TVS: ನಾಳೆ ನೂತನ ಟಿವಿಎಸ್ ಸ್ಕೂಟರ್ ಬಿಡುಗಡೆ.. ಭಾರಿ ಕಡಿಮೆ ಬೆಲೆ, ಏನಿರಲಿದೆ ವೈಶಿಷ್ಟ್ಯಗಳು?

ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಮತ್ತಷ್ಟು ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸಲು ನಾಳೆ (ಆಗಸ್ಟ್ 22) ನವೀಕರಿಸಿದ ಹೊಚ್ಚ ಹೊಸ ಜುಪಿಟರ್ 110 (Jupiter 110) ಸ್ಕೂಟರ್‌ನ್ನು ಬಿಡುಗಡೆ ಮಾಡಲಿದೆ. ಇದಕ್ಕಾಗಿ ಕಂಪನಿಯು ಸಾಕಷ್ಟು ತಯಾರಿ ನಡೆಸುತ್ತಿದೆ. ನೂತನ ಸ್ಕೂಟರ್‌ ಬಗ್ಗೆ ಖರೀದಿದಾರರಲ್ಲಿ ಕುತೂಹಲವನ್ನು ಹೆಚ್ಚಿಸಲು ಹಲವು ಟೀಸರ್‌ಗಳನ್ನು ಕೂಡ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದೆ.

ಬೆಲೆ (Price): 2024ರ ನೂತನ ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ರೂ.77,000 ಆಸುಪಾಸಿನಲ್ಲಿ ಎಕ್ಸ್ ಶೋರೂಂ ದರವನ್ನು ಹೊಂದಿರಬಹುದು ಎನ್ನಲಾಗಿದೆ. ಸದ್ಯ ಲಭ್ಯವಿರುವ ಜುಪಿಟರ್ 110 ಸ್ಕೂಟರ್ ರೂ.77,431 ದಿಂದ ರೂ.93,026 (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ.

2024 New TVS Jupiter 110 Launch On Tomorrow Expected Price And Feature Details

ವಿನ್ಯಾಸ (Design): 2013ರ ವರ್ಷಾಂತ್ಯದಲ್ಲಿ ಟಿವಿಎಸ್ ಜುಪಿಟರ್ 110 ಸ್ಕೂಟರ್‌ನ್ನು ಪರಿಚಯಿಸಲಾಗಿತ್ತು. ಅಂದಿನಿಂದಲೇ ಹೆಚ್ಚು ಮಾರಾಟವಾಗುವ ಸ್ಕೂಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಹೋಂಡಾ ಆಕ್ಟಿವಾಗೆ ನೇರ ಪ್ರತಿಸ್ಪರ್ಧಿಯಾಗಿದೆ. ಈಗಾಗಲೇ ಬಿಡುಗಡೆಗೊಂಡಿರುವ ಟೀಸರ್‌ಗಳು ಹೊಸ ಜುಪಿಟರ್ 110 ಸ್ಕೂಟರ್‌ನ ವಿನ್ಯಾಸದ ಬಗ್ಗೆ ಒಂದಷ್ಟು ಬೆಳಕನ್ನು ಚೆಲ್ಲಿವೆ. ಇದು ಮರುವಿನ್ಯಾಸಗೊಳಿಸಲಾದ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್, ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ವೈಶಿಷ್ಟ್ಯಗಳು (Features): ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್‌ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ನೂತನ ಸ್ಕೂಟರ್ ಆಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮೊಬೈಲ್ ಫೋನ್ ಚಾರ್ಜರ್ ಮತ್ತು 12-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. ಜೊತೆಗೆ ಜುಪಿಟರ್ 125 ಸ್ಕೂಟರ್‌ನಂತೆ ಎರಡು ಹೆಲ್ಮೆಟ್‌ಗಳನ್ನು ಇಡಲು ಸಾಧ್ಯವಾಗುವಂತೆ ಬೂಟ್ ಸ್ಪೇಸ್ ಹಾಗೂ ಫ್ಲೋರ್‌ಬೋರ್ಡ್‌ನಲ್ಲಿ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಕಾರ್ಯಕ್ಷಮತೆ (Performance): ನಾಳೆ ಮಾರಾಟಕ್ಕೆ ಬರುವ ನೂತನ ಟಿವಿಎಸ್ ಜುಪಿಟರ್ 110 ಸ್ಕೂಟರ್‌ನ ಎಂಜಿನ್‌ನಲ್ಲಿ ಯಾವುದೇ ಮಾರ್ಪಾಡನ್ನು ಮಾಡಲಾಗಿಲ್ಲ. ಇದು ಪ್ರಸ್ತುತವಿರುವ ಮಾದರಿಯಂತೆ ಇರಲಿದೆ ಎಂದು ತಿಳಿದುಬಂದಿದೆ. ಈಗಿರುವ ಜುಪಿಟರ್ 110 ಸ್ಕೂಟರ್ 109.7 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.88 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 8.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Banking System): ನೂತನ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್‌ ಸಸ್ಪೆನ್ಷನ್ ಸೆಟಪ್ ಹೊಂದಿರುವ ನಿರೀಕ್ಷೆಯಿದೆ. ಸವಾರರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಟಿವಿಎಸ್ ಜುಪಿಟರ್ 125 (TVS Jupiter 125) ಸಹ ಲಭ್ಯ: ದೇಶೀಯವಾಗಿ ಖರೀದಿಗೆ ಸಿಗುವ ಈ ಸ್ಕೂಟರ್ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ರೂ.89,155 ದಿಂದ ರೂ.99,805 ಎಕ್ಸ್ ಶೋರೂಂ ದರವನ್ನು ಹೊಂದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, August 21, 2024, 10:26 [IST]
English summary
2024 new tvs jupiter 110 launch on tomorrow expected price and feature details
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+