ಸಖತ್ ಮೈಲೇಜ್.. ನೋಡಲು ಮನಮೋಹಕ, ಕಡಿಮೆ ಬೆಲೆ.. 2024ರಲ್ಲಿ ಮಾರಾಟಕ್ಕೆ ಬಂದ ಟೂ ವೀಲರ್‌ಗಳಿವು!
ವಿಶ್ವದಲ್ಲಿಯೇ ಭಾರತ ಅತಿದೊಡ್ಡ ದ್ವಿಚಕ್ರ ವಾಹನ (Two Wheeler) ಮಾರುಕಟ್ಟೆಯನ್ನು ಹೊಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಹೀರೋ, ಟಿವಿಎಸ್ ಹಾಗೂ ಬಜಾಜ್ ಕಂಪನಿಗಳು ಅಧಿಪತ್ಯ ಸಾಧಿಸಿದ್ದು, ಈ ವರ್ಷ (2024) ಕೂಡ ಆಕರ್ಷಕ ವೈಶಿಷ್ಟ್ಯ ಹೊಂದಿರುವ ಹಲವು ಸ್ಕೂಟರ್ ಹಾಗೂ ಬೈಕ್‌ಗಳನ್ನು ಬಿಡುಗಡೆಗೊಳಿಸಿವೆ. ಅವುಗಳಲ್ಲಿ ಡಿಸ್ಕ್ ಬ್ರೇಕ್ ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್, ಟಿವಿಎಸ್ ಜುಪಿಟರ್ 110 ಮತ್ತು ಬಜಾಜ್ ಫ್ರೀಡಂ 125 ಸಿಎನ್‌ಜಿ ಮಾಡೆಲ್‌ಗಳು ಹೆಚ್ಚು ಗ್ರಾಹಕರ ಗಮನ ಸೆಳೆದವು. ಬನ್ನಿ.. ಈ ದ್ವಿಚಕ್ರ ವಾಹನಗಳ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮೊದಲಿಗೆ ಡಿಸ್ಕ್ ಬ್ರೇಕ್ ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus XTEC) ಮಾತನಾಡೋಣ. ಈ ಮೋಟಾರ್‌ಸೈಕಲ್ ರೂ.83,461 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 97.2 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.9 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ಈ ಬೈಕ್ ಎಲ್ಇಡಿ ಹೆಡ್‌ಲ್ಯಾಂಪ್, ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಐ3ಎಸ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಸೈಡ್-ಸ್ಟ್ಯಾಂಡ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಹೆಸರೇ ಹೇಳುವಂತೆ ಮುಂಭಾಗ (ಫ್ರಂಟ್) 240 ಎಂಎಂ ಡಿಸ್ಕ್ ಮತ್ತು ಹಿಂಭಾಗ (ರೇರ್) 130 ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. ಸರಿ ಸುಮಾರು 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.78,391 ರಿಂದ ರೂ.90,691 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 113 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 7.91 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಜುಪಿಟರ್ 110 ಸ್ಕೂಟರ್ ಇಂಟಲಿಜೆಂಟ್ ಸ್ಟಾರ್ಟ್-ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್‌ಎಕ್ಸ್‌ಸಿ & ಡಿಸ್ಕ್ ಎಸ್‌ಎಕ್ಸ್‌ಸಿ ಎಂಬ ರೂಪಾಂತರಗಳನ್ನು ಹೊಂದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) 220 ಎಂಎಂ ಪೆಟಲ್ ಡಿಸ್ಕ್ ಹಾಗೂ ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್‌ನ್ನು ಪಡೆದಿದೆ.
ಕಡೆಯದಾಗಿ ಬಜಾಜ್ ಫ್ರೀಡಂ 125 (Bajaj Freedom 125) ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.89,997 ರಿಂದ ರೂ.1.10 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 125 ಸಿಸಿ ಏರ್-ಕೂಲ್ಡ್ ಸಿಂಗಲ್-ಸಿಲಿಂಡರ್ ಎಂಜಿನ್ ಹೊಂದಿದೆ. 9.4 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಮೋಟಾರ್‌ಸೈಕಲ್, 2-ಲೀಟರ್/ ಕೆಜಿ ಸಾಮರ್ಥ್ಯದ ಪೆಟ್ರೋಲ್ & ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಒಟ್ಟು 330 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಸಿಎನ್‌ಜಿ ಮೋಡ್‌ನಲ್ಲಿ 200 ಕಿಲೋಮೀಟರ್ & ಪೆಟ್ರೋಲ್ ಮೋಡ್‌ನಲ್ಲಿ 130 ಕಿಲೋಮೀಟರ್ ಓಡುತ್ತದೆ. ಎಲ್ಇಡಿ ಹೆಡ್‌ಲೈಟ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಎಲ್‌ಸಿಡಿ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








