ಬದುಕಿನ ಬಂಡಿ ಎಳೆಯಲು ಈ ಬೈಕ್‌ಗಳು ಬೆಸ್ಟ್.. ರೂ.66,600 ಆರಂಭಿಕ ಬೆಲೆ, ಭಾರೀ ಮೈಲೇಜ್!
ದೇಶದಲ್ಲಿ ಮಧ್ಯಮ ವರ್ಗದ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಬದುಕಿನ ಬಂಡಿ ಎಳೆಯಲು ಒಂದಲ್ಲ ಒಂದು ಉದ್ಯೋಗವನ್ನು ಮಾಡಲೇ ಬೇಕು. ಕೆಲಸಕ್ಕೆ ಬೇಗ ತಲುಪಲು ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ನೀವು ಬಜೆಟ್ ಬೆಲೆಗೆ ಉತ್ತಮ ಮೈಲೇಜ್ ನೀಡುವ ಬೈಕ್‌ನ್ನು ಹುಡುಕುತ್ತಿದ್ದರೆ ಹೀರೋ ಸ್ಪ್ಲೆಂಡರ್ ಪ್ಲಸ್, ಹೋಂಡಾ ಶೈನ್ 100 ಹಾಗೂ ಬಜಾಜ್ ಫ್ರೀಡಂ 125 ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ಹೊಸ ಮೋಟಾರ್‌ಸೈಕಲ್‌ಗಳ ದರ, ಕಾರ್ಯಕ್ಷಮತೆ ಮತ್ತು ವಿಶೇಷತೆ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಜನಪ್ರಿಯ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಬೈಕ್ ಬಗ್ಗೆ ಮಾತನಾಡೋಣ. ಇದು ರೂ.75,191 ದಿಂದ ರೂ.77,896 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 97.2 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.02 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 8.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಈ ಸ್ಪ್ಲೆಂಡರ್ ಪ್ಲಸ್ 80.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫೋರ್ಸ್ ಸಿಲ್ವರ್, ಬ್ಲ್ಯಾಕ್ ಗ್ರೇ ಸ್ಟ್ರೈಪ್, ಬ್ಲ್ಯಾಕ್ ರೆಡ್ ಪರ್ಪಲ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ. 112 ಕೆಜಿ ತೂಕವಿರುವ ಈ ಬೈಕ್, 9.8 ಲೀಟರ್ ಸಾಮರ್ಥ್ಯದ ಇಂಧನ (ಫ್ಯುಯೆಲ್) ಟ್ಯಾಂಕ್‌ನ್ನು ಹೊಂದಿದ್ದು, ಎಂತಹ ರಸ್ತೆಯಲ್ಲಿ ಬೇಕಾದರೂ ಸುಲಭವಾಗಿ ಓಡಿಸಬಹುದು.
ಹೋಂಡಾ ಶೈನ್ 100 (Honda Shine 100) ಕುರಿತಂತೆ ಹೇಳುವುದಾದರೆ, ಈ ಮೋಟಾರ್‌ಸೈಕಲ್ ರೂ.66,600 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 98.98 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.38 ಪಿಎಸ್ ಗರಿಷ್ಠ ಶಕ್ತಿ ಮತ್ತು 8.05 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ನೂತನ ಶೈನ್ 100 ಬೈಕ್ 68 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಗೋಲ್ಡ್, ಬ್ಲ್ಯಾಕ್ ವಿತ್ ಬ್ಲೂ ಸೇರಿದಂತೆ 5 ಬಣ್ಣಗಳೊಂದಿಗೂ ದೊರೆಯುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರಿಗೆ ಸುರಕ್ಷತೆಯನ್ನು ಒದಗಿಸಲು ಡ್ರಮ್ ಬ್ರೇಕ್‌ನ್ನು ಪಡೆದಿದೆ.
ಕಡೆಯದಾಗಿ ಬಜಾಜ್ ಫ್ರೀಡಂ 125 (Bajaj Freedom 125) ಬಗ್ಗೆ ಮಾತನಾಡುವುದಾದರೆ, ಇದು ರೂ.95,000 ದಿಂದ ರೂ.1.10 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಡ್ರಮ್, ಡ್ರಮ್ ಎಲ್ಇಡಿ ಹಾಗೂ ಡಿಸ್ಕ್ ಎಲ್ಇಡಿ ಎಂಬ ಮೂರು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ಲಭ್ಯವಿದೆ. 125 ಸಿಸಿ ಏರ್-ಕೂಲ್ಡ್ ಸಿಂಗಲ್-ಸಿಲಿಂಡರ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ

ಈ ಫ್ರೀಡಂ 125 ಮೋಟಾರ್‌ಸೈಕಲ್ ತಲಾ 2 ಲೀಟರ್/ಕೆಜಿ ಸಾಮರ್ಥ್ಯದ ಪೆಟ್ರೋಲ್ ಹಾಗೂ ಸಿಎನ್‌ಜಿ ಇಂಧನ (ಫ್ಯುಯೆಲ್) ಟ್ಯಾಂಕ್‌ನ್ನು ಪಡೆದಿದೆ. ಸಿಎನ್‌ಜಿ ಮೋಡ್‌ನಲ್ಲಿ 200 ಕಿ.ಮೀ ಮತ್ತು ಪೆಟ್ರೋಲ್ ಮೋಡ್‌ನಲ್ಲಿ 130 ಕಿ.ಮೀ ಮೈಲೇಜ್ ಓಡುತ್ತದೆ. ಒಟ್ಟಿಗೆ 330 ಕಿ.ಮೀ ಕ್ರಮಿಸುತ್ತದೆ. ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳು ಇದರಲ್ಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications