Ather: ಬಿಡುಗಡೆಗೂ ಮುನ್ನ ಕಾಣಿಸಿಕೊಂಡ ಎಥರ್ ರಿಜ್ಟಾ ಫ್ಯಾಮಿಲಿ ಸ್ಕೂಟರ್.. ಬೆಲೆ ಎಷ್ಟು, ಹೇಗಿರಲಿದೆ?
ಬೆಂಗಳೂರಿನ ಎಥರ್ ಎನರ್ಜಿ (Ather Energy) ಆಕರ್ಷಕ 450 ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸುತ್ತಿದೆ. ನಾಳೆ ರಿಜ್ಟಾ (Rizta) ಹೆಸರಿನ ಹೊಸ ಫ್ಯಾಮಿಲಿ ಸ್ಕೂಟರ್‌ನ್ನು ಪರಿಚಯಿಸಲು ಅಂತಿಮ ಹಂತದ ಸಿದ್ಧತೆಯನ್ನು ನಡೆಸುತ್ತಿದೆ. ರಸ್ತೆಯಲ್ಲಿ ಟಿವಿ ಜಾಹೀರಾತಿಗಾಗಿ ಶೂಟಿಂಗ್ ನಡೆಸುವಾಗ ಈ ಸ್ಕೂಟರ್ ಕ್ಯಾಮರಾ ಕಣ್ಣಿಗೆ ಸೆರೆಸಿಕ್ಕಿದೆ.
ನೂತನ ಎಥರ್ ರಿಜ್ಟಾ (Ather Rizta) ಎಲೆಕ್ಟ್ರಿಕ್ ಸ್ಕೂಟರ್ ಸಾಕಷ್ಟು ಅತ್ಯಾಧುನಿಕವಾಗಿದ್ದು, 450 ಸರಣಿ ಸ್ಕೂಟರ್‌ಗಳಿಗಿಂತ ಭಿನ್ನವಾದ ವಿನ್ಯಾಸವನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಪ್ರಯಾಣಿಸಲು ದೊಡ್ಡದಾದ ಆಸನ (ಸೀಟ್) ವ್ಯವಸ್ಥೆಯನ್ನು ಒಳಗೊಂಡಿದೆ. ಹೆಚ್ಚಿನ ವಸ್ತುಗಳನ್ನು ತೆಗೆದುಕೊಂಡು ಹೋಗಲು ವಿಶಾಲವಾದ ಬೂಟ್ ಸ್ಪೇಸ್ ಕೂಡ ಪಡೆದಿರುವ ಸಾಧ್ಯತೆಯಿದೆ.

ಈ ಎಥರ್ ರಿಜ್ಟಾ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ಸ್, ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿರಲಿದೆ. ಸುರಕ್ಷತೆಗಾಗಿ ಮುಂಭಾಗ ಡಿಸ್ಕ್ ಹಾಗೂ ಹಿಂಭಾಗ ಡ್ರಮ್ ಬ್ರೇಕ್ ಆಯ್ಕೆವನ್ನು ಪಡೆದಿರಲಿದ್ದು, ಸಿಂಗಲ್ ಚಾನೆಲ್ ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಕೂಡ ಒಳಗೊಂಡಿರುವ ನಿರೀಕ್ಷೆಯಿದ್ದು, 12-ಇಂಚಿನ ಅಲಾಯ್ ವೀಲ್ಸ್ ಅನ್ನು ಹೊಂದಿರಬಹುದು.
ಹೊಸ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ ಎರಡು ಅತ್ಯಾಕರ್ಷಕ ರೂಪಾಂತರದ ಆಯ್ಕೆಯೊಂದಿಗೂ ದೊರೆಯಬಹುದು ಎಂದು ಹೇಳಲಾಗಿದೆ. ಇದು 2.9 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿರಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 115 ಕಿ.ಮೀ ರೇಂಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಕಲರ್ ಟಿಎಫ್‌ಟಿ ಸ್ಕ್ರೀನ್, ಚಾರ್ಜಿಂಗ್ ಸಾಕೆಟ್ ಹಾಗೂ ಎಲ್ಇಡಿ ಲೈಟಿಂಗ್ ನಂತಹ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು.

ಟಿವಿಎಸ್ ಐಕ್ಯೂಬ್ ಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿರುವ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ ರೂ.1.25 ಲಕ್ಷದಿಂದ ರೂ.1.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ಸದ್ಯ, ಪ್ರಿ ಬುಕ್ಕಿಂಗ್ ಆರಂಭವಾಗಿದ್ದು, ಆಸಕ್ತ ಖರೀದಿದಾರರು ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.999 ಮುಂಗಡ ಹಣವನ್ನು ಪಾವತಿಸಿ ಈ ಸ್ಕೂಟರ್‌ನ್ನು ಕಾಯ್ದಿರಿಸಬಹುದು.
ಎಥರ್ ಮಾರಾಟ ಮಾಡುವ 450 ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ವಿವರವನ್ನು ನೋಡುವುದಾದರೆ, ಹೊಸ 450 ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್, ರೂ.1.89 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಇದು ಶಕ್ತಿಯುತ 3.7 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಭರ್ತಿ ಚಾರ್ಜ್ ನಲ್ಲಿ 157 ಕಿ.ಮೀ ಓಡುತ್ತದೆ. 2.9 ಸೆಕೆಂಡುಗಳಲ್ಲಿ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಎಥರ್ 450ಎಸ್ ಸ್ಕೂಟರ್ ರೂ.1.10 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದ್ದು, 2.9 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿದೆ. ಪೂರ್ತಿ ಚಾರ್ಜ್ ನಲ್ಲಿ 115 ಕಿ.ಮೀ ರೇಂಜ್ (ಮೈಲೇಜ್) ನೀಡಲಿದ್ದು, ಗಂಟೆಗೆ 90 ಕಿ.ಮೀ ವೇಗವನ್ನು ಪಡೆಯಲಿದೆ. ಎಥರ್ 450ಎಕ್ಸ್ ಇ-ಸ್ಕೂಟರ್ ರೂ.1.38 - ರೂ.1.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 115 - 145 ಕಿ.ಮೀ ಕ್ರಮಿಸುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








