ದಿನಬಳಕೆಗಾಗಿ ಈ ಎಲೆಕ್ಟ್ರಿಕ್ ಬೈಕ್‌ಗಳು ಬೆಸ್ಟ್.. ಅತಿಕಡಿಮೆ ಬೆಲೆ.. ಜಾಸ್ತಿ ದೂರ ಓಡುತ್ತವೆ!

ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ವಿವಿಧ ಸ್ಕೂಟರ್ ಹಾಗೂ ಮೋಟಾರ್‌ಸೈಕಲ್‌ಗಳು ಖರೀದಿಗೆ ಲಭ್ಯವಿವೆ. ಇವುಗಳು ದಿನನಿತ್ಯದ ಬಳಕೆಗಾಗಿ ಪ್ರತಿಯೊಬ್ಬರಿಗೂ ಬೇಕೇ ಬೇಕು. ಅದರಲ್ಲೂ ಇಂಧನ ವೆಚ್ಚವಿಲ್ಲದ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಆದಾಗ್ಯೂ ಎಲೆಕ್ಟ್ರಿಕ್ ಬೈಕ್‌ಗಳ ಕೊರತೆ ಎದ್ದು ಕಾಣುತ್ತಿತ್ತು. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ರಿವೋಲ್ಟ್ ಆರ್‌ವಿ1 (Revolt RV1), ಓಬೆನ್‌ ರೋರ್‌ (Oben Rorr) ಹಾಗೂ ಓಲಾ ರೋಡ್‌ಸ್ಟರ್ ಎಕ್ಸ್ (Ola Roadster X) ಮೋಟಾರ್‌ಸೈಕಲ್‌ಗಳು ಮಾರಾಟಕ್ಕೆ ಬಂದಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿರುವ ರಿವೋಲ್ಟ್ ಆರ್‌ವಿ1 (Revolt RV1) ಎಲೆಕ್ಟ್ರಿಕ್ ಬೈಕ್ ಕುರಿತಂತೆ ಮಾತನಾಡೋಣ. ಇದು ಆರ್‌ವಿ1 ಹಾಗೂ ಆರ್‌ವಿ ಪ್ಲಸ್ ಎಂಬ 2 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಕ್ರಮವಾಗಿ 84,990 ರಿಂದ ರೂ.99,990 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Best Electric Bikes Low Price Good Range Revolt RV1 Oben Rorr Ola Roadster X

ಈ ರಿವೋಲ್ಟ್ ಆರ್‌ವಿ1 ರೂಪಾಂತರ 2.2 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 100 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ರಿವೋಲ್ಟ್ ಆರ್‌ವಿ1 ಪ್ಲಸ್ ರೂಪಾಂತರ 3.24 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 160 ಕಿಲೋಮೀಟರ್ ಓಡುತ್ತದೆ. 6 ಇಂಚಿನ ಡಿಜಿಟಲ್ ಎಲ್‌ಸಿಡಿ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಓಬೆನ್‌ ರೋರ್‌ (Oben Rorr) ಕೂಡ ಜನಪ್ರಿಯ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ ಆಗಿದ್ದು, 1,29,999 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 4.4 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 187 ಕಿಲೋಮೀಟರ್ ಕ್ರಮಿಸುತ್ತದೆ. 100 ಕೆಎಂಪಿಹೆಚ್ ಟಾಪ್ ಸ್ಪೀಡ್ ಪಡೆದಿದ್ದು, ಕೇವಲ 3 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

Best Electric Bikes Low Price Good Range Revolt RV1 Oben Rorr Ola Roadster X

ನೂತನ ಓಬೆನ್‌ ರೋರ್‌ ಎಲೆಕ್ಟ್ರಿಕ್ ಬೈಕ್ ಎಲ್ಇಡಿ ಲೈಟಿಂಗ್ ಸಿಸ್ಟಮ್, ಸ್ಮಾರ್ಟ್ ಫೋನ್ ಕನೆಕ್ಟಿವಿಟಿಯೊಂದಿಗೆ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ಹತ್ತಾರು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇಕೋ, ಸಿಟಿ ಮತ್ತು ಹ್ಯಾವೋಕ್ ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ನ್ನು ಪಡೆದಿದೆ.

ಓಲಾ ರೋಡ್‌ಸ್ಟರ್ ಎಕ್ಸ್ (Ola Roadster X) ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ ಬಗ್ಗೆ ಹೇಳುವುದಾದರೆ, ಇದು 2.5 ಕೆಡಬ್ಲ್ಯೂಹೆಚ್, 3.5 ಕೆಡಬ್ಲ್ಯೂಹೆಚ್ ಹಾಗೂ 4.5 ಕೆಡಬ್ಲ್ಯೂಹೆಚ್ ಬ್ಯಾಟರಿಯೊಂದಿಗೆ ಲಭ್ಯವಿದೆ. ಕ್ರಮವಾಗಿ ರೂ.74,999, ರೂ.84,999 ಮತ್ತು ರೂ.99,999 (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಈ ಓಲಾ ರೋಡ್‌ಸ್ಟರ್ ಎಕ್ಸ್ ಎಲೆಕ್ಟ್ರಿಕ್ ಬೈಕ್, ಸಂಪೂರ್ಣ ಚಾರ್ಜ್‌ನಲ್ಲಿ 200 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 124 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ. 4.3-ಇಂಚಿನ ಎಲ್‌ಸಿಡಿ ಸೆಗ್ಮೆಂಟ್ ಡಿಸ್ಪ್ಲೇ, ಓಲಾ ಮ್ಯಾಪ್ ನ್ಯಾವಿಗೇಷನ್ (ಟರ್ನ್- ಬೈ-ಟರ್ನ್), ಕ್ರೂಸ್ ಕಂಟ್ರೋಲ್, ಒಟಿಎ ಅಪ್ಡೇಟ್ಸ್, ಮೋಟಾರ್‌ಸೈಕಲ್ ಡಿಜಿಟಲ್ ಕೀ ಅನ್‌ಲಾಕ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, September 22, 2024, 14:00 [IST]
English summary
Best electric bikes low price good range revolt rv1 oben rorr ola roadster x
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+