Bajaj: ಯುವಕರ ಮನಗೆದ್ದಿರುವ ಪಲ್ಸರ್ ಬೈಕ್‌ಗಳಿವು, ಬೆಲೆ ರೂ.2 ಲಕ್ಷದೊಳಗೆ.. 50 ಕಿ.ಮೀಗಿಂತ ಹೆಚ್ಚಿನ ಮೈಲೇಜ್

ದೇಶದ ಯುವಕರಿಗೆ ನಿಮ್ಮ ಮೆಚ್ಚಿನ ಬೈಕ್ ಯಾವುದೆಂದು ಕೇಳಿದರೆ ತಕ್ಷಣ ಬರುವ ಒಂದೇ ಉತ್ತರ 'ಬಜಾಜ್ ಪಲ್ಸರ್' ಎಂದು. ಅಷ್ಟರಮಟ್ಟಿಗೆ ಈ ಮೋಟಾರ್‌ಸೈಕಲ್ ಜನಪ್ರಿಯತೆ ಗಳಿಸಿದೆ. ಇಲ್ಲಿ ರೂ.2 ಲಕ್ಷಕ್ಕಿಂತ ಕಡಿಮೆ ಬೆಲೆ ಹಾಗೂ 50 ಕಿಲೋಮೀಟರ್‌ಗೂ ಹೆಚ್ಚಿನ ಮೈಲೇಜ್ ನೀಡುವ ವಿವಿಧ ಪಲ್ಸರ್ ಮಾದರಿಗಳ ಬಗ್ಗೆ ವಿವರಿಸಿದ್ದೇವೆ.

ಮೊದಲಿಗೆ ಬಜಾಜ್ ಪಲ್ಸರ್ ಎನ್160 (Bajaj Pulsar N160) ಬೈಕ್ ಕುರಿತು ಮಾತನಾಡೋಣ. ಇದು ರೂ.1.33 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 164.82 ಸಿಸಿ ಏರ್/ ಆಯಿಲ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 16 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 14.65 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 5-ಸ್ವೀಡ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

Bajaj Pulsar Bikes N160 NS160 P150 Models Under 2 Lakh Price 50 Km Mileage

ಈ ಬಜಾಜ್ ಪಲ್ಸರ್ ಎನ್160 ಮೋಟಾರ್‌ಸೈಕಲ್, 59.11 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 14 ಲೀಟರ್ ಸಾಮರ್ಥ್ಯ ಫ್ಯುಯೆಲ್ ಟ್ಯಾಂಕ್, 17-ಇಂಚಿನ ಅಲಾಯ್ ವೀಲ್ಸ್, ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ.

ಬಜಾಜ್ ಪಲ್ಸರ್ ಎನ್160 (Bajaj Pulsar NS160) ಬೈಕ್ ರೂ.1.46 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 160.3 ಸಿಸಿ ಏರ್/ ಆಯಿಲ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 17.2 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 14.6 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ವೀಡ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, 52 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

Bajaj Pulsar Bikes N160 NS160 P150 Models Under 2 Lakh Price 50 Km Mileage

ಈ ಪಲ್ಸರ್ ಎನ್160 ಎಲ್ಇಡಿ ಹೆಡ್‌ಲೈಟ್ ಹಾಗೂ ಎಲ್ಇಡಿ ಡಿಆರ್‌ಎಲ್‌ ಕೂಡ ಹೊಂದಿದೆ. ಕಾಲ್, ಎಸ್ಎಂಎಸ್ ಸೇರಿ ಇನ್ನಿತರೇ ಮಾಹಿತಿಯನ್ನು ಪಡೆಯಲು ಬ್ಲೂಟೂತ್ ಕನೆಕ್ಟ್ ಮಾಡಬಲ್ಲ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನಾವಿಗೇಷನ್ ನಂತಹ ಹಲವು ವೈಶಿಷ್ಟ್ಯಗಳನ್ನೂ ಪಡೆದಿದೆ. ಇದರೊಟ್ಟಿಗೆ 12 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್ ಮತ್ತು ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ಬಜಾಜ್ ಪಲ್ಸರ್ ಪಿ150 (Bajaj Pulsar P150), ಸಿಂಗಲ್ ಡಿಸ್ಕ್ ಹಾಗೂ ಡಬಲ್ ಡಿಸ್ಕ್ ಎಂಬ ಎರಡು ರೂಪಾಂತರ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಕ್ರಮವಾಗಿ ರೂ.1.17 ರಿಂದ ರೂ.1.20 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದರಲ್ಲಿ 149.68 ಸಿಸಿ ಎಂಜಿನ್ ಬಳಕೆ ಮಾಡಲಾಗಿದ್ದು, 4.5 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 13.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Bajaj Pulsar Bikes N160 NS160 P150 Models Under 2 Lakh Price 50 Km Mileage

ಈ ಬಜಾಜ್ ಪಲ್ಸರ್ ಪಿ150 ಬೈಕ್ 5-ಸ್ವೀಡ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿದ್ದು, 49.7 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಮುಂಭಾಗ (ಫ್ರಂಟ್) 260 ಎಂಎಂ ಹಾಗೂ ಹಿಂಭಾಗ (ರೇರ್) 230 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. ರೇಸಿಂಗ್ ರೆಡ್, ಕೆರಿಬಿಯನ್ ಬ್ಲೂ, ಎಬೊನಿ ಬ್ಲ್ಯಾಕ್ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, March 28, 2024, 10:50 [IST]
English summary
Bajaj pulsar bikes n160 ns160 p150 models under 2 lakh price 50 km mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+