ಓಲಾಗೆ ಸೆಡ್ಡು... ಅಗ್ರಸ್ಥಾನಕ್ಕೇರಿದ ಬಜಾಜ್: ಇನ್ನು ಬಗ್ಗೋದೆ ಇಲ್ಲ ಎಂದ ಟಿವಿಎಸ್!

ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two Wheeler) ಮಾರುಕಟ್ಟೆಯಲ್ಲಿ ಅಧಿಪತ್ಯ ಸಾಧಿಸಲು ಓಲಾ ಎಲೆಕ್ಟ್ರಿಕ್, ಬಜಾಜ್ ಆಟೋ ಹಾಗೂ ಟಿವಿಎಸ್ ಮೋಟಾರ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಈ ಡಿಸೆಂಬರ್ ತಿಂಗಳು ಅದಕ್ಕೆ ವೇದಿಕೆಯಾಗಿದ್ದು, ಮೂರು ಕಂಪನಿಗಳು ಗರಿಷ್ಠ ಸಂಖ್ಯೆಯಲ್ಲಿ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿವೆ. ಗ್ರಾಹಕರು ಕೂಡ ತಾಮುಂದು, ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದರಲ್ಲೂ 'ಬಜಾಜ್ ಚೇತಕ್' ಎಲ್ಲ ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದೆ.

ಕೇಂದ್ರ ಸರ್ಕಾರ ನಿರ್ವಹಿಸುವ ವಾಹನ್ ವೆಬ್‌ಸೈಟ್‌ ಪ್ರಕಾರ, ಡಿಸೆಂಬರ್ 1 ರಿಂದ 14ರ ಅವಧಿಯಲ್ಲಿ ಬಜಾಜ್ ಕಂಪನಿಯು ಸರಿ ಸುಮಾರು 9,513 ಯುನಿಟ್ 'ಚೇತಕ್' ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಈ ಮೂಲಕ ದೇಶೀಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಅಗ್ರಸ್ಥಾನಕ್ಕೇರಿದೆ.

Bajaj Chetak Number 1 In First-Half December TVS iQube 2nd Place Ola E-Scooters In 3rd Position

ಟಿವಿಎಸ್ ಮೋಟಾರ್ 7,567 ಯುನಿಟ್ 'ಐಕ್ಯೂಬ್' ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುವುದರೊಂದಿಗೆ 2ನೇ ಸ್ಥಾನದಲ್ಲಿದೆ. ಇಷ್ಟು ವರ್ಷಗಳ ಕಾಲ ಮೊದಲ ಸ್ಥಾನದಲ್ಲಿರುತ್ತಿದ್ದ ಓಲಾ ಎಲೆಕ್ಟ್ರಿಕ್, 6,387 ಯುನಿಟ್ 'ಎಸ್1' ಸೀರೀಸ್ ಇ-ಸ್ಕೂಟರ್‌ಗಳನ್ನು ಮಾರುವುದರೊಂದಿಗೆ ಮೂರನೇ ಸ್ಥಾನದಲ್ಲಿದೆ. 5,053 ಯುನಿಟ್‌ಗಳೊಂದಿಗೆ ಎಥರ್ ಎನರ್ಜಿ 4ನೇ ಸ್ಥಾನದಲ್ಲಿದ್ದರೆ, ಆಂಪಿಯರ್ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಾರಾಟ ಮಾಡುವ ಗ್ರೀವ್ಸ್ ಎಲೆಕ್ಟ್ರಿಕ್ ಮೊಬಿಲಿಟಿ 1,378 ಯುನಿಟ್‌ಗಳೊಂದಿಗೆ 5 ಸ್ಥಾನದಲ್ಲಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಬಜಾಜ್ ಚೇತಕ್ (Bajaj Chetak) ಎಲೆಕ್ಟ್ರಿಕ್ ಸ್ಕೂಟರ್‌ ಬಗ್ಗೆ ಹೇಳುವುದಾದರೆ, ಇದು ವಿವಿಧ ರೂಪಗಳಲ್ಲಿ ದೊರೆಯುತ್ತದೆ. ರೂ.95,000 ರಿಂದ ರೂ.1.56 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 123 ರಿಂದ 136 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ.

Bajaj Chetak Number 1 In First-Half December TVS iQube 2nd Place Ola E-Scooters In 3rd Position

ಟಿವಿಎಸ್ ಐಕ್ಯೂಬ್ (TVS iQube) ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಇದು ರೂ.1.07 ಲಕ್ಷದಿಂದ ರೂ.1.37 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 2.2 ಕೆಡಬ್ಲ್ಯೂಹೆಚ್, 3.04 ಕೆಡಬ್ಲ್ಯೂಹೆಚ್ & 5.1 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 75 ರಿಂದ 150 ಕಿಲೋಮೀಟರ್‌ವರೆಗೂ ಕ್ರಮಿಸುತ್ತದೆ. ಜೊತೆಗೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಓಲಾ ಎಲೆಕ್ಟ್ರಿಕ್ ಮಾರಾಟಗೊಳಿಸುವ 'ಎಸ್1' ಸೀರೀಸ್ ಇ-ಸ್ಕೂಟರ್‌ಗಳು ಕೂಡ ವಿವಿಧ ರೂಪದಲ್ಲಿ ಖರೀದಿಗೆ ದೊರೆಯಲಿದ್ದು, ರೂ.74,999 ದಿಂದ ರೂ.1.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿವೆ. 2 ಕೆಡಬ್ಲ್ಯೂಹೆಚ್, 3 ಕೆಡಬ್ಲ್ಯೂಹೆಚ್ & 4 ಕೆಡಬ್ಲ್ಯೂಹೆಚ್ ಬ್ಯಾಟರಿಗಳನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 95 ರಿಂದ 193 ಕಿಲೋಮೀಟರ್‌ವರೆಗೂ ಓಡುತ್ತವೆ.

ಒಟ್ಟಾರೆಯಾಗಿ, ಇದು ಡಿಸೆಂಬರ್ 1 ರಿಂದ 14ರ ಅವಧಿಯಲ್ಲಿ ಮಾರಾಟ ವರದಿಯಾಗಿದೆ. ಅದರ ಪ್ರಕಾರ, ಮೊದಲ ಸ್ಥಾನದಲ್ಲಿ ಬಜಾಜ್ ಚೇತಕ್, ಎರಡನೇ ಸ್ಥಾನದಲ್ಲಿ ಟಿವಿಎಸ್ ಐಕ್ಯೂಬ್, ಮೂರನೇ ಸ್ಥಾನದಲ್ಲಿ ಓಲಾ 'ಎಸ್1' ಸೀರೀಸ್ ಇ-ಸ್ಕೂಟರ್‌ಗಳಿವೆ. ಮುಂಬರುವ ದಿನಗಳಲ್ಲಿ ಈ ಸ್ಥಾನಗಳು ಅದಲು - ಬದಲು ಸಹ ಆಗಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, December 18, 2024, 14:15 [IST]
English summary
Bajaj chetak number 1 in first half december tvs iqube 2nd place ola e scooters in 3rd position
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+