Ather: ಬೆಂಗಳೂರಿನ ಎಥರ್ ರಿಜ್ಟಾ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಶುರು.. ಬೆಲೆ ಎಷ್ಟು ವಿಶೇಷತೆಗಳೇನು?

ಬೆಂಗಳೂರು ಮೂಲದ ಎಥರ್ ಎನರ್ಜಿ (Ather Energy) ಪ್ರಖ್ಯಾತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ 450ಎಕ್ಸ್ ಹಾಗೂ 450ಎಸ್ ಸೇರಿದಂತೆ ವಿವಿಧ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಕೆಲವೇ ತಿಂಗಳ ಹಿಂದೆ ಬಿಡುಗಡೆಗೊಳಿಸಿದ್ದ ರಿಜ್ಟಾ (Rizta) ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಆರಂಭಿಸಿದೆ. ಬನ್ನಿ.. ಆ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಎಥರ್ ಎನರ್ಜಿ ಸಿಇಒ ತರುಣ್ ಮೆಹ್ತಾ (Tarun Mehta) ತಮ್ಮ'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ರಿಜ್ಟಾ ಇ-ಸ್ಕೂಟರ್ ಡೆಲಿವರಿಯನ್ನು ಖಚಿತಪಡಿಸಿದ್ದಾರೆ. 'ಕಾಯುವಿಕೆ ಕೊನೆಗೂ ಮುಗಿದಿದೆ. ನಮ್ಮ ಮೊದಲ ಫ್ಯಾಮಿಲಿ ಸ್ಕೂಟರ್ ರಿಜ್ಟಾದ ವಿತರಣೆಗಳು ಅಹಮದಾಬಾದ್, ಪುಣೆ, ದೆಹಲಿ, ಲಕ್ನೋ, ಆಗ್ರಾ, ಜೈಪುರ, ನಾಗ್ಪುರ ಹಾಗೂ ಆಂಧ್ರಪ್ರದೇಶದಾದ್ಯಂತ ಪ್ರಾರಂಭಗೊಂಡಿದೆ. ಶೀಘ್ರದಲ್ಲೇ ಇತರೆ ನಗರಗಳಲ್ಲಿಯೂ ಶುರುವಾಗಲಿದೆ' ಎಂದು ಬರೆದುಕೊಂಡಿದ್ದಾರೆ.

Ather Rizta Electric Scooter Deliveries Begin Price And Range Details

ಹೊಚ್ಚ ಹೊಸ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್, ರೂ.1.10 ಲಕ್ಷದಿಂದ ರೂ.1.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.9 ಕೆಡಬ್ಲ್ಯೂಹೆಚ್ ಹಾಗೂ 3.7 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್ ಓಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಸ್ಮಾರ್ಟ್, ಇಕೋ ಹಾಗೂ ಜಿಪ್ ಎಂಬ ರೈಡಿಂಗ್ ಮೋಡ್‌ನ್ನು ಹೊಂದಿದೆ.

ಈ ರಿಜ್ಟಾ ಇ-ಸ್ಕೂಟರ್ ಸಿಯಾಚಿನ್ ವೈಟ್ ಮೊನೊ, ಡೆಕ್ಕನ್ ಗ್ರೇ ಮೊನೊ, ಪ್ಯಾಂಗೊಂಗ್ ಬ್ಲೂ ಡ್ಯುಯೊ, ಕಾರ್ಡಮೊಮ್ ಗ್ರೀನ್ ಡ್ಯುಯೊ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) 200 ಎಂಎಂ ಡಿಸ್ಕ್ ಬ್ರೇಕ್ ಹಾಗೂ ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

Ather Rizta Electric Scooter Deliveries Begin Price And Range Details

ಎಥರ್ ಮಾರಾಟಗೊಳಿಸುವ 450ಎಕ್ಸ್ ಮತ್ತು 450ಎಸ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಸಹ ಕೈಗಟುಕುವ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿವೆ. ಎಥರ್ 450ಎಕ್ಸ್ (Ather 450X) ರೂ.1.41 ದಿಂದ ರೂ.1.55 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 150 ಕಿ.ಮೀ ಕ್ರಮಿಸುತ್ತದೆ. ಎಥರ್ 450ಎಸ್ (Ather 450S) ರೂ.1.26 ಲಕ್ಷ ಬೆಲೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 115 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ.

ಜೂನ್‌ ತಿಂಗಳು ಎಥರ್ ಎನರ್ಜಿಯು 6,097 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಈ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಶೇಕಡ 7.66 ಪಾಲನ್ನು ತನ್ನದಾಗಿಸಿಕೊಂಡಿದೆ. 2024ರ ಹಣಕಾಸು ವರ್ಷದಲ್ಲಿ ರೂ.1,753.8 ಕೋಟಿ ಆದಾಯವನ್ನು ಗಳಿಸಿದೆ. ಕಂಪನಿಯು ತನ್ನ ಉದ್ಯಮವನ್ನು ವಿಸ್ತರಿಸಲು ಮುಂದಾಗಿದ್ದು, ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೂ.2,000 ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಮೂರನೇ ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಬರೋಬ್ಬರಿ 4000 ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆಯಿದೆ.

ಜೂನ್ 26ರಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿ, ಎಥರ್ ಎನರ್ಜಿ ಬಂಡವಾಳ ಹೂಡಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಔರಂಗಾಬಾದ್‌ನಲ್ಲಿ ಆರಂಭಗೊಳ್ಳುತ್ತಿರುವ ಉತ್ಪಾದನಾ ಘಟಕದಲ್ಲಿ ವಾರ್ಷಿಕ 1 ಮಿಲಿಯನ್ (10 ಲಕ್ಷ) ಯುನಿಟ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಮತ್ತು ಬ್ಯಾಟರಿ ಪ್ಯಾಕ್‌ಗಳನ್ನು ಉತ್ಪಾದಿಸಲಾಗುತ್ತದೆ ಎಂದು ತಿಳಿದುಬಂದಿದೆ. ಪ್ರಸ್ತುತ ಕಂಪನಿಯು ತಮಿಳುನಾಡಿನ ಹೊಸೂರಿನಲ್ಲಿ 2 ತಯಾರಿಕಾ ಘಟಕಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, July 3, 2024, 18:50 [IST]
English summary
Ather rizta electric scooter deliveries begin price and range details
Read more on ather energy india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+