Ultraviolette: ಬೆಂಗಳೂರಿನ ಅಲ್ಟ್ರಾವೈಲೆಟ್‍ನಿಂದ ಸಿಹಿಸುದ್ದಿ.. ಇನ್ನೂ ನಿಮಿಷಗಳಲ್ಲಿ ಬೈಕ್ ಚಾರ್ಜ್ ಆಗುತ್ತೆ!
ಬೆಂಗಳೂರು ಮೂಲದ ಅಲ್ಟ್ರಾವೈಲೆಟ್ (Ultraviolette) ಐಷಾರಾಮಿ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ತಯಾರಕ ಕಂಪನಿಯಾಗಿ ಭಾರತದಾದ್ಯಂತ ಜನಪ್ರಿಯತೆ ಗಳಿಸಿದೆ. ಇದೀಗ ತನ್ನ ಬೈಕ್ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಡಿಸಿ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಶುರು ಮಾಡಿದೆ.
ಅಲ್ಟ್ರಾವೈಲೆಟ್ ಕಂಪನಿಯು ಮೊದಲ ಹಂತವಾಗಿ ದೇಶದ ಪ್ರಮುಖ ನಗರಗಳಲ್ಲಿ ಸೂಪರ್‌ನೋವಾ (SUPERNOVA) ಹೆಸರಿನ 100ಕ್ಕೂ ಹೆಚ್ಚು ಡಿಸಿ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಆರಂಭಿಸಲು ತೀರ್ಮಾನ ಮಾಡಿದೆ. ಈಗಾಗಲೇ ಕರ್ನಾಟಕ ಮಹಾರಾಷ್ಟ್ರ ಮತ್ತು ತಮಿಳುನಾಡಿನ ವಿವಿಧ ನಗರಗಳಲ್ಲಿ 10 ಚಾರ್ಜಿಂಗ್ ಸ್ಟೇಷನ್‌ಗಳು ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳು ಕೆಲವೇ ನಿಮಿಷಗಳಲ್ಲಿ ಚಾರ್ಜ್ ಆಗಲಿವೆ.

12 ಕೆಡಬ್ಲ್ಯೂ (kW) ಮತ್ತು 6 ಕೆಡಬ್ಲ್ಯೂ (kW) ಸಾಮರ್ಥ್ಯದ ಈ ಡಿಸಿ ಫಾಸ್ಟ್ ಚಾರ್ಜಿಂಗ್ ಸ್ಟೇಷನ್‌ಗಳು, ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)ನಿಂದಲೂ ಮಾನ್ಯತೆಯನ್ನು ಪಡೆದಿವೆ. ಕೇವಲ 40 ರಿಂದ 60 ನಿಮಿಷಗಳಲ್ಲಿ ಅಲ್ಟ್ರಾವೈಲೆಟ್‍ನ ಎಫ್77 ಎಲೆಕ್ಟ್ರಿಕ್ ಬೈಕ್ ಮಾದರಿಗಳು ಶೇಕಡ 20 ರಿಂದ 80% ಚಾರ್ಜ್ ಆಗಲಿದ್ದು, ಇನ್ಮುಂದೆ ದೂರದ ಊರುಗಳಿಗೆ ಸುಲಭವಾಗಿ ಪ್ರಯಾಣಿಸಬಹುದು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಲ್ಟ್ರಾವೈಲೆಟ್ ಸಿಇಒ ನಾರಾಯಣ ಸುಬ್ರಮಣ್ಯಂ ಅವರು, 'ಸೂಪರ್‌ನೋವಾ ಚಾರ್ಜಿಂಗ್ ಸ್ಟೇಷನ್‌ಗಳು ನಮ್ಮ ಗ್ರಾಹಕರಿಗೆ ಉತ್ತಮವಾದ ಸೇವೆಯನ್ನು ಒದಗಿಸುತ್ತವೆ. ಈ ಸ್ಟೇಷನ್‌ಗಳಲ್ಲಿ ವೇಗವಾಗಿ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ಗಳು ಚಾರ್ಜ್ ಆಗುವುದರಿಂದ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸವಾರರು ಆರಾಮದಾಯಕವಾಗಿ ತೆರಳಲು ಸಾಧ್ಯವಾಗುತ್ತದೆ. ಇದು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ನಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತದೆ' ಎಂದು ಹೇಳಿದ್ದಾರೆ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಸಾಮಾನ್ಯ ಅಲ್ಟ್ರಾವೈಲೆಟ್‍ನ ಎಫ್77 ಎಲೆಕ್ಟ್ರಿಕ್ ಬೈಕ್ ರೂ.3,80,000 ಹಾಗೂ ಪ್ರೀಮಿಯಂ ಮಾದರಿ ಎಫ್77 ರೆಕಾನ್ ರೂ.4,55,000 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇವೆರೆಡು ಆವೃತ್ತಿಗಳಲ್ಲಿ ಪಿಎಂಎಸ್ ಎಲೆಕ್ಟ್ರಿಕ್ ಮೋಟಾರ್ ಬಳಕೆ ಮಾಡಲಾಗಿದ್ದು, ಹೆಚ್ಚುಕಮ್ಮಿ 38.8 ಬಿಹೆಚ್‍ಪಿ ಗರಿಷ್ಠ ಪವರ್ (ಶಕ್ತಿ) ಮತ್ತು 95 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತವೆ.
ಅಲ್ಟ್ರಾವೈಲೆಟ್‍ನ ಎಫ್77 ಎಲೆಕ್ಟ್ರಿಕ್ ಬೈಕ್ ಮಾದರಿಗಳು, 7.1 ಕೆಡಬ್ಲ್ಯೂಹೆಚ್ (kWh) ಮತ್ತು 10.3 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಒಳಗೊಂಡಿವೆ. ಭರ್ತಿ ಚಾರ್ಜ್ ನಲ್ಲಿ ಕ್ರಮವಾಗಿ 206 ಕಿ.ಮೀ ರಿಂದ 307 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತವೆ. ಜೊತೆಗೆ ಗಂಟೆಗೆ 147 ಕಿ.ಮೀ ವರೆಗೆ ಗರಿಷ್ಠ ವೇಗವನ್ನು ಪಡೆಯಲಿವೆ.

ಈ ಎಫ್77 ಮೋಟಾರ್‌ಸೈಕಲ್ ಆವೃತ್ತಿಗಳು ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿವೆ. ಬ್ಲೂಟೂತ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯೊಂದಿಗೆ 5-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟಲ್ ಕನ್ಸೋಲ್, ಎಲ್ಇಡಿ ಲೈಟಿಂಗ್, ರೈಡ್ ಅನಾಲಿಟಿಕ್ಸ್, ನ್ಯಾವಿಗೇಷನ್, ಜಿಯೋಫೆನ್ಸಿಂಗ್, ಕ್ರ್ಯಾಶ್ ಡಿಟೆಕ್ಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಳನ್ನು ಒಳಗೊಂಡಿದ್ದು, ಗ್ಲೈಡ್, ಕಾಂಬ್ಯಾಟ್ ಮತ್ತು ಬ್ಯಾಲಿಸ್ಟಿಕ್ ಎಂಬ ಮೂರು ರೈಡಿಂಗ್ ಮೋಡ್ ಆಯ್ಕೆಯನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








