೀರೋ ಗ್ಲಾಮರ್ ಬೈಕ್ 124.7 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 10.72 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 10.6 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ ಪಡೆದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಲಿದೆ ಎಂದು ಅಂದಾಜಿಸಲಾಗಿದೆ.

2024 Hero Glamour Launched In India Rs 83 598 Price Details

ಈ ಹೀರೋ ಗ್ಲಾಮರ್ ಮೋಟಾರ್‌ಸೈಕಲ್‌ ಎಲ್ಇಡಿ ಹೆಡ್‌ಲೈಟ್‌, ಡಿಜಿಟಲ್ ಇನ್‌ಸ್ಟ್ರುಮೆಂಟೇಶನ್ ಸ್ಕ್ರೀನ್, ಸ್ಮಾರ್ಟ್‌ಫೋನ್ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್, ಹಝರ್ಡ್ ಲೈಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹೊಸದಾದ ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್ ಬಣ್ಣದೊಂದಿಗೆ ಕ್ಯಾಂಡಿ ಬ್ಲೇಜಿಂಗ್ ರೆಡ್, ಟೆಕ್ನೋ ಬ್ಲೂ-ಬ್ಲಾಕ್ ಹಾಗೂ ಸ್ಪೋರ್ಟ್ಸ್ ರೆಡ್-ಬ್ಲಾಕ್ ಬಣ್ಣಗಳ ಆಯ್ಕೆಯಲ್ಲಿ ಸಹ ಲಭ್ಯವಿದೆ.

ನೂತನ ಹೀರೋ ಗ್ಲಾಮರ್ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಅಥವಾ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಡ್ರಮ್ ಬ್ರೇಕ್ ರೂಪಾಂತರ 122 ಕೆಜಿ ಹಾಗೂ ಡಿಸ್ಕ್ ಬ್ರೇಕ್ ರೂಪಾಂತರ 123 ಕೆಜಿ ತೂಕವಿದೆ.

2024 Hero Glamour Launched In India Rs 83 598 Price Details

ಹೀರೋ ಗ್ಲಾಮರ್ ಮೋಟಾರ್‌ಸೈಕಲ್‌ 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ. ರಸ್ತೆಯ ಮೇಲೆ ಬಲವಾದ ಹಿಡಿತ ಸಾಧಿಸಲು 18-ಇಂಚಿನ ವೀಲ್‌ಗಳು, ಮುಂದೆ (ಫ್ರಂಟ್) 80/100-18 ಹಾಗೂ ಹಿಂದೆ (ರೇರ್) 100/80-18 ಅಳತೆಯ ಟೈಯರ್‌ಗಳನ್ನು ಪಡೆದಿದೆ. ವೀಲ್‌ಬೇಸ್ 1273 ಎಂಎಂ ಇದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, August 23, 2024, 9:50 [IST]
English summary
2024 hero glamour launched in india rs 83598 price details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+