ಬೆಂಗಳೂರಿನ ಎಥರ್‌ನಿಂದ ದಾಖಲೆ ಸಂಖ್ಯೆಯಲ್ಲಿ ಇ-ಸ್ಕೂಟರ್‌ಗಳ ಮಾರಾಟ.. 'ರಿಜ್ಟಾ'ಗೆ ಮುಗಿಬಿದ್ದ ಗ್ರಾಹಕರು!
ಬೆಂಗಳೂರು ಮೂಲದ ಎಥರ್ ಎನರ್ಜಿ (Ather Energy), ಪ್ರಖ್ಯಾತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಕಂಪನಿಯ ನವೆಂಬರ್ ತಿಂಗಳ ಮಾರಾಟದ ಅಂಕಿಅಂಶಗಳ ವರದಿ ಪ್ರಕಟಗೊಂಡಿದ್ದು, ನೀರಿಕ್ಷೆಗೂ ಮೀರಿದ ಪ್ರಗತಿಯನ್ನು ಸಾಧಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ನವೆಂಬರ್ - 2024) 'ಎಥರ್ ಎನರ್ಜಿ' ಬರೋಬ್ಬರಿ 12,741 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2023ರಲ್ಲಿ ಇದೇ ಅವಧಿಯಲ್ಲಿ ಮಾರಲ್ಪಟ್ಟ 9,342 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 36% ಬೆಳವಣಿಗೆ ಕಂಡಿದೆ.

ದೇಶೀಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿಯೂ ಓಲಾ ಎಲೆಕ್ಟ್ರಿಕ್, ಟಿವಿಎಸ್ ಮೋಟಾರ್, ಬಜಾಜ್ ಆಟೋ ಬಳಿಕ, ಎಥರ್ ಎನರ್ಜಿ ನಾಲ್ಕನೇ ಸ್ಥಾನದಲ್ಲಿದೆ. ಶೇಕಡ 11% ಮಾರುಕಟ್ಟೆ ಪಾಲನ್ನು ಹೊಂದಿದೆ. ಎಥರ್ ಕಂಪನಿಯು 2024ರ ಜನವರಿಯಿಂದ ನವೆಂಬರ್‌ವರೆಗಿನ ಮೊದಲ 11 ತಿಂಗಳ ಅವಧಿಯಲ್ಲಿ 1 ಲಕ್ಷ ಯುನಿಟ್ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ.
ಅದೇ 2023ರ ಜನವರಿಯಿಂದ ನವೆಂಬರ್‌ವರೆಗೆ ಎಥರ್ ಎನರ್ಜಿ ಸರಿ ಸುಮಾರು 98,181 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿತ್ತು. ಒಮ್ಮೆ ಈ ವರ್ಷದ ಮಾರ್ಚ್‌ನಲ್ಲಿ 17,428 ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸಿ ಐತಿಹಾಸಿಕ ಸಾಧನೆಯನ್ನು ಮಾಡಿತ್ತು. ಆ ನಂತರದ ತಿಂಗಳಲ್ಲಿ ಮಾರಾಟ ಪ್ರಮಾಣ ಕುಸಿತವಾಗಿತ್ತು. ಮತ್ತೆ ಆಗಸ್ಟ್‌ನಿಂದ ಮಾರಾಟ ಸಂಖ್ಯೆ ಹೆಚ್ಚಳಗೊಂಡಿತ್ತು.

ಎಥರ್ ಎನರ್ಜಿ, ರಿಜ್ಟಾ (Rizta) ಎಲೆಕ್ಟ್ರಿಕ್ ಸ್ಕೂಟರ್ ನೆರವಿನಿಂದ ಈ ಪರಿಪ್ರಮಾಣದಲ್ಲಿ ಯಶಸ್ಸನ್ನು ಸಾಧಿಸಿದೆ. ನೂತನ ಎಥರ್ ರಿಜ್ಟಾ ಇ-ಸ್ಕೂಟರ್ ಕನಿಷ್ಠ ರೂ.1.10 ಲಕ್ಷ ಮತ್ತು ಗರಿಷ್ಠ ರೂ.1.46 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.7 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ವರೆಗೂ ಓಡುತ್ತದೆ.
ಹೊಸ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್, ಎಲ್‌ಸಿಡಿ ಸ್ಕ್ರೀನ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಸ್ಮಾರ್ಟ್, ಇಕೋ ಮತ್ತು ಜಿಪ್ ಎಂಬ 3 ಆಕರ್ಷಕ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ & ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಇನ್ನು, ಎಥರ್ ಎನರ್ಜಿ '450' ಸರಣಿಯ ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ವಿದೇಶಿ ಮಾರುಕಟ್ಟೆಗೂ ಲಗ್ಗೆ ಇಟ್ಟಿದ್ದು, ಈ ಡಿಸೆಂಬರ್ ತಿಂಗಳಲ್ಲಿ ಎಥರ್ ಕಂಪನಿ ಸ್ಕೂಟರ್‌ಗಳು ಮತ್ತಷ್ಟು ಸಂಖ್ಯೆಯಲ್ಲಿ ಮಾರಾಟಗೊಳಿಸುವ ನೀರಿಕ್ಷೆಯಿದೆ. ಒಟ್ಟಾರೆ ಮಾರಾಟದಲ್ಲಿ ಹೇಗೆ ಪ್ರಗತಿಯನ್ನು ಸಾಧಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








