Ather: ಕರ್ನಾಟಕದ ಎಥರ್‌ನಿಂದ ಮಹಾರಾಷ್ಟ್ರದಲ್ಲಿ ರೂ.2,000 ಕೋಟಿ ಬಂಡವಾಳ ಹೂಡಿಕೆ.. 4000 ಉದ್ಯೋಗ ಸೃಷ್ಟಿ
ಬೆಂಗಳೂರು ಮೂಲದ ಎಥರ್ ಎನರ್ಜಿ (Ather Energy) ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ರಿಜ್ಟಾ ಹಾಗೂ 450ಎಸ್ ಸೇರಿದಂತೆ ವಿವಿಧ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ 'ಎಥರ್' ತನ್ನ ಉದ್ಯಮವನ್ನು ವಿಸ್ತರಿಸಲು ಮುಂದಾಗಿದ್ದು, ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೂ.2,000 ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಮೂರನೇ ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಬರೋಬ್ಬರಿ 4000 ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆಯಿದೆ.
ಈ ಬಗ್ಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. 'ಎಥರ್ ಎನರ್ಜಿ ಸಂಸ್ಥಾಪಕ ಸ್ವಪ್ನಿಲ್ ಜೈನ್ ಅವರೊಂದಿಗೆ ಸಭೆ ನಡೆಸಲಾಯಿತು. ಸಂಸ್ಥೆಯು ತನ್ನ 3ನೇ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಮಹಾರಾಷ್ಟ್ರದ ಔರಂಗಾಬಾದ್‌ನ್ನು ಆಯ್ಕೆ ಮಾಡಿದೆ. ನನಗೆ ಅದು ಸಂತೋಷವನ್ನು ತಂದಿದೆ' ಎಂದು ಹೇಳಿದ್ದಾರೆ.

'ನೂತನ ತಯಾರಿಕಾ ಘಟಕದ ಸ್ಥಾಪನೆಗೆ ರೂ.2000 ಕೋಟಿ ಬಂಡವಾಳ ಹೂಡಿಕೆ ಮಾಡಲಾಗುತ್ತಿದ್ದು, ಸುಮಾರು 4000 ಉದ್ಯೋಗ ಸೃಷ್ಟಿಯಾಗಲಿದೆ. ಈ ಅತ್ಯಾಧುನಿಕ ಉತ್ಪಾದನಾ ಘಟಕದಲ್ಲಿ ವಾರ್ಷಿಕ 1 ಮಿಲಿಯನ್ (10 ಲಕ್ಷ) ಯುನಿಟ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಮತ್ತು ಬ್ಯಾಟರಿ ಪ್ಯಾಕ್‌ಗಳನ್ನು ಉತ್ಪಾದಿಸಲಾಗುತ್ತದೆ. ಈ ಮಹತ್ವದ ಹೂಡಿಕೆಯು ವಿದ್ಯುತ್ ಚಲನಶೀಲತೆ ಕ್ರಾಂತಿಯಲ್ಲಿ ಮಹಾರಾಷ್ಟ್ರದ ಪಾತ್ರವನ್ನು ಹೆಚ್ಚಿಸುತ್ತದೆ' ಎಂದು ದೇವೇಂದ್ರ ಫಡ್ನವಿಸ್ ಅವರು ತಿಳಿಸಿದ್ದಾರೆ.
ಸದ್ಯ ತಮಿಳುನಾಡಿನ ಹೊಸೂರಿನಲ್ಲಿ ಎಥರ್ ಎನರ್ಜಿಯ ಎರಡು ತಯಾರಿಕಾ ಘಟಕಗಳಿದ್ದು, ಸ್ಕೂಟರ್‌ನ್ನು ಜೋಡಿಸುವುದು ಹಾಗೂ ಬ್ಯಾಟರಿಯನ್ನು ಉತ್ಪಾದನೆ ಮಾಡಲಾಗುತ್ತಿದೆ. ಕಂಪನಿಯು 2024ರ ಹಣಕಾಸು ವರ್ಷದಲ್ಲಿ ರೂ.1,753.8 ಕೋಟಿ ಆದಾಯವನ್ನು ಗಳಿಸಿದೆ. ದೇಶೀಯವಾಗಿ ಎಥರ್ ಎನರ್ಜಿ ಹಲವು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಎಥರ್ 450ಎಕ್ಸ್ (Ather 450X) ರೂ.1.41 ದಿಂದ ರೂ.1.55 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 150 ಕಿ.ಮೀ ಓಡುತ್ತದೆ.

ಎಥರ್ 450ಎಸ್ (Ather 450S) ರೂ.1.26 ಲಕ್ಷ ಬೆಲೆಯನ್ನು ಹೊಂದಿದೆ. 2.9 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 115 ಕಿಲೋಮೀಟರ್ ಕ್ರಮಿಸುತ್ತದೆ. ಎಥರ್ 450 ಅಪೆಕ್ಸ್ (Ather 450 Apex) ರೂ.1.95 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. 3.7 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 157 ರೇಂಜ್ (ಮೈಲೇಜ್) ಕೊಡುತ್ತದೆ.
ಏಪ್ರಿಲ್‌ನಲ್ಲಿ ಮಾರುಕಟ್ಟೆಗೆ ಬಂದ ಎಥರ್ ರಿಜ್ಟಾ (Ather Rizta) ಎಲೆಕ್ಟ್ರಿಕ್ ಸ್ಕೂಟರ್, ರೂ.1.10 ಲಕ್ಷದಿಂದ ರೂ.1.45 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಸಿಯಾಚಿನ್ ವೈಟ್ ಮೊನೊ, ಡೆಕ್ಕನ್ ಗ್ರೇ ಮೊನೊ, ಪ್ಯಾಂಗೊಂಗ್ ಬ್ಲೂ ಡ್ಯುಯೊ, ಕಾರ್ಡಮೊಮ್ ಗ್ರೀನ್ ಡ್ಯುಯೊ ಸೇರಿದಂತೆ 7 ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.
ನೂತನ ಎಥರ್ ರಿಜ್ಟಾ ಇ-ಸ್ಕೂಟರ್ 2.9 ಕೆಡಬ್ಲ್ಯೂಹೆಚ್ ಹಾಗೂ 3.7 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, 123 ರಿಂದ 160 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್ (ಗರಿಷ್ಠ ವೇಗ) ಹೊಂದಿದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಇದರ ಬ್ಯಾಟರಿಯು ಶೇಕಡ 0-80% ಚಾರ್ಜ್ ಆಗಲು 4 ಗಂಟೆ 30 ನಿಮಿಷ ಬೇಕಾಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications