2024ರ ಕವಾಸಕಿ Z900 ಸೂಪರ್ ಬೈಕಿನ EMI, ಆನ್ ರೋಡ್ ಬೆಲೆ ಎಷ್ಟು?

ಜಪಾನ್ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಕವಾಸಕಿ (Kawasaki) ತನ್ನ ನವೀಕರಿಸಿದ ಕವಾಸಕಿ Z900 ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಗೊಳಿಸಿತು. 2024ರ ಕವಾಸಕಿ Z900 (Kawasaki Z900) ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಸೂಪರ್ ಬೈಕುಗಳಲ್ಲಿ ಒಂದಾಗಿದೆ.

ಹೊಸ ಕವಾಸಕಿ Z900 ಬೈಕ್ ಮೆಟಾಲಿಕ್ ಸ್ಪಾರ್ಕ್ ಬ್ಲಾಕ್ ಮತ್ತು ಮೆಟಾಲಿಕ್ ಮ್ಯಾಟ್ ಗ್ರ್ಯಾಫೀನ್ ಸ್ಟೀಲ್ ಗ್ರೇ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದೆ. ಈ ಹೊಸ ಕವಾಸಕಿ Z900 ಬೈಕ್ ಆಕರ್ಷಕ ವಿನ್ಯಾಸ, ಅತ್ಯಾಧುನಿಕ ಫೀಚರ್ಸ್ ಮತ್ತು ಭರ್ಜರಿ ಪರ್ಫಾಮೆನ್ಸ್ ನೀಡುವ ಬೈಕ್ ಆಗಿದೆ. ಈ ಕವಾಸಕಿ Z900 ಬೈಕಿನ ಇಎಂಐ, ಆನ್ ರೋಡ್ ಬೆಲೆ ಮತ್ತು ಕಾರಿನ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನ ಓದಿ.

Kawasaki Z900

ಈ 2024ರ ಕವಾಸಕಿ Z900 ಬೈಕಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.9,38,000 ಆದರೆ ಆನ್ ರೋಡ್ ಬೆಲೆಯು ರೂ.11,57,971 ಆಗಿದೆ. ಕವಾಸಕಿ Z900 ಬೈಕಿಗೆ 6% ಬಡ್ಡಿ ದರದಲ್ಲಿ 36 ತಿಂಗಳ ಲೋನ್‌ ಮಾಡಿದರೆ ಪ್ರತಿ ತಿಂಗಳು ನೀವು ರೂ.31,699 ಗಳಷ್ಟು ಇಎಂಐ ಪಾವತಿಸಬೇಕು. ಇನ್ನು ಈ ಬೈಕಿನ ಡೌನ್ ಪೇಮೆಂಟ್ ಸುಮಾರು ರೂ.116000 ಆಗಿದೆ.

ಈ 2024ರ ಕವಾಸಕಿ Z900 ಭಾರತೀಯ ಮಾರುಕಟ್ಟೆಯಲ್ಲಿ ಡುಕಾಟಿ ಮಾನ್ಸ್ಟರ್ , BMW F900R ಮತ್ತು ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ. ಈ ಕವಾಸಕಿ Z900 ಬೈಕಿನಲ್ಲಿ 948cc, ಇನ್‌ಲೈನ್ ನಾಲ್ಕು ಸಿಲಿಂಡರ್, ಲಿಕ್ವಿಡ್ ಕೂಲ್ಡ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 9,500rpm ನಲ್ಲಿ 123.6bhp ಮತ್ತು 7,700rpm ನಲ್ಲಿ 98.6Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Kawasaki Z900

ಈ ಎಂಜಿನ್ ಅನ್ನು 6-ಸ್ಫೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಈ ಹೊಸ ಕವಾಸಕಿ Z900 ಬೈಕ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರ ಸಿಂಗಲ್-ಪಾಡ್ ಎಲ್‌ಇಡಿ ಹೆಡ್‌ಲೈಟ್, ಸ್ನಾಯು ಇಂಧನ ಟ್ಯಾಂಕ್, ಸ್ಪ್ಲಿಟ್ ಸೀಟ್‌ಗಳು ಮತ್ತು ಒಟ್ಟಾರೆಯಾಗಿ ಅಗ್ರೇಸಿವ್ ಬಾಡಿವರ್ಕ್ ಅನ್ನು ಒಳಗೊಂಡಿದೆ. ಈ ಕವಾಸಕಿ Z900 ಬೈಕ್ ಸಾಕಷ್ಟು ಆಕರ್ಷಕವಾಗಿ ಕಾಣುತ್ತದೆ ಮತ್ತು ಸಾಕಷ್ಟು ರಸ್ತೆ ಉಪಸ್ಥಿತಿಯೊಂದಿಗೆ ಬಂದಿದೆ.

ಈ ಬೈಕ್ 17-ಇಂಚಿನ ಅಲಾಯ್ ವ್ಹೀಲ್ ಗಳೊಂದಿಗೆ ಹೊಸ ಡನ್‌ಲಪ್ ಸ್ಪೋರ್ಟ್‌ಮ್ಯಾಕ್ಸ್ ರೋಡ್‌ಸ್ಪೋರ್ಟ್ 2 ಟೈರ್‌ಗಳನ್ನು ಪಡೆಯುತ್ತದೆ. ಈ ಹೊಸ ಕವಾಸಕಿ Z900 ಬೈಕಿನ ಸಸ್ಪೆಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ USD ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಟ್ರೆಲ್ಲಿಸ್ ಫ್ರೇಮ್‌ನಲ್ಲಿ ಇರಿಸಲಾಗಿದೆ. ಈ ಬೈಕ್ 17-ಇಂಚಿನ ಅಲಾಯ್ ವ್ಹೀಲ್ ಗಳೊಂದಿಗೆ ಹೊಸ ಡನ್‌ಲಪ್ ಸ್ಪೋರ್ಟ್‌ಮ್ಯಾಕ್ಸ್ ರೋಡ್‌ಸ್ಪೋರ್ಟ್ 2 ಟೈರ್‌ಗಳನ್ನು ಪಡೆಯುತ್ತದೆ.

Kawasaki Z900

ಸುರಕ್ಷತೆ ವಿಭಾಗದಲ್ಲಿ ಬ್ರೇಕಿಂಗ್ ಸಿಸ್ಟಂ ಪ್ರಮುಖ ಪಾತ್ರವಹಿಸುತ್ತದೆ. ಈ ಹೊಸ ಕವಾಸಕಿ Z900 ಬೈಕ್ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಬೈಕಿನ ಮುಂಭಾಗದಲ್ಲಿ ಡ್ಯುಯಲ್ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 250 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗುತ್ತದೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಇನ್ನು ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ ಮೂರು ಸ್ಟ್ಯಾಂಡರ್ಡ್ ರೈಡಿಂಗ್ ಮೋಡ್‌ಗಳು (ಸ್ಪೋರ್ಟ್. ರೋಡ್ ಮತ್ತು ರೈನ್) ಹೆಚ್ಚುವರಿ, ಸಂಪೂರ್ಣ ಕಸ್ಟಮೈಸ್ ರೈಡರ್ ಮೋಡ್ ಜೊತೆಗೆ ಲಭ್ಯವಿದೆ. ಇದರೊಂದಿಗೆ ಟ್ರ್ಯಾಕ್ಷನ್ ಕಂಟ್ರೋಲ್. ABS, ಫುಲ್ LED ಲೈಟಿಂಗ್ ಮತ್ತು ಬ್ಲೂಟೂತ್-ಕನೆಕ್ಟಿವಿಟಿಯೊಂದಿಗೆ ಕಲರ್ TFT ಡಿಸ್ ಪ್ಲೇಯನ್ನು ಒಳಗೊಂಡಿರುತ್ತದೆ. ಈ ಬೈಕಿನ 120/70 ಮುಂಭಾಗದಲ್ಲಿ ಮತ್ತು 180/55 ಹಿಂಭಾಗದ ಡನ್‌ಲಪ್ ಟೈರ್ ಗಳನ್ನು ಹೊಂದಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, May 7, 2024, 12:21 [IST]
English summary
2024 kawasaki z900 on road price emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+