ಪೆಟ್ರೋಲ್ ಹಾಕಿಸಿ ಬೇಸರವೇ.. ದಿನಬಳಕೆಗಾಗಿ ಸಿಗುವ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳಿವು, ಕೈಗೆಟುಕುವ ಬೆಲೆ!

ಪೆಟ್ರೋಲ್ (Petrol) ಬೆಲೆ ಗಗನಕ್ಕೇರಿದ್ದು, ಹಲವರು ದಿನನಿತ್ಯದ ಬಳಕೆಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ (Electric Two Vehicles) ಮೊರೆ ಹೋಗುತ್ತಿದ್ದಾರೆ. ಎಲೆಕ್ಟ್ರಿಕ್ ಬೈಕ್‌ಗಳಿಗೆ ಹೋಲಿಕೆ ಮಾಡಿದರೆ, ಇ-ಸ್ಕೂಟರ್‌ಗಳು ಸಾಕಷ್ಟು ಅಗ್ಗವಾಗಿವೆ. ನೀವು ಕೈಗೆಟುಕುವ ಬೆಲೆಯಲ್ಲಿ ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸುತ್ತಿದ್ದೀರಾ.. ಹಾಗಾದರೆ ಹೀರೋ ವಿಡಾ ವಿ1 ಪ್ಲಸ್, ಬಜಾಜ್ ಚೇತಕ್ 2901 ಹಾಗೂ ಓಲಾ ಎಸ್1 ಏರ್ ಮಾದರಿಗಳು ಉತ್ತಮ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಹೀರೋ ವಿಡಾ ವಿ1 ಪ್ಲಸ್ (Hero Vida V1 Plus) ಕುರಿತಂತೆ ಮಾತನಾಡೋಣ. ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.20 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 3.44 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 100 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 6 ಕೆಡಬ್ಲ್ಯೂ ಸಾಮರ್ಥ್ಯದ ಎಲೆಕ್ಟ್ರಿಕ್ ಮೋಟರ್‌ನ್ನು ಪಡೆದಿದ್ದು, 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 3.4 ಸೆಕೆಂಡುಗಳಲ್ಲಿ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

Best Electric Scooters For Daily Use Hero Vida V1 Plus Bajaj Chetak 2901 Ola S1 Air

ಈ ವಿಡಾ ವಿ1 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಲೈಟಿಂಗ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಡಿಜಿಟಲ್ ಡಾಕ್ಯುಮೆಂಟ್ ಸ್ಟೋರೇಜ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಇಕೋ, ರೈಡ್, ಸ್ಪೋರ್ಟ್ ಮತ್ತು ಕಸ್ಟಮ್ ಎಂಬ 4 ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.

ಬಜಾಜ್ ಚೇತಕ್ 2901 (Bajaj Chetak 2901) ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.95,998 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 2.88 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 123 ಕಿಲೋಮೀಟರ್ ಓಡುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

Best Electric Scooters For Daily Use Hero Vida V1 Plus Bajaj Chetak 2901 Ola S1 Air

ನೂತನ ಚೇತಕ್ 2901 ಇ-ಸ್ಕೂಟರ್ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಪಡೆದಿದೆ. ರೆಡ್, ಸೈಬರ್ ವೈಟ್, ಲೈಮ್ ಯೆಲ್ಲೋ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದರ ಬ್ಯಾಟರಿ ಪ್ಯಾಕ್ 0-80% ಚಾರ್ಜ್ ಆಗಲು 4 ಗಂಟೆ ತೆಗೆದುಕೊಳ್ಳುತ್ತದೆ.

ಓಲಾ ಎಸ್1 ಏರ್ (Ola S1 Air) ಕುರಿತಂತೆ ಮಾತನಾಡುವುದಾದರೆ, ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.01 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 3 ಕೆಡಬ್ಲ್ಯೂಹೆಚ್ ಬ್ಯಾಟರಿ ಆಯ್ಕೆಯನ್ನು ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 151 ಕಿಲೋಮೀಟರ್ ಕ್ರಮಿಸುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

Best Electric Scooters For Daily Use Hero Vida V1 Plus Bajaj Chetak 2901 Ola S1 Air

ಈ ಎಸ್1 ಏರ್ ಎಲ್ಇಡಿ ಲೈಟಿಂಗ್ ಸೆಟಪ್, 7-ಇಂಚಿನ ಟಚ್‌ಸ್ಕ್ರೀನ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರಿವರ್ಸ್ ಮೋಡ್, ಹಿಲ್ ಹೋಲ್ಡ್ ಅಸಿಸ್ಟ್, ಫ್ಲಾಟ್ ಫುಟ್‌ಬೋರ್ಡ್, ಬೂಟ್ ಎಲ್ಇಡಿ ಲೈಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ ಹೆಚ್ಚಿನ ಲಗೇಜ್ ಸಾಗಿಸಲು 34-ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, July 23, 2024, 19:59 [IST]
English summary
Best electric scooters for daily use hero vida v1 plus bajaj chetak 2901 ola s1 air
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+