ಮಸ್ತ್ ಅಂದ್ರೆ ಮಸ್ತ್ ಬೈಕ್‌ಗಳಿವು: ಬೆಲೆಯು ಕಮ್ಮಿ.. ಸವಾರಿಗೂ ಉತ್ತಮ.. ದೀರ್ಘ ಬಾಳಿಕೆ!
ಭಾರತದಲ್ಲಿ ಸಾಮಾನ್ಯ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಅವರಿಗೆ ತಮ್ಮ ದಿನನಿತ್ಯದ ಬಳಕೆಗೆ ಯಾವ ಬೈಕ್ ಸೂಕ್ತ ಎಂಬುದರ ಬಗ್ಗೆ ಗೊಂದಲವಿರುತ್ತಾರೆ. ಇಲ್ಲಿ ಕಡಿಮೆ ಬೆಲೆಗೆ ಭರ್ಜರಿ ವೈಶಿಷ್ಟ್ಯಗಳೊಂದಿಗೆ ಖರೀದಿಗೆ ಲಭ್ಯವಿರುವ ಹೀರೋ ಸ್ಪ್ಲೆಂಡರ್ ಪ್ಲಸ್, ಟಿವಿಎಸ್ ಸ್ಪೋರ್ಟ್ ಹಾಗೂ ಬಜಾಜ್ ಪ್ಲಾಟಿನಾ 100 ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಮೋಟಾರ್‌ಸೈಕಲ್ ಬಗ್ಗೆ ಮಾತನಾಡೋಣ. ಇದು ರೂ.75,191 ರಿಂದ ರೂ.77,896 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಸ್ಟ್ಯಾಂಡರ್ಡ್ ಹಾಗೂ ಐ3ಎಸ್ ರೂಪಾಂತರದೊಂದಿಗೆ ಬ್ಲ್ಯಾಕ್ ರೆಡ್ ಪರ್ಪಲ್, ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್, ಬ್ಲೂ ಬ್ಲಾಕ್, ಮ್ಯಾಟ್ ಗ್ರೇ ಸೇರಿದಂತೆ 7 ಬಣ್ಣಗಳೊಂದಿಗೂ ಸಿಗುತ್ತದೆ. 65 ರಿಂದ 81 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

ಈ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್, 97.2 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಎಂಜಿನ್ ಹೊಂದಿದ್ದು, 8.02 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 8.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4-ಸ್ವೀಡ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್), ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್ ಅನ್ನು ಪಡೆದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಬಜಾಜ್ ಪ್ಲಾಟಿನಾ 100 (Bajaj Platina 100) ಬೈಕ್ ರೂ.68,288 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಮೋಟಾರ್‌ಸೈಕಲ್ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗಲಿದ್ದು, 102 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಎಂಜಿನ್ ಹಾಗೂ 4-ಸ್ವೀಡ್ ಗೇರ್ ಬಾಕ್ಸ್ ಅನ್ನು ಹೊಂದಿದೆ. ಗಂಟೆಗೆ 90 ಕಿ.ಮೀ ಗರಿಷ್ಠ ವೇಗವನ್ನು ಪಡೆಯಲಿದ್ದು, 70 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಹೊಸ ಪ್ಲಾಟಿನಾ ಮೋಟಾರ್‌ಸೈಕಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್ (ಡೇಟೈಮ್ ರನ್ನಿಂಗ್ ಲೈಟ್), ಹ್ಯಾಲೊಜೆನ್ ಹೆಡ್‌ಲೈಟ್ ಅನ್ನು ಒಳಗೊಂಡಿದೆ. ಮುಂಭಾಗ 130 ಎಂಎಂ ಹಾಗೂ ಹಿಂಭಾಗ 110 ಎಂಎಂ ಅಳತೆಯ ಡ್ರಮ್ ಬ್ರೇಕ್ ಮತ್ತು CBS (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಹೊಂದಿದ್ದು, 117 ಕೆಜಿ ತೂಕವಿದೆ.
ಟಿವಿಎಸ್ ಸ್ಪೋರ್ಟ್ (TVS Sport) ಬೈಕ್ ರೂ.66,320 ರಿಂದ 71,023 ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಇದು 109.7 ಸಿಸಿ ಎಂಜಿನ್ ಹೊಂದಿದ್ದು, 8.19 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 8.7 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ವೀಡ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಈ ಟಿವಿಎಸ್ ಸ್ಪೋರ್ಟ್ ಮೋಟಾರ್‌ಸೈಕಲ್ 70 ಕೆಎಂಪಿಎಲ್ ಮೈಲೇಜ್ ನೀಡಲಿದ್ದು, ಗಂಟೆಗೆ 90 ಕಿ.ಮೀ ಗರಿಷ್ಠ ವೇಗವನ್ನು ಹೊಂದಲಿದೆ. ಇದು 112 ಕೆಜಿ ತೂಕವಿದ್ದು, 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಪಡೆದಿದೆ. ಅನಲಾಗ್ ಇನ್‌ಸ್ಟ್ರುಮೆಂಟ್ ಪ್ಯಾನೆಲ್, ಆಕರ್ಷಕ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








