ಬಡವರು ಮನೆಗೆ ತರಬಹುದಾದ ಬೈಕ್‌ಗಳಿವು.. ಕಡಿಮೆ ಬೆಲೆ.. ದೀರ್ಘ ಬಾಳಿಕೆ!
ಪ್ರತಿಯೊಬ್ಬರಿಗೂ ದಿನನಿತ್ಯದ ಬಳಕೆಗೆ ದ್ವಿಚಕ್ರ ವಾಹನಗಳು ತೀರಾ ಅಗತ್ಯವಾಗಿವೆ. ನೀವು ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಯೋಚಿಸಿದ್ದೀರಾ.. ಹಾಗಾದರೆ 125 ಸಿಸಿ ಸಾಮರ್ಥ್ಯದ ಬೈಕ್‌ಗಳು ಉತ್ತಮ ಆಯ್ಕೆಯಾಗಬಲ್ಲವು. ಈ ವಿಭಾಗದಲ್ಲಿ ಟಿವಿಎಸ್ ರೈಡರ್ (TVS Raider), ಹೋಂಡಾ ಎಸ್‌ಪಿ (Honda SP) ಹಾಗೂ ಬಜಾಜ್ ಪಲ್ಸರ್ (Bajaj Pulsar) ಮೋಟಾರ್‌ಸೈಕಲ್‌ಗಳು ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿವೆ. ಇಲ್ಲಿ ನೂತನ ಬೈಕ್‌ಗಳ ಬೆಲೆ, ಮೈಲೇಜ್ ಹಾಗೂ ವೈಶಿಷ್ಟ್ಯಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಮೊದಲಿಗೆ ಟಿವಿಎಸ್ ರೈಡರ್ 125 (TVS Raider 125) ಮೋಟಾರ್‌ಸೈಕಲ್‌ಗಳ ಕುರಿತಂತೆ ಮಾತನಾಡೋಣ. ಇದು ರೂ.98,709 ರೂ.1.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 11.38 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 11.2 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಟಿವಿಎಸ್ ರೈಡರ್ 125 ಬೈಕ್ 71.94 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇಕೋ, ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ನ್ನು ಪಡೆದಿದ್ದು, ಎಲ್ಇಡಿ ಹೆಡ್‌ಲೈಟ್, ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್, ಹ್ಯಾಲೊಜೆನ್ ಇಂಡಿಕೇಟರ್‌ಗಳು, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾಪ್/ಸ್ಟಾರ್ಟ್ ಸಿಸ್ಟಮ್, ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ನ್ನು ಪಡೆದಿದೆ.
ಬಜಾಜ್ ಪಲ್ಸರ್ 125 (Bajaj Pulsar 125) ಕೂಡ ಶಕ್ತಿಯುತ ಮೋಟಾರ್‌ಸೈಕಲ್ ಆಗಿದ್ದು, ರೂ.83,712 ದಿಂದ ರೂ.97,197 ಎಕ್ಸ್ ಶೋರೂಂ ದರವನ್ನು ಪಡೆದಿದೆ. 124.4 ಸಿಸಿ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 11.8 ಪಿಎಸ್ ಪವರ್ ಮತ್ತು 10.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ನೂತನ ಪಲ್ಸರ್ 125 ಬೈಕ್ 51.46 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ನ್ನು ಹೊಂದಿದೆ. 142 ಕೆಜಿ ತೂಕವಿರುವ ಈ ಮೋಟಾರ್‌ಸೈಕಲ್, 11.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.
ಹೋಂಡಾ ಎಸ್‌ಪಿ 125 (Honda SP 125) ಕುರಿತು ಹೇಳುವುದಾದರೆ, ಇದು ರೂ.87,410 ದಿಂದ 91,960 (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 123.94 ಸಿಸಿ ಏರ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 10.87 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 10.8 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಹೋಂಡಾ ಎಸ್‌ಪಿ ಮೋಟಾರ್‌ಸೈಕಲ್ 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇಂಪೀರಿಯಲ್ ರೆಡ್ ಮೆಟಾಲಿಕ್, ಬ್ಲಾಕ್, ಪರ್ಲ್ ಸೈರನ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗಲಿದ್ದು, ಎಲ್ಇಡಿ ಹೆಡ್‌ಲೈಟ್, ಫುಲ್ ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಮತ್ತು ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications