ಮಧ್ಯಮ ವರ್ಗದವರೆ ಗಮನಿಸಿ.. ಆಕ್ಟಿವಾ, ಜುಪಿಟರ್ ಸೇರಿ ಈ ಪ್ರಖ್ಯಾತ ಸ್ಕೂಟರ್‌ಗಳು 80,000ಕ್ಕಿಂತ ಕಡಿಮೆ ಬೆಲೆಗೆ ಲಭ್ಯ!
ದಸರಾ ಹಾಗೂ ದೀಪಾವಳಿ ಮುಗಿದಿದೆ. ಹಬ್ಬಕ್ಕೆ ಹೊಚ್ಚ ಹೊಸ ಈ ಸ್ಕೂಟರ್‌ನ್ನು ಖರೀದಿಸಲು ಸಾಧ್ಯವಾಗಿಲ್ಲ ಎಂದು ಬೇಸರಿಸಿಕೊಳ್ಳಬೇಡಿ. ನಿಮ್ಮ ದಿನನಿತ್ಯದ ಬಳಕೆಗಾಗಿ ಈ ಸ್ಕೂಟರ್‌ಗಳು ರೂ.80,000ಕ್ಕಿಂತ ಕಡಿಮೆ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿ ಲಭ್ಯವಿವೆ. ಅಗ್ಗದ ದರವೆಂಬ ಕಾರಣಕ್ಕೆ ನೂತನ ಸ್ಕೂಟರ್‌ಗಳ ವೈಶಿಷ್ಟ್ಯ ಹಾಗೂ ಕಾರ್ಯಕ್ಷಮತೆಯಲ್ಲಿ ಕಂಪನಿಗಳು ಯಾವುದೇ ರಾಜಿ ಮಾಡಿಕೊಳ್ಳದೆ ಮಾರಾಟ ಮಾಡುತ್ತಿವೆ. ಇಲ್ಲಿ ಮಧ್ಯಮ ವರ್ಗದ ಜನರು ಸುಲಭವಾಗಿ ಖರೀದಿ ಮಾಡಬಹುದಾದ ಅಂತಹದ್ದೇ ಸ್ಕೂಟರ್‌ಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಯಮಹಾ ಫ್ಯಾಸಿನೊ 125 (Yamaha Fascino 125) ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.79,150 ರಿಂದ ರೂ.94,530 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. 125 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.2 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.3 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ನೂತನ ಯಮಹಾ ಫ್ಯಾಸಿನೊ 68.75 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಹ್ಯಾಲೊಜೆನ್ ಹೆಡ್‌ಲೈಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಸ್ಕೂಟರ್ 99 ಕೆಜಿ ತೂಕವಿದ್ದು, ಸುರಕ್ಷತೆಯ ದೃಷ್ಟಿಯಿಂದ ಡ್ರಮ್ & ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಹೋಂಡಾ ಆಕ್ಟಿವಾ 6ಜಿ (Honda Activa 6G) ಪ್ರಖ್ಯಾತ ಸ್ಕೂಟರ್ ಆಗಿ ಹೊರಹೊಮ್ಮಿದ್ದು, ಕನಿಷ್ಠ ರೂ.79,624 ಹಾಗೂ ಗರಿಷ್ಠ ರೂ.84,624 (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 109 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.79 ಪಿಎಸ್ ಅಶ್ವ ಶಕ್ತಿ ಮತ್ತು 8.84 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 59.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಆಕ್ಟಿವಾ 6ಜಿ ಸ್ಕೂಟರ್, ಎಸಿಜಿ ಸ್ಟಾರ್ಟರ್, ಎಂಜಿನ್ ಕಿಲ್ ಸ್ವಿಚ್, ಇಂಟಿಗ್ರೇಟೆಡ್ ಪಾಸ್ ಸ್ವಿಚ್, ಎಲ್ಇಡಿ ಹೆಡ್‌ಲೈಟ್ ಮತ್ತು ಸೆಮಿ ಡಿಜಿಟಲ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸ್ಟ್ಯಾಂಡರ್ಡ್, ಡಿಎಲ್ಎಕ್ಸ್ ಮತ್ತು ಹೆಚ್-ಸ್ಮಾರ್ಟ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಹೀರೋ ಪ್ಲೆಷರ್ ಪ್ಲಸ್ (Hero Pleasure Plus) ಕುರಿತಂತೆ ಹೇಳುವುದಾದರೆ, ಈ ಸ್ಕೂಟರ್ ರೂ.72,163 ರಿಂದ ರೂ.83,918 ಎಕ್ಸ್ ಶೋರೂಂ ದರವನ್ನು ಹೊಂದಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್, ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಟಿವಿಎಸ್ ಜುಪಿಟರ್ 110 (TVS Jupiter 110) ಸಹ ಜನಪ್ರಿಯ ಸ್ಕೂಟರ್ ಆಗಿದೆ. ಇದು ಕನಿಷ್ಠ ರೂ.77,400 ಮತ್ತು ಗರಿಷ್ಠ ರೂ.90,150 ಎಕ್ಸ್ ಶೋರೂಂ ದರವನ್ನು ಹೊಂದಿದೆ. 113 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇಂಟೆಲಿಜೆಂಟ್ ಸ್ಟಾರ್ಟ್/ ಸ್ಟಾಪ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಸುಜುಕಿ ಆಕ್ಸೆಸ್ 125 (Suzuki Access 125) ಬಗ್ಗೆ ಮಾತನಾಡುವುದರೆ, ಈ ಸ್ಕೂಟರ್ ರೂ.79,899 ರಿಂದ ರೂ.90,500 (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 124 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್ಇಡಿ ಹೆಡ್‌ಲೈಟ್, ಸೆಮಿ-ಡಿಜಿಟಲ್ ಇನ್ಫಾರ್ಮಶನ್ ಪ್ಯಾನೆಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಇನ್ನು, ನೂತನ ಯಮಹಾ ಫ್ಯಾಸಿನೊ 125, ಹೋಂಡಾ ಆಕ್ಟಿವಾ 6ಜಿ, ಹೀರೋ ಪ್ಲೆಷರ್ ಪ್ಲಸ್, ಟಿವಿಎಸ್ ಜುಪಿಟರ್ 110 ಆಗೂ ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗಳು ಒಂದಕ್ಕಿಂತ ಒಂದು ಅದ್ಬುತವಾಗಿವೆ. ಇವುಗಳು ನಿಮ್ಮ ದಿನನಿತ್ಯದ ಬಳಕೆಗೂ ಹೆಚ್ಚು ಸೂಕ್ತವಾಗಿದ್ದು, ತಕ್ಷಣ ಶೋರೂಂಗೆ ಹೋಗಿ ನಿಮ್ಮಿಷ್ಟದ ಸ್ಕೂಟರ್‌ನ್ನು ಖರೀದಿ ಮಾಡಿರಿ.


Click it and Unblock the Notifications