Ather Energy: ತಕ್ಷಣ ಶೋರೂಂಗೆ ಹೋಗಿ..! ಬೆಂಗಳೂರಿನ ಎಥರ್‌ನಿಂದ ಬಂಪರ್ ಆಫರ್, ಏನದು?
ಬೆಂಗಳೂರು ಮೂಲದ ಎಥರ್ ಎನರ್ಜಿ (Ather Energy) ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two wheeler) ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಈ ಸೆಪ್ಟೆಂಬರ್‌ನಲ್ಲಿ 12,579 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 7,169 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 75% ಪ್ರಗತಿ ಸಾಧಿಸಿದೆ. ಈ ಮೂಲಕ ಶೇಕಡ 14% ಮಾರುಕಟ್ಟೆ ಪಾಲನ್ನು ಹೊಂದಿದೆ. ಸದ್ಯ, ಎಥರ್ ಎನರ್ಜಿ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂಭ್ರಮ ಹೆಚ್ಚಿಸಲು 'ಸ್ಪೆಷಲ್ ಫೆಸ್ಟಿವಲ್ ಆಫರ್'ನ್ನು ಪ್ರಕಟಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಎಥರ್ ಎನರ್ಜಿಯು 450ಎಕ್ಸ್ (450X) ಮತ್ತು 450 ಅಪೆಕ್ಸ್ (450 Apex) ಖರೀದಿ ಮೇಲೆ ರೂ.25,000ವರೆಗೆ ರಿಯಾಯಿತಿ ಪ್ರಯೋಜನವನ್ನು ಘೋಷಣೆ ಮಾಡಿದೆ. ಇದು ಬ್ಯಾಟರಿ ವಾರಂಟಿ, ಫ್ರೀ ಎಥರ್ ಗ್ರಿಡ್ ಚಾರ್ಜಿಂಗ್ ಮತ್ತು ಕ್ಯಾಶ್‌ಬ್ಯಾಕ್ ಸೇರಿದಂತೆ ವಿವಿಧ ಕೊಡುಗೆಗಳನ್ನು (ಆಫರ್) ಹೊಂದಿದೆ. ಈ ಸಂಬಂಧ ಹೆಚ್ಚಿನ ವಿವರಗಳಿಗಾಗಿ ನಿಮ್ಮ ಸಮೀಪದ ಎಥರ್ ಶೋರೂಂಗೆ ಭೇಟಿ ನೀಡಿರಿ.

ದೇಶೀಯವಾಗಿ ಖರೀದಿಗೆ ದೊರೆಯುವ ಎಥರ್ 450ಎಕ್ಸ್ (Ather 450X) ಎಲೆಕ್ಟ್ರಿಕ್ ಸ್ಕೂಟರ್, ರೂ.1.41 ಲಕ್ಷದಿಂದ ರೂ.1.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇದರ 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ರೂಪಾಂತರ (ವೇರಿಯೆಂಟ್) ಸಂಪೂರ್ಣ ಚಾರ್ಜ್‌ನಲ್ಲಿ 111 ಕಿಲೋಮೀಟರ್‌ವರೆಗೂ ಓಡುತ್ತದೆ.
ಎಥರ್ 450ಎಕ್ಸ್ ಇ-ಸ್ಕೂಟರ್‌ನ 3.7 ಕೆಡಬ್ಲ್ಯೂಹೆಚ್ ಬ್ಯಾಟರಿ ಪಡೆದಿರುವ ರೂಪಾಂತರ, ಭರ್ತಿ ಚಾರ್ಜ್‌ನಲ್ಲಿ 150 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ. ಇವೆರೆಡು ರೂಪಾಂತರಗಳು 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿವೆ. 7-ಇಂಚಿನ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿವೆ.

ಎಥರ್ 450 ಅಪೆಕ್ಸ್ (Ather 450 Apex) ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.1.95 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 3.7 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 157 ಕಿಲೋಮೀಟರ್‌ವರೆಗೂ ಕ್ರಮಿಸುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ನೂತನ ಎಥರ್ ರಿಜ್ಟಾ (Ather Rizta) ಎಲೆಕ್ಟ್ರಿಕ್ ಸ್ಕೂಟರ್ ಕೂಡ ಖರೀದಿಗೆ ಲಭ್ಯವಿದೆ. ಆದರೆ, ಯಾವುದೇ ಹಣಕಾಸಿನ ಪ್ರಯೋಜನಗಳು ಲಭ್ಯವಿಲ್ಲ. ಇದು ರೂ.1.10 ದಿಂದ ರೂ.1.45 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 2.9 ಕೆಡಬ್ಲ್ಯೂಹೆಚ್ & 3.7 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 123 ರಿಂದ 160 ಕಿಲೋಮೀಟರ್ ಓಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಈ ಎಥರ್ ರಿಜ್ಟಾ ಇ-ಸ್ಕೂಟರ್ ಸ್ಮಾರ್ಟ್, ಇಕೋ ಹಾಗೂ ಜಿಪ್ ಎಂಬ ಮೂರು ಆಕರ್ಷಕ ರೈಡಿಂಗ್ ಮೋಡ್ ಆಯ್ಕೆಯನ್ನು ಪಡೆದಿದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು (ಫೀಚರ್) ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ & ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ. ಸಿಯಾಚಿನ್ ವೈಟ್ ಮೊನೊ ಮತ್ತು ಡೆಕ್ಕನ್ ಗ್ರೇ ಮೊನೊ ಬಣ್ಣಗಳೊಂದಿಗೂ ಸಿಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








