ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ ಕುರಿತ ಪ್ರಮುಖಾಂಶಗಳು.. ನಿನ್ನೆಯಷ್ಟೇ ಬಿಡುಗಡೆ, 73,000ಕ್ಕೆ ಸಿಗುತ್ತದೆ!

ತಮಿಳುನಾಡು ಮೂಲದ ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಗುರುವಾರ ನವೀಕರಿಸಿದ ಹೊಚ್ಚ ಹೊಸ ಜುಪಿಟರ್ 110 (Jupiter 110) ಸ್ಕೂಟರ್‌ನ್ನು ಬಿಡುಗಡೆ ಮಾಡಿದೆ. ಇದು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಹತ್ತಾರು ಹೊಸತನಗಳಿಗೆ ಸಾಕ್ಷಿಯಾಗಿದೆ. ಬನ್ನಿ.. ಈ ಜುಪಿಟರ್ 110 ಸ್ಕೂಟರ್ ಕುರಿತ 5 ಪ್ರಮುಖಾಂಶಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು: 2024ರ ಹೊಸ ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂ.73,700 (ಎಕ್ಸ್ ಶೋರೂಂ) ಆರಂಭಿಕ ದರವನ್ನು ಪಡೆದಿದೆ. ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್‌ಎಕ್ಸ್‌ಸಿ ಹಾಗೂ ಡಿಸ್ಕ್ ಎಸ್‌ಎಕ್ಸ್‌ಸಿ ಎಂಬ 4 ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

2024 new TVS Jupiter 110 Scooter Top Things Yesterday Launch

ವಿನ್ಯಾಸ: ಈ ಟಿವಿಎಸ್ ಜುಪಿಟರ್ 110 ಅತ್ಯಾಧುನಿಕ ವಿನ್ಯಾಸವನ್ನು (ಡಿಸೈನ್) ಹೊಂದಿದೆ. ಮುಂಭಾಗ (ಫ್ರಂಟ್) ಹೊಸದಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್, ಟರ್ನ್ ಇಂಡಿಕೇಟರ್ ಮತ್ತು ವಿಶಾಲವಾದ (ವೈಡ್) ಎಲ್ಇಡಿ ಡಿಆರ್‌ಎಲ್‌ನ್ನು ಪಡೆದಿದೆ. ಹಿಂಭಾಗ (ರೇರ್) ಕೂಡ ಅತ್ಯುತ್ತಮವಾದ ವಿನ್ಯಾಸ ಒಳಗೊಂಡಿದ್ದು, ಎಮರ್ಜೆನ್ಸಿ ಬ್ರೇಕ್ ವಾರ್ನಿಂಗ್ ಲೈಟ್ ಹೊಂದಿರುವ ಎಲ್ಇಡಿ ಲೈಟ್ ಬಾರ್‌ನ್ನು ತನ್ನದಾಗಿಸಿಕೊಂಡಿದೆ.

ಕಾರ್ಯಕ್ಷಮತೆ: ನೂತನ ಜುಪಿಟರ್ 110 ಸ್ಕೂಟರ್ 113 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.91 ಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಮತ್ತು 9.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ ಎಂದು ಅಂದಾಜಿಸಲಾಗಿದೆ.

2024 new TVS Jupiter 110 Scooter Top Things Yesterday Launch

ವೈಶಿಷ್ಟ್ಯ ಹಾಗೂ ಬಣ್ಣಗಳು: ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇಂಟಲಿಜೆಂಟ್ ಸ್ಟಾರ್ಟ್-ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ನೂತನವಾಗಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಪಡೆದಿದೆ. ಇದು ಕಾಲ್, ಟೆಕ್ಸ್ಟ್ ನೋಟಿಫಿಕೇಶನ್, ಫ್ಯುಯೆಲ್ ಎಕಾನಮಿ, ನ್ಯಾವಿಗೇಷನ್ ಸೇರಿದಂತೆ ಇನ್ನಿತರೇ ಮಾಹಿತಿಯನ್ನು ಸವಾರರಿಗೆ ಒದಗಿಸುತ್ತದೆ.

ಇದರೊಟ್ಟಿಗೆ ಈ ಸ್ಕೂಟರ್ ಯುಎಸ್‌‍ಬಿ ಚಾರ್ಜರ್, 2-ಲೀಟರ್ ಗ್ಲೋವ್ ಬಾಕ್ಸ್, 33-ಲೀಟರ್ ಸಾಮರ್ಥ್ಯದ ಅಂಡರ್ ಸೀಟ್ ಸೋರೇಜ್ ಹಾಗೂ ಫ್ಲಾಟ್ ಸೀಟ್‌ನ್ನು ಹೊಂದಿದೆ. ಡಾನ್ ಬ್ಲೂ, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್ ಮತ್ತು ಸ್ಟಾರ್ಲೈಟ್ ಬ್ಲೂ ಗ್ಲೋಸ್ ಸೇರಿದಂತೆ 6 ಬಣ್ಣಗಳೊಂದಿಗೂ ಲಭ್ಯವಿದೆ.

2024 new TVS Jupiter 110 Scooter Top Things Yesterday Launch

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್: ನೂತನ ಜುಪಿಟರ್ 110 ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಗ್ಯಾಸ್ ಫೀಲ್ಡ್ ಡ್ಯಾಂಪರ್ ಸಸ್ಪೆನ್ಷನ್ ಸೆಟಪ್ ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಮುಂದೆ 220 ಎಂಎಂ ಪೆಟಲ್ ಡಿಸ್ಕ್ ಹಾಗೂ ಹಿಂದೆ 130 ಎಂಎಂ ಡ್ರಮ್ ಬ್ರೇಕ್‌ನ್ನು ಹೊಂದಿದೆ. 12-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದ್ದು, ಟೈರ್‌ಗಳು ಸಹ ಅತ್ಯುತ್ತಮವಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, August 23, 2024, 11:33 [IST]
English summary
2024 new tvs jupiter 110 scooter top things yesterday launch
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+