Bajaj: ಜಾಸ್ತಿ ದೂರ ಕ್ರಮಿಸುವ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಶೀಘ್ರ ಮಾರುಕಟ್ಟೆಗೆ.. ಕೈಗೆಟುಕುವ ಬೆಲೆ?

ಬಜಾಜ್ ಆಟೋ (Bajaj Auto) ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸುವ ಚೇತಕ್ (Chetak) ಗೇಮ್ ಚೇಂಜರ್ ಎಲೆಕ್ಟ್ರಿಕ್ ಸ್ಕೂಟರ್‌ ಆಗಿ ಹೊರಹೊಮ್ಮಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ, ಬಜಾಜ್ ಚೇತಕ್ ಗರಿಷ್ಠ ರೇಂಜ್ (ಮೈಲೇಜ್) ನೀಡಬಲ್ಲ ಹೊಸದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದುಕೊಳ್ಳುವ ಸಾಧ್ಯತೆಯಿದೆ. ಆದಾಗ್ಯೂ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

ಹೊಸ ಬ್ಯಾಟರಿ ಸೆಲ್‌ಗಳನ್ನು ಮತ್ತೊಂದು ಪೂರೈಕೆದಾರ ಕಂಪನಿಯಿಂದ ಖರೀದಿಸಲು ಬಜಾಜ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಬ್ಯಾಟರಿ ಸೆಲ್‌ಗಳು ಹೆಚ್ಚಿನ ಶಕ್ತಿ (ಪವರ್) ಉತ್ಪಾದಿಸಲಿದ್ದು, ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಗರಿಷ್ಠ ದೂರವನ್ನು ಕ್ರಮಿಸಲು ನೆರವಾಗಲಿದೆ ಎನ್ನಲಾಗಿದೆ. ಬಹುತೇಕ 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನೊಂದಿಗೆ ನೂತನ ಬಜಾಜ್ ಚೇತಕ್ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಯಾಗಬಹುದು ಎಂದು ಊಹಿಸಲಾಗಿದೆ.

Bajaj Chetak Electric Scooter Get New Battery Pack With Highest Range

ಜನವರಿ 2020ರಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಪರಿಚಯಿಸಲಾಗಿತ್ತು. ಕೋವಿಡ್- 19ನಿಂದ ಮಾರಾಟ ಪ್ರಮಾಣ ತೀವ್ರತರವಾಗಿ ಕುಸಿತವಾಗಿತ್ತು. ಸಾಕಷ್ಟು ಏಳು ಬೀಳುಗಳ ನಡುವೆಯೂ ಜೂನ್ 2024ರವರೆಗೆ ಸುಮಾರು 2 ಲಕ್ಷ ಯುನಿಟ್ ಚೇತಕ್ ಸ್ಕೂಟರ್‌ಗಳು ಮಾರಾಟವಾಗಿದ್ದವು. ಪ್ರಸ್ತುತ ದೇಶೀಯವಾಗಿ ಈ ಚೇತಕ್ ಎಲೆಕ್ಟ್ರಿಕ್ ಹಲವು ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಅವುಗಳೆಂದರೆ ಚೇತಕ್ 3201 ಸ್ಪೆಷಲ್ ಎಡಿಷನ್, ಚೇತಕ್ 2901, ಅರ್ಬೇನ್ ಹಾಗೂ ಪ್ರೀಮಿಯಂ.

ಇತ್ತೀಚೆಗೆ ಬಜಾಜ್ ಚೇತಕ್ 3201 ಸ್ಪೆಷಲ್ ಎಡಿಷನ್ ರೂಪಾಂತರ ಮಾರಾಟಕ್ಕೆ ಬಂದಿತ್ತು. ಇದು ರೂ.1.29 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 3.2 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 136 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 73 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ.

Bajaj Chetak Electric Scooter Get New Battery Pack With Highest Range

ಬಜಾಜ್ ಚೇತಕ್ 2901 ರೂಪಾಂತರ ರೂ.95,998 ಎಕ್ಸ್ ಶೋರೂಂ ದರವನ್ನು ಪಡೆದಿದೆ. 2.88 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 123 ಕಿಲೋಮೀಟರ್ ಕ್ರಮಿಸುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಅಜೂರ್ ಬ್ಲೂ, ಸೈಬರ್ ವೈಟ್, ಎಬೊನಿ ಬ್ಲಾಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಬಜಾಜ್ ಚೇತಕ್ ಪ್ರೀಮಿಯಂ ರೂಪಾಂತರವು ರೂ.1.47 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 3.2 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 127 ಕಿಲೋಮೀಟರ್ ಓಡುತ್ತದೆ. 73 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ. ಇದರ ಬ್ಯಾಟರಿ ಪ್ಯಾಕ್ 3.15 ಗಂಟೆಯಲ್ಲಿ ಶೇಕಡ 0-80% ಚಾರ್ಜ್ ಆಗಿಬಿಡುತ್ತದೆ.

ಬಜಾಜ್ ಚೇತಕ್ ಅರ್ಬೇನ್ ರೂಪಾಂತರವು ರೂ.1.23 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 2.9 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 113 ರಿಂದ 127 ಕಿಲೋಮೀಟರ್ ಕ್ರಮಿಸುತ್ತದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್ ಶೇಕಡ 0-80% ಚಾರ್ಜ್ ಆಗಲು ಸುಮಾರು 3.15 ಗಂಟೆ ತೆಗೆದುಕೊಳ್ಳುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, August 22, 2024, 10:54 [IST]
English summary
Bajaj chetak electric scooter get new battery pack with highest range
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+