TVS: ಹೊಚ್ಚ ಹೊಸ ಟಿವಿಎಸ್ ಸ್ಕೂಟರ್ ಗುರುವಾರ ಬಿಡುಗಡೆ, ಅತಿಕಡಿಮೆ ಬೆಲೆ.. ವಿಶೇಷತೆಗಳೇನು?
ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಟಿವಿಎಸ್ ಮೋಟಾರ್ (TVS Motor) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಸದ್ಯ ಕಂಪನಿಯು ನವೀಕರಿಸಿದ ಹೊಸ ಜುಪಿಟರ್ 110 (Jupiter 110) ಸ್ಕೂಟರ್‌ನ್ನು ಪರಿಚಯಿಸಲು ಆಗಸ್ಟ್ 22ಕ್ಕೆ ದಿನಾಂಕ ನಿಗದಿಪಡಿಸಿದೆ ಎಂದು ವರದಿಯಾಗಿದೆ. ಈ ಸ್ಕೂಟರ್‌ನ ಕುರಿತಂತೆ ಒಂದಷ್ಟು ಟೀಸರ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಖರೀದಿದಾರರ ಕುತೂಹಲವನ್ನು ಹೆಚ್ಚಿಸುತ್ತಿದೆ.
ಟಿವಿಎಸ್ ಬಿಡುಗಡೆಗೊಳಿಸಿರುವ ಟೀಸರ್ ಚಿತ್ರದಲ್ಲಿ ಹೊಸ ಸ್ಕೂಟರ್‌ನ ಮುಂಭಾಗ (ಫ್ರಂಟ್) ಎಲ್ಇಡಿ ಡಿಆರ್‌ಎಲ್‌ನೊಟ್ಟಿಗೆ ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ ಪಡೆದಿರುವುದನ್ನು ಗುರುತಿಸಬಹುದು. ಈ ನೂತನ ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್, ಖರೀದಿದಾರರನ್ನು ಆಕರ್ಷಿಸುವ ಸಲುವಾಗಿ ವಿನೂತನ ವಿನ್ಯಾಸವನ್ನು (ಡಿಸೈನ್) ಒಳಗೊಂಡಿರುವ ಸಾಧ್ಯತೆಯಿದೆ.

ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ ಪವರ್‌ಟ್ರೇನ್‌ನ್ನು ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಲಾಗುವುದಿಲ್ಲ ಎಂದು ತಿಳಿದುಬಂದಿದೆ. ಇದು 109.7 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿರಬಹುದು. ರೂ.77,000 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.
ಮುಂಬರಲಿರುವ ನೂತನ ಟಿವಿಎಸ್ ಜುಪಿಟರ್ 110 ಸ್ಕೂಟರ್‌ನ್ನು ಸವಾರರಿಗೆ ಗರಿಷ್ಠ ರಕ್ಷಣೆ ಒದಗಿಸುವಂತೆ ಸಿದ್ದಪಡಿಸಲಾಗಿದೆ ಎಂದು ಹೇಳಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ನ್ನು ಹೊಂದಿರಲಿದೆ. ಜೊತೆಗೆ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿರುವ ಸಾಧ್ಯತೆಯೂ ಹೆಚ್ಚಿದೆ.
ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿರುವ ನಿರೀಕ್ಷೆಯೂ ಇದೆ. ಎಲ್ಇಡಿ ಲೈಟ್‌ಗಳು, ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಡಿಜಿಟಲ್ ಡಿಸ್ಪ್ಲೇ, ನ್ಯಾವಿಗೇಶನ್, ಮೊಬೈಲ್ ಫೋನ್ ಚಾರ್ಜರ್ ಅನ್ನು ಹೊಂದಿರಬಹುದು ಎನ್ನಲಾಗಿದೆ. ಎರಡು ಹೆಲ್ಮೆಟ್‌ಗಳನ್ನು ಇಡಲು ಸಾಧ್ಯವಾಗುವಂತೆ ಬೂಟ್ ಸ್ಪೇಸ್ ಮತ್ತು ಫ್ಲೋರ್‌ಬೋರ್ಡ್‌ನಲ್ಲಿ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿರಬಹುದು ಎನ್ನಲಾಗಿದೆ.
ಪ್ರಸ್ತುತ ದೇಶೀಯವಾಗಿ ಟಿವಿಎಸ್ ಜುಪಿಟರ್ (TVS Jupiter) ಸ್ಕೂಟರ್, 110 ಮತ್ತು 125 ಸಿಸಿ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. ಜುಪಿಟರ್ 110 ರೂ.77,431 ದಿಂದ ರೂ.93,026 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.88 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 8.8 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ.
ಟಿವಿಎಸ್ ಜುಪಿಟರ್ 125 ಸ್ಕೂಟರ್ ರೂ.98,709 ದಿಂದ ರೂ.1.09 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 8.2 ಪಿಎಸ್ ಗರಿಷ್ಠ ಶಕ್ತಿ ಮತ್ತು 10.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 57.27 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








