ಎಥರ್‌ನಿಂದ ಗಾಬರಿ ಹುಟ್ಟಿಸುವ ದಾಖಲೆ: 20,000 ಸ್ಕೂಟರ್‌ಗಳು ಮಾರಾಟ.. 'ರಿಜ್ಟಾ' ಆಯ್ತು ಗೇಮ್ ಚೇಂಜರ್!

ಬೆಂಗಳೂರಿನ ಎಥರ್ ಎನರ್ಜಿ (Ather Energy) ಪ್ರಖ್ಯಾತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 450ಎಸ್ (450S), 450 ಅಪೆಕ್ಸ್ (450 Apex) ಹಾಗೂ ರಿಜ್ಟಾ (Rizta) ಸೇರಿದಂತೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್‌ನಲ್ಲಿ ಕಂಪನಿಯ ಇ-ಸ್ಕೂಟರ್‌ಗಳು ಪೆಟ್ರೋಲ್ ಚಾಲಿತ ಸ್ಕೂಟರ್‌ಗಳಿಗೆ ಸವಾಲೆಸೆಯುವ ರೀತಿಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ದೇಶಾದ್ಯಂತ ದಸರಾ ಹಾಗೂ ದೀಪಾವಳಿ ಹಿನ್ನೆಲೆ, ಅಕ್ಟೋಬರ್ 30 ರವರೆಗೆ ಬರೋಬ್ಬರಿ 20,000 ಎಥರ್‌ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿದೆ. ಸೆಪ್ಟೆಂಬರ್‌ನಲ್ಲಿ 12,828 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಅದಕ್ಕೆ ಹೋಲಿಸಿದರೆ, 7000 ಯುನಿಟ್ ಇ-ಸ್ಕೂಟರ್‌ಗಳನ್ನು ಹೆಚ್ಚುವರಿಯಾಗಿ ಮಾರಾಟ ಮಾಡುವುದರೊಂದಿಗೆ ಶೇಕಡ 70% ಪ್ರಗತಿ ಸಾಧಿಸಲಾಗಿದೆ ಎಂದು ವರದಿಯಾಗಿದೆ.

Ather Energy Sold Highest Electric Scooters In October 2024 Rizta Become Game Changer Details

ಅಕ್ಟೋಬರ್‌ನ ಒಟ್ಟು ಮಾರಾಟದಲ್ಲಿ ಎಥರ್‌ನ ಜನಪ್ರಿಯ 'ರಿಜ್ಟಾ' ಇ-ಸ್ಕೂಟರ್ ಗೇಮ್ ಚೇಂಜರ್ ಆಗಿ ಹೊರಹೊಮ್ಮಿದೆ. ಶೇಕಡ 60 ರಿಂದ 70% ಗ್ರಾಹಕರು ಇದೇ ಸ್ಕೂಟರ್‌ಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ನೂತನ ಎಥರ್‌ ರಿಜ್ಟಾ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.1.10 ರಿಂದ ರೂ.1.45 ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ.

ಈ ಎಥರ್‌ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.7 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

Ather Energy Sold Highest Electric Scooters In October 2024 Rizta Become Game Changer Details

ಹೊಚ್ಚ ಹೊಸ ಎಥರ್‌ ರಿಜ್ಟಾ ಇ-ಸ್ಕೂಟರ್, 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸಿಯಾಚಿನ್ ವೈಟ್ ಮೊನೊ ಹಾಗೂ ಡೆಕ್ಕನ್ ಗ್ರೇ ಮೊನೊ ಒಳಗೊಂಡಂತೆ ಹಲವು ಬಣ್ಣಗಳನ್ನು ಪಡೆದಿದೆ. ಸ್ಮಾರ್ಟ್, ಇಕೋ & ಜಿಪ್ ಎಂಬ ರೈಡಿಂಗ್ ಮೋಡ್‌ ಆಯ್ಕೆಯನ್ನು ಹೊಂದಿದೆ.

ಈ ಎಥರ್‌ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ ಪ್ರಯಾಣಿಕರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) 200 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ಜೊತೆಗೆ ಮುಂದೆ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂದೆ ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದ್ದು, 12-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ.

ದೇಶೀಯ ಮಾರುಕಟ್ಟೆಯಲ್ಲಿ ಎಥರ್‌ ಕಂಪನಿಯು ವಿವಿಧ '450' ಸರಣಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಸಹ ಮಾರಾಟಗೊಳಿಸುತ್ತಿದೆ. 450 ಅಪೆಕ್ಸ್ ಇ-ಸ್ಕೂಟರ್ ರೂ.1.95 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 3.7 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 157 ಕಿಲೋಮೀಟರ್‌ವರೆಗೆ ಓಡುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಎಥರ್ 450ಎಸ್ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೇಳುವುದಾದರೆ, ರೂ.1.26 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2.9 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 115 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇದರ ಬ್ಯಾಟರಿ ಪ್ಯಾಕ್ 6 ಗಂಟೆ 36 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗುತ್ತದೆ.

ಎಥರ್ 450ಎಕ್ಸ್ ಇ-ಸ್ಕೂಟರ್ ರೂ.1.41 ರಿಂದ ರೂ.1.55 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 111 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 7-ಇಂಚಿನ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, November 4, 2024, 8:30 [IST]
English summary
Ather energy sales highest electric scooters in october 2024 rizta become game changer details
Read more on ather energy india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+