Ather: ಶೋರೂಂ ತಲುಪಿದ ಎಥರ್ 450 ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್.. ವಿಶೇಷೆತೆಗಳೇನು?

ಬೆಂಗಳೂರು ಮೂಲದ ಎಥರ್ ಎನರ್ಜಿ (Ather Energy) ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಖ್ಯಾತಿ ಗಳಿಸಿದೆ. ಇತ್ತೀಚೆಗೆ ಹೊಚ್ಚ ಹೊಸ 450 ಅಪೆಕ್ಸ್ (450 Apex) ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿನೆಯನ್ನು ಪ್ರಾರಂಭಿಸಿದ್ದು, ಈಗ ದೇಶಾದ್ಯಂತವಿರುವ ಶೋರೂಂಗಳಿಗೆ ಈ ಸ್ಕೂಟರ್‌ನ್ನು ತಲುಪಿಸಲು ಶುರು ಮಾಡಿದೆ.

ಫೆ.23 ರಿಂದಲೇ ನೂತನ ಎಥರ್ 450 ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಕಂಪನಿಯ ಹಲವು ಡೀಲರ್‌ಶಿಪ್‌ಗಳಲ್ಲಿ ಪ್ರದರ್ಶಿಸಲಾಗಿದೆ. ಮಾರ್ಚ್ ಮೊದಲ ವಾರದಿಂದ ಬೆಂಗಳೂರು, ಪುಣೆ ಹಾಗೂ ಗೋವಾದಲ್ಲಿ ವಿತರಣೆಗಳು ಆರಂಭವಾಗಲಿದೆ. ಈ 450 ಅಪೆಕ್ಸ್ ಇ-ಸ್ಕೂಟರ್ '450ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ರೀತಿಯಲ್ಲಿಯೇ ಪ್ಲಾಟ್‌ಫಾರ್ಮ್ ಅನ್ನು ಹೊಂದಿದ್ದು, ವಿನ್ಯಾಸದಲ್ಲಿ ಕೆಲವೊಂದು ಬದಲಾವಣೆಗಳನ್ನು ಪಡೆದುಕೊಂಡಿದೆ.

Ather 450 Apex Electric Scooter Starts Arriving At Showroom

ಈ ಹೊಸ ಎಥರ್ 450 ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ವೀಲ್ಸ್, ಲೋಗೋ ಹಾಗೂ ಫ್ರೇಮ್ ಆರೆಂಜ್ (ಕಿತ್ತಳೆ) ಬಣ್ಣವನ್ನು ಒಳಗೊಂಡಿದೆ. ಪ್ರಮುಖವಾಗಿ ಸೈಡ್ ಪ್ಯಾನೆಲ್‌ (ಬದಿ)ಗಳು ಪಾರದರ್ಶಕತೆಯಿಂದ ಕೂಡಿವೆ. ಜೊತೆಗೆ ನವೀನವಾದ ಬ್ಲೂ (ನೀಲಿ) ಬಣ್ಣವನ್ನು ಹೊಂದಿದ್ದು, ದೇಶೀಯ ಮಾರುಕಟ್ಟೆಯಲ್ಲಿ 450 ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ರೂ.1.89 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಎಥರ್ 450 ಅಪೆಕ್ಸ್ (Ather 450 Apex) ಇ-ಸ್ಕೂಟರ್, 3.7 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದೆ. ಇದರಲ್ಲಿ ಬಳಕೆ ಮಾಡಿರುವ ಪಿಎಂಎಸ್ ಮೋಟಾರ್ 7 ಕೆಡಬ್ಲ್ಯೂ (9.3 ಬಿಹೆಚ್‍ಪಿ) ಗರಿಷ್ಠ ಶಕ್ತಿಯನ್ನು ಹೊರಹಾಕುತ್ತದೆ. ಕೇವಲ 2.9 ಸೆಕೆಂಡುಗಳಲ್ಲಿ 40 ಕೆಎಂಪಿಹೆಚ್ ವೇಗವಾಗಿ ಪಡೆಯಲಿದ್ದು, ಹೊಸದಾದ ವ್ರಾಪ್ ಪ್ಲಸ್ ಎಂಬ ರೈಡಿಂಗ್ ಮೋಡ್ ಅನ್ನು ಹೊಂದಿದೆ.

ಎಥರ್ ಮಾರಾಟಗೊಳಿಸುವ ಆರಂಭಿಕ ಮಾದರಿ 450ಎಸ್ (450S) ಎಲೆಕ್ಟ್ರಿಕ್ ಸ್ಕೂಟರ್ ಬೆಂಗಳೂರಿನಲ್ಲಿ ರೂ.1,16,969 ಆನ್-ರೋಡ್ ಬೆಲೆಯನ್ನು ಹೊಂದಿದೆ ಎಂದು ವರದಿಯಾಗಿದೆ. ಈ ಸ್ಕೂಟರ್ 2.9 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹಾಗೂ 5.4 ಕೆಡಬ್ಲ್ಯೂ (kW) ಎಲೆಕ್ಟ್ರಿಕ್ ಮೋಟಾರ್ ಪಡೆದಿದೆ. ಭರ್ತಿ ಚಾರ್ಜ್ ನಲ್ಲಿ 115 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ.

ಈ ಎಥರ್ 450ಎಸ್ (450S) ಎಲೆಕ್ಟ್ರಿಕ್ ಸ್ಕೂಟರ್, ಕೇವಲ 3.9 ಸೆಕೆಂಡುಗಳಲ್ಲಿ 0 - 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದ್ದು, 90 ಕೆಎಂಪಿಹೆಚ್ ಟಾಪ್ ಸ್ವೀಡ್ ಹೊಂದಿದೆ. ಮನೆಯ ವಿದ್ಯುತ್ ಉಪಯೋಗದಲ್ಲಿ ಈ ಸ್ಕೂಟರ್ ಬ್ಯಾಟರಿ ಪ್ಯಾಕ್ 0 - 80% ಚಾರ್ಜ್ ಆಗಲು 6 ಗಂಟೆ 36 ನಿಮಿಷ ತೆಗೆದುಕೊಳ್ಳುತ್ತದೆ. 7-ಇಂಚಿನ ಡೀಪ್‌ವ್ಯೂ ಡಿಸ್‌ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಎಥರ್ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ರೂ.1.26 ಲಕ್ಷದಿಂದ ರೂ.1.29 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. 2.9 ಕೆಡಬ್ಲ್ಯೂಹೆಚ್ (kWh) ಮತ್ತು 3.7 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಕ್ರಮವಾಗಿ ಸಂಪೂರ್ಣ ಚಾರ್ಜ್ ನಲ್ಲಿ 115 ಕಿ.ಮೀ ರಿಂದ 145 ಕಿ.ಮೀ ಓಡಬಲ್ಲದು. 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, February 24, 2024, 13:40 [IST]
English summary
Ather 450 apex electric scooter starts arriving showroom
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+