Bajaj: ಬಜಾಜ್‌ನಿಂದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ದಿನಾಂಕ ಘೋಷಣೆ.. ಮೈಲೇಜ್ ಎಷ್ಟು, ಬೆಲೆ ಏನು?

ದೇಶದ ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿರುವ ಬಜಾಜ್ (Bajaj), ವಿಶ್ವದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಸ್ಕೂಟರ್ ಹಾಗೂ ಬೈಕ್‌ಗಳನ್ನು ಮಾರಾಟಗೊಳಿಸುತ್ತಿದೆ. ಇದೀಗ, ವಿಶ್ವದ ಮೊದಲ ಸಿಎನ್‌ಜಿ ಮೋಟಾರ್‌ಸೈಕಲ್ (World First CNG Motorcycle) ಬಿಡುಗಡೆಗೊಳಿಸಲು ದಿನಾಂಕವನ್ನು ನಿಗದಿಪಡಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ

ಪುಣಿಯಲ್ಲಿ ಶುಕ್ರವಾರ ಜರುಗಿದ ನೂತನ 'ಪಲ್ಸರ್ ಎನ್ಎಸ್400ಝಡ್' ಬೈಕ್ ಬಿಡುಗಡೆ ಸಮಾರಂಭದಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ರಾಜೀವ್ ಬಜಾಜ್ (Rajiv Bajaj) ಮಾತನಾಡಿದರು. ಈ ವೇಳೆ, ಸಂಸ್ಥೆಯ ಮುಂಬರುವ ಯೋಜನೆಗಳ ಬಗ್ಗೆ ವಿವರಿಸಿದ ಅವರು, ವಿಶ್ವದ ಮೊದಲ ಸಿಎನ್‌ಜಿ ಬೈಕ್‌ನ್ನು ಜೂನ್ 18, 2024ರಂದು ಲಾಂಚ್ ಮಾಡುವುದಾಗಿ ಘೋಷಣೆ ಮಾಡಿದರು.

Bajaj CNG Bike Launch On July 18 Rajiv Bajaj Confirmed Expected Price And Mileage

ಬಜಾಜ್ ಆಟೋ (Bajaj Auto) ಸಿಎನ್‌ಜಿ ಚಾಲಿತ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಭಾರೀ ಯಶಸ್ಸನ್ನು ಸಾಧಿಸಿದ್ದು, ಆ ರೀತಿಯ ಪ್ರಗತಿಯನ್ನು ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿಯೂ ಮುಂದುವರಿಸಲು ಬಯಸಿದೆ. ಅದಕ್ಕಾಗಿ ಸಿಎನ್‌ಜಿ ಮೋಟಾರ್‌ಸೈಕಲ್‌ನ್ನು ಬಿಡುಗಡೆಗೊಳಿಸಲು ತಯಾರಿಯನ್ನು ನಡೆಸುತ್ತಿದೆ. ಜೊತೆಗೆ ದ್ವಿಚಕ್ರ ವಾಹನಗಳ ನಿರ್ವಹಣೆಗೆ ಮಧ್ಯಮ ವರ್ಗದ ಜನರು ಮಾಡುತ್ತಿರುವ ಖರ್ಚನ್ನು ಕಡಿಮೆಗೊಳಿಸಲು ಉದ್ದೇಶಿಸಿದೆ ಎಂದು ಹೇಳಲಾಗಿದೆ.

ಬಜಾಜ್ ಕಂಪನಿಯು ಸಿಎನ್‌ಜಿ ಬೈಕ್‌ಗೆ 'ಪ್ಲಾಟಿನಾ' ಎಂದು ಹೆಸರನ್ನು ಇಡಬಹುದು. ಬ್ರೂಜರ್ ಇ101 ಕೋಡ್ ನೇವ್ ಹೊಂದಿರುವ ಮೋಟಾರ್‌ಸೈಕಲ್‌ವೊಂದನ್ನು ಅಂತಿಮ ಹಂತದಲ್ಲಿ ವಿನ್ಯಾಸಗೊಳಿಸುತ್ತಿದೆ ಎಂದು 2023ರ ಅಕ್ಟೋಬರ್‌ನಲ್ಲಿ ವರದಿಯಾಗಿತ್ತು. ಈಗಾಗಲೇ, ವಿಶೇಷ ಫ್ಯುಯೆಲ್ ಟ್ಯಾಂಕ್ ಹೊಂದಿರುವ ಬೈಕ್‌ವೊಂದು ಹಲವು ಬಾರಿ ಪ್ರಾಯೋಗಿಕ ಸಂಚಾರವನ್ನು ನಡೆಸಿದ್ದು, ಆ ಫೋಟೋಗಳು ಆನ್‌ಲೈನ್ ನಲ್ಲಿಯೂ ಕಾಣಿಸಿಕೊಂಡಿದ್ದವು. ಆದರೆ, ಇದೇ ಸಿಎನ್‌ಜಿ ಮೋಟಾರ್‌ಸೈಕಲ್‌ ಆಗಿದೆಯೇ ಎಂಬುದರ ಬಗ್ಗೆ ಖಚಿತತೆಯಿಲ್ಲ.

Bajaj CNG Bike Launch On July 18 Rajiv Bajaj Confirmed Expected Price And Mileage

ಬಜಾಜ್ ಪೆಟ್ರೋಲ್ ಮೋಟಾರ್‌ಸೈಕಲ್‌ಗಳಿಗೆ ಹೋಲಿಕೆ ಮಾಡಿದರೆ, ಸಿಎನ್‌ಜಿ ಬೈಕ್‌ಗಳು ಸ್ವಲ್ಪ ಹೆಚ್ಚಿನ ಬೆಲೆ ಹೊಂದಿರಬಹುದು ಎಂದು ಹೇಳಲಾಗಿದೆ. ಮುಂಬರಲಿರುವ ಸಿಎನ್‌ಜಿ ಮೋಟಾರ್‌ಸೈಕಲ್‌ ಫ್ಯುಯೆಲ್ (ಇಂಧನ) ಟ್ಯಾಂಕ್ ವಿನ್ಯಾಸ ಕೊಂಚ ಭಿನ್ನವಿರಲಿದ್ದು, ಇದರಿಂದ ತಯಾರಿಕಾ ವೆಚ್ಚ ಹೆಚ್ಚಾಗಲಿದೆ ಎನ್ನಲಾಗಿದೆ. ಆದರೆ, ಸಿಎನ್‌ಜಿ ಬೈಕ್ ನಿರ್ವಹಣಾ ವೆಚ್ಚ ಅಗ್ಗವಾಗಿರುವುದರೊಂದಿಗೆ ದರ ಏರಿಕೆ ಪ್ರಮಾಣ ಗ್ರಾಹಕರ ಮೇಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ.

ನೂತನ ಸಿಎನ್‌ಜಿ ಬೈಕ್ ರೂ.80,000 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು. ಪ್ರತಿ ಕೆಜಿಗೆ 70 ಕಿಲೋಮೀಟರ್‌ಗೂ ಅಧಿಕ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ. ಆದರೆ, ಈ ಕುರಿತು ಬಜಾಜ್ ಕಂಪನಿಯಿಂದ ಯಾವುದೇ ಅಧಿಕೃತ ವಿವರಗಳು ಬಹಿರಂಗಗೊಂಡಿಲ್ಲ. ಈಗ ಸಿಎನ್‌ಜಿ ಮೋಟಾರ್‌ಸೈಕಲ್‌ ಬಿಡುಗಡೆಗೆ ದಿನಾಂಕ ಘೋಷಣೆಯಾಗಿದ್ದು, ನಿರೀಕ್ಷೆಗಳು ದುಪ್ಪಟ್ಟಾಗಿವೆ.

Bajaj CNG Bike Launch On July 18 Rajiv Bajaj Confirmed Expected Price And Mileage

ಬಜಾಜ್ ಆಟೋ, ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿರುವ ಹೊಸ ಪಲ್ಸರ್ ಎನ್ಎಸ್400ಝಡ್ (Pulsar NS400Z) ಮೋಟಾರ್‌ಸೈಕಲ್‌ ಬಗ್ಗೆ ಮಾತನಾಡುವುದಾದರೆ, ಇದು ರೂ.1.85 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 373.27 ಸಿಸಿ ಎಂಜಿನ್‌ ಹೊಂದಿದ್ದು, 40 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 35 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ.

ಈ ನೂತನ ಬೈಕ್, ವಿಶೇಷವಾಗಿ ರೈಡ್-ಬೈ-ವೈರ್ ಟೆಕ್ನಾಲಜಿಯನ್ನು ಒಳಗೊಂಡಿದ್ದು, ರೋಡ್‌, ರೈನ್, ಸ್ಪೋರ್ಟ್, ಆಫ್‌ರೋಡ್ ಎಂಬ ರೈಡ್‌ ಮೋಡ್‌ ಆಯ್ಕೆಗಳನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ & ಮ್ಯೂಸಿಕ್ ಕಂಟ್ರೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, May 3, 2024, 16:57 [IST]
English summary
Bajaj cng bike launch on july 18 rajiv bajaj confirmed expected price and mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+