Bajaj: ಬಜಾಜ್ ಚೇತಕ್ ಹಿಂದೆ ಬಿದ್ದ ಗ್ರಾಹಕರು.. ನಂಬರ್ 1 ಸ್ಥಾನದ ಸನಿಹಕ್ಕೆ, 95,998 ಆರಂಭಿಕ ಬೆಲೆ!
ಭಾರತದಲ್ಲಿ ದಿನದಿಂದ ದಿನಕ್ಕೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು (Electric Two Wheelers) ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಹೆಚ್ಚಿನ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಸೆಪ್ಟೆಂಬರ್ (2024) ತಿಂಗಳ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟದ ಅಂಕಿಅಂಶಗಳ ವರದಿ ಪ್ರಕಟಗೊಂಡಿದೆ. ಬಜಾಜ್ ಚೇತಕ್ (Bajaj Chetak) ಎಲೆಕ್ಟ್ರಿಕ್ ಸ್ಕೂಟರ್ ಭಾರಿ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ಶೇಕಡ 21.47% ಮಾರುಕಟ್ಟೆ ಪಾಲನ್ನು ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಓಲಾದ ಎಸ್1 ಸೀರೀಸ್ ಸ್ಕೂಟರ್‌ಗಳು (ಶೇಕಡ 27%) ಮುಂದುವರಿದ್ದು, ಟಿವಿಎಸ್ ಐಕ್ಯೂಬ್ (ಶೇಕಡ 20.26%) ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳು (ಸೆಪ್ಟೆಂಬರ್ 2024) ಬಜಾಜ್ ಆಟೋ, ಬರೋಬ್ಬರಿ 18,933 ಯುನಿಟ್ ಚೇತಕ್ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 7107 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 166% ಪ್ರಗತಿಯಾಗಿದೆ.

ಈ ಜನವರಿಯಿಂದ ಸೆಪ್ಟೆಂಬರ್‌ವರೆಗೂ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ಬರೋಬ್ಬರಿ 119,759 ಯುನಿಟ್ ಸ್ಕೂಟರ್‌ಗಳನ್ನು ಗ್ರಾಹಕರು ಖರೀದಿಸಿದ್ದಾರೆ. 2023ರ ಜನವರಿಯಿಂದ ಸೆಪ್ಟೆಂಬರ್‌ನಲ್ಲಿ 40,602 ಯುನಿಟ್ ಮಾರಾಟ ಮಾಡಲಾಗಿತ್ತು. ಇದರೊಂದಿಗೆ ಶೇಕಡ 195% ಬೆಳವಣಿಗೆ ಸಾಧಿಸಲಾಗಿದೆ.
ದೇಶೀಯವಾಗಿ ಬಜಾಜ್ ಚೇತಕ್ (Bajaj Chetak) ಎಲೆಕ್ಟ್ರಿಕ್ ಸ್ಕೂಟರ್ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಲಭ್ಯವಿದೆ. ಇದರ 'ಬ್ಲೂ 2903' ರೂಪಾಂತರ ರೂ.95,998 (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 123 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಬಜಾಜ್ ಚೇತಕ್ ಪ್ರೀಮಿಯಂ ರೂಪಾಂತರದ ಬಗ್ಗೆ ಹೇಳುವುದಾದರೆ, ಇದು ರೂ.1.47 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿದಾರರಿಗೆ ಸಿಗುತ್ತದೆ. ಪೂರ್ತಿ ಚಾರ್ಜ್‌ನಲ್ಲಿ 126 ಕಿಲೋಮೀಟರ್‌ವರೆಗೂ ಕ್ರಮಿಸುತ್ತದೆ. 73 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇದರಲ್ಲಿ ಬ್ಯಾಟರಿಯು 0 ರಿಂದ 80% ಚಾರ್ಜ್ ಆಗುವುದಕ್ಕೆ 3 ಗಂಟೆ 35 ನಿಮಿಷ ತೆಗೆದುಕೊಳ್ಳುತ್ತದೆ.
ಬಜಾಜ್ ಚೇತಕ್ ಬ್ಲೂ 3202 ರೂಪಾಂತರದ ಬಗ್ಗೆ ಮಾತನಾಡುವುದಾದರೆ, ಈ ಎಲೆಕ್ಟ್ರಿಕ್ ಸ್ಕೂಟರ್, ರೂ.1.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಒಮ್ಮೆ ಚಾರ್ಜ್ ಮಾಡಿದರೆ 137 ಕಿಲೋಮೀಟರ್‌ವರೆಗೂ ಓಡುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಇದರ ಬ್ಯಾಟರಿ ಪ್ಯಾಕ್ ಕೂಡ 3 ಗಂಟೆ 35 ನಿಮಿಷಗಳಲ್ಲಿಯೇ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ.

ಒಟ್ಟಾರೆಯಾಗಿ ಬಜಾಜ್ ಚೇತಕ್ ದಿನಬಳಕೆಗೆ ಅತ್ಯುತ್ತಮವಾಗಿರುವ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಇದರ ಆಕರ್ಷಕವಾದ ನೋಟ ಹಾಗೂ ನಿರ್ಮಾಣ ಗುಣಮಟ್ಟಕ್ಕೆ ಗ್ರಾಹಕರು ಮನಸೊತ್ತಿರುವುದರಿಂದ ದೊಡ್ಡ ಸಂಖ್ಯೆಯಲ್ಲಿ ಖರೀದಿ ಮಾಡುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳು ದಸರಾ ಹಾಗೂ ದೀಪಾವಳಿ ಹಬ್ಬ ಇರುವುದರಿಂದ ಮಾರಾಟ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








