Bajaj: ನಾಡಿದ್ದು ಬಹುನಿರೀಕ್ಷಿತ ಬಜಾಜ್ ಪಲ್ಸರ್ ಎನ್125 ಬೈಕ್ ಬಿಡುಗಡೆ.. ಅತಿಕಡಿಮೆ ಬೆಲೆ?
ಬಜಾಜ್ ಆಟೋ (Bajaj Auto), ವಿಶ್ವಾಸಾರ್ಹ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಪಲ್ಸರ್ (Pulsar) ಸರಣಿಯ ವಿವಿಧ ಬೈಕ್‌ಗಳು ಭಾರಿ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಅದರಲ್ಲೂ ಯುವ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಕಂಪನಿಯು ಹೊಚ್ಚ ಹೊಸ ಪಲ್ಸರ್ ಎನ್125 (Pulsar N125) ಮೋಟಾರ್‌ಸೈಕಲ್‌ನ್ನು ಬಿಡುಗಡೆಗೊಳಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ಬಜಾಜ್ ಪಲ್ಸರ್ ಎನ್125 (Bajaj Pulsar N125) ಬೈಕ್, ಆಕರ್ಷಕವಾದ ವಿನ್ಯಾಸವನ್ನು (ಡಿಸೈನ್) ಹೊಂದಿರಲಿದೆ. ಸ್ಪೋರ್ಟಿ ಲುಕ್‌ನೊಂದಿಗೆ ಹೆಚ್ಚು ಪ್ರೀಮಿಯಂ ಆಗಿರಲಿದ್ದು, ಉತ್ತಮವಾದ ಸ್ಪ್ಲಿಟ್ ಸೀಟ್‌ಗಳು ಮತ್ತು ಎಲ್ಇಡಿ ಹೆಡ್‌ಲ್ಯಾಂಪ್‌ನ್ನು ಪಡೆದಿರುವ ನೀರಿಕ್ಷೆಯಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು (ಫೀಚರ್) ಒಳಗೊಂಡಿರಲಿದೆ ಎನ್ನಲಾಗಿದೆ.

ಈ ಹೊಸ ಬಜಾಜ್ ಪಲ್ಸರ್ ಎನ್125 ಮೋಟಾರ್‌ಸೈಕಲ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿರಲಿದೆ. ಇದು 125 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಖರೀದಿ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ. ಆದರೆ, ಹೆಚ್ಚಿನ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು ನ್ಯೂಟನ್ ಮೀಟರ್ (ಎನ್ಎಂ) ಪೀಕ್ ಟಾರ್ಕ್ ಉತ್ಪಾದಿಸಬಹುದು ಅಂದಾಜಿಸಲಾಗಿದೆ.
ನೂತನ ಬೈಕ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆಷನ್ ಸೆಟಪ್ ಅನ್ನು ಹೊಂದಿರಲಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿರಲಿದೆ. ಜೊತೆಗೆ ಈ ಮೋಟಾರ್‌ಸೈಕಲ್‌ನ್ನು ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) & ಡಿಸ್ಕ್ ಬ್ರೇಕ್ ರೂಪಾಂತರದೊಂದಿಗೂ (ವೇರಿಯೆಂಟ್) ಪರಿಚಯಿಸಬಹುದು.
ಹೊಸ ಬಜಾಜ್ ಪಲ್ಸರ್ ಎನ್125 (Bajaj Pulsar N125) ಬೈಕ್‌ನ್ನು ಮಾರಾಟಕ್ಕೆ ತರಲು ಅಕ್ಟೋಬರ್ 16ರಂದು ದಿನಾಂಕ (ಬುಧವಾರ) ನಿಗದಿ ಪಡಿಸಲಾಗಿದೆ. ಈ ಮೋಟಾರ್‌ಸೈಕಲ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದ್ದು, ರೂ. 90,000 ರಿಂದ ರೂ.1 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ಪ್ರಸ್ತುತ, ದೇಶೀಯ ಮಾರುಕಟ್ಟೆಯಲ್ಲಿ ಬಜಾಜ್ ಪಲ್ಸರ್ ವಿವಿಧ ರೂಪದ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಅದರಲ್ಲಿ ಪಲ್ಸರ್ 150 (Pulsar 150) ಕೂಡ ಪ್ರಮುಖವಾಗಿದ್ದು, ರೂ.1.10 ಲಕ್ಷದಿಂದ ರೂ.1.15 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 149.5 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 47.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಬಜಾಜ್ ಪಲ್ಸರ್ ಎನ್ಎಸ್125 (Bajaj Pulsar NS200) ಬೈಕ್ ಬಗ್ಗೆ ಹೇಳುವುದಾದರೆ, ಇದು ರೂ.1.47 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 199.5 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹಾಗೂ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 40.36 ಕೆಎಂಪಿಎಲ್‌ವರೆಗೆ ಮೈಲೇಜ್ ಸಹ ಕೊಡುತ್ತದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ನ್ನು ಪಡೆದಿದೆ. 158 ಕೆಜಿ ತೂಕವು ಇದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








