Suzuki Access 125: ಪ್ರತಿಸ್ಪರ್ಧಿಗಳಿಗೆ ನಡುಕ.. ಶೀಘ್ರ ಹೊಸ ರೂಪದಲ್ಲಿ ಸುಜುಕಿ ಆಕ್ಸೆಸ್ 125 ಸ್ಕೂಟರ್ ಬಿಡುಗಡೆ!

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India) ಜನಪ್ರಿಯ ದ್ವಿಚಕ್ರ ವಾಹನ (Two wheeler) ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಅದರಲ್ಲೂ ಸುಜುಕಿ ಆಕ್ಸೆಸ್ 125 (Suzuki Access 125) ಗೇಮ್ ಚೇಂಜರ್ ಸ್ಕೂಟರ್ ಆಗಿ ಹೊರಹೊಮ್ಮಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸುಜುಕಿ ಕಂಪನಿಯು ಈ ಸ್ಕೂಟರ್‌ನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲು ಸಿದ್ದತೆಯನ್ನು ನಡೆಸುತ್ತಿದೆ.

ಇತ್ತೀಚೆಗೆ, ಮುಂದಿನ ವರ್ಷದ (2025) ಆರಂಭದಲ್ಲಿ ಬಿಡುಗಡೆಯಾಗಲಿದೆ ಎನ್ನಲಾದ ನವೀಕರಿಸಿರುವ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್ ರಸ್ತೆಯಲ್ಲಿ ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿತ್ತು. ಆ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಇದರಲ್ಲಿ ನೂತನ ಸ್ಕೂಟರ್‌ನ ವಿನ್ಯಾಸದಲ್ಲಿ (ಡಿಸೈನ್) ಹಲವಾರು ಬದಲಾವಣೆಯಾಗಿರುವುದನ್ನು ಗುರುತಿಸಬಹುದು.

2025 New Suzuki Access 125 Scooter Spotted On Testing Details

ಪರೀಕ್ಷಾರ್ಥ ಓಡಾಟದ ವೇಳೆಯಲ್ಲಿ ಕಂಡುಬಂದ ಸುಜುಕಿ ಆಕ್ಸೆಸ್ 125 ಸ್ಕೂಟರ್, ಮುಂಭಾಗ (ಫ್ರಂಟ್) ಆಕರ್ಷಕವಾಗಿ ಸಿದ್ಧಪಡಿಸಲಾದ ಹೆಡ್‌ಲ್ಯಾಂಪ್ ಹೊಂದಿರುವುದನ್ನು ಸೂಕ್ಷ್ಮವಾಗಿ ಗಮನಿಸಬಹುದು. ಈ ಹಿಂದೆ ಪ್ರಾಯೋಗಿಕ ಸಂಚಾರದ ಸಂದರ್ಭದಲ್ಲಿ ಕಾಣಿಸಿಕೊಂಡ ಇದೇ ಸ್ಕೂಟರ್, ಹಿಂಭಾಗ (ರೇರ್) ಹೊಸದಾಗಿರುವ ಮಡ್‌ಗಾರ್ಡ್ ಮತ್ತು ಹೀಟ್ ಶೀಲ್ಡ್ ಎಕ್ಸಾಸ್ಟ್ ಸಿಸ್ಟಮ್ ಹೊಂದಿದ್ದನ್ನು ನೋಡಬಹುದಾಗಿತ್ತು.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್ ರೂ.83,482 ದಿಂದ ರೂ.94,082 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ರೈಡ್ ಕನೆಕ್ಟ್ ಎಡಿಷನ್ - ಡಿಸ್ಕ್, ಸ್ಪೆಷಲ್ ಎಡಿಷನ್ - ಡಿಸ್ಕ್, ಡ್ರಮ್ ಮತ್ತು ಡಿಸ್ಕ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ.

2025 New Suzuki Access 125 Scooter Spotted On Testing Details

ನೂತನ ಸುಜುಕಿ ಆಕ್ಸೆಸ್ 125 ಸ್ಕೂಟರ್, 124 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 8.7 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 45 ಕೆಎಂಪಿಎಲ್‌ವರೆಗೆ ನೀಡುತ್ತದೆ.

ಈ ಸುಜುಕಿ ಆಕ್ಸೆಸ್ 125 ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಉತ್ತಮವಾರುವ ಹೆಡ್‌ಲ್ಯಾಂಪ್, ಸೆಮಿ - ಡಿಜಿಟಲ್ ಇನ್ಫಾರ್ಮಶನ್ ಪ್ಯಾನೆಲ್ ಮತ್ತು ಸುಜುಕಿ ರೈಡ್ ಕನೆಕ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು 103 ಕೆಜಿ ತೂಕವಿದ್ದು, 5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ಹೊಸ ಸ್ಕೂಟರ್ ಮೆಟಾಲಿಕ್ ಮ್ಯಾಟ್ ಪ್ಲಾಟಿನಂ ಸಿಲ್ವರ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಹಾಗೂ ಸಾಲಿಡ್ ಐಸ್ ಗ್ರೀನ್/ ಪರ್ಲ್ ಮಿರಾಜ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಸಸ್ಪೆನ್ಷನ್ ಸೆಟಪ್ ಪಡೆದಿದ್ದು, ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ. ಈ ಸುಜುಕಿ ಆಕ್ಸೆಸ್ 125ಗೆ ಹೋಂಡಾ ಆಕ್ಟಿವಾ 125 ಮತ್ತು ಟಿವಿಎಸ್ ಜುಪಿಟರ್ 125 ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: GaadiWaadi

More from DriveSpark

Article Published On: Monday, September 30, 2024, 12:46 [IST]
English summary
2025 new suzuki access 125 scooter spotted on testing details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+