Honda: 2025ರ ಹೋಂಡಾ ಆಕ್ಟಿವಾ 125 ಸ್ಕೂಟರ್ ಕುರಿತ ಪ್ರಮುಖಾಂಶಗಳು.. ಯಾರು ಹೇಳಲ್ಲ!
ದೇಶೀಯ ಗ್ರಾಹಕರ ನೆಚ್ಚಿನ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ಬೈಕ್ ಹಾಗೂ ಸ್ಕೂಟರ್‌ಗಳು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಹೋಂಡಾ ಮತ್ತಷ್ಟು ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆಯಲು ಕೆಲವೊಂದು ನವೀಕರಣದೊಂದಿಗೆ 2025ರ ಹೊಸ ಆಕ್ಟಿವಾ 125 ಸ್ಕೂಟರ್‌ನ್ನು ಪರಿಚಯಿಸಿದೆ. ಬನ್ನಿ.. ಈ ಸ್ಕೂಟರ್ ಕುರಿತ ಪ್ರಮುಖಾಂಶಗಳನ್ನು ತಿಳಿಯೋಣ.
ದರ: 2025ರ ಹೋಂಡಾ ಆಕ್ಟಿವಾ 125 (Honda Activa 125) ಸ್ಕೂಟರ್, ಅತ್ಯಂತ ಕಡಿಮೆ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ಕನಿಷ್ಠ ರೂ.94,442 ಮತ್ತು ಗರಿಷ್ಠ ರೂ.97,146 (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. ಡಿಎಲ್ಎಕ್ಸ್ ಹಾಗೂ ಹೆಚ್ - ಸ್ಮಾರ್ಟ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ.

ವಿನ್ಯಾಸ: ನೂತನ ಹೋಂಡಾ ಆಕ್ಟಿವಾ 125 ಸ್ಕೂಟರ್, ಬಹುತೇಕ ಹಳೆಯ ಮಾಡೆಲ್‌ನಂತೆಯೇ ಇದೆ. ಆದರೂ ಹೆಡ್‌ಲೈಟ್ ಹೊರ ಭಾಗದಲ್ಲಿ ಹೊಸದಾಗಿರುವ ವಿನ್ಯಾಸ (ಡಿಸೈನ್) ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯಲಿದೆ. 1260 ಎಂಎಂ ವೀಲ್‌ಬೇಸ್ & 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ.
ಕಾರ್ಯಕ್ಷಮತೆ: ಈ ಆಕ್ಟಿವಾ 125 ಸ್ಕೂಟರ್ ಶಕ್ತಿಯುತವಾದ 123.92 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 8.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 47 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ ಎಂದು ಹೇಳಲಾಗಿದೆ.

ವೈಶಿಷ್ಟ್ಯಗಳು: ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 110 ಕೆಜಿ ತೂಕವಿದ್ದು, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು: ನೂತನ ಹೋಂಡಾ ಆಕ್ಟಿವಾ 125 ಸ್ಕೂಟರ್, ಮುಂಭಾಗ (ಫ್ರಂಟ್) ಡಿಸ್ಕ್ ಹಾಗೂ ಹಿಂಭಾಗ (ರೇರ್) ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. ಮುಂದೆ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂದೆ ಸಿಂಗಲ್ ಸೈಡೆಡ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಅನ್ನು ಒಳಗೊಂಡಿದೆ.
ಇನ್ನು, ಒಂದಷ್ಟು ನವೀಕರಣದೊಂದಿಗೆ 2025ರ 'ಹೋಂಡಾ ಆಕ್ಟಿವಾ 125' ಮಾರಾಟಕ್ಕೆ ಬಂದಿರುವುದು ಗ್ರಾಹಕರಿಗೆ ಖುಷಿ ನೀಡಿದೆ. ಈ ಸ್ಕೂಟರ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುವ ನಿರೀಕ್ಷೆಯಿದೆ. ಮುಂಬರುವ ದಿನಗಳಲ್ಲಿ ನೂತನ 'ಆಕ್ಟಿವಾ 125'ಗೆ ದೇಶೀಯ ಗ್ರಾಹಕರಿಗೆ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications