ಪೆಟ್ರೋಲ್‌ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು, ಜಾಸ್ತಿ ಓಡುತ್ತವೆ!
ದೇಶದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆ ವೇಗವಾಗಿ ಬೆಳವಣಿಗೆಯಾಗುತ್ತಿದೆ. ಪ್ರಮುಖ ಕಂಪನಿಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವ ಇ-ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಕೈಗೆಟುಕುವ ಬೆಲೆಗೆ ಸಿಗುವ ಓಲಾ, ಟಿವಿಎಸ್, ಬಜಾಜ್, ಹೀರೋ ಹಾಗೂ ಸಿಂಪಲ್ ಎನರ್ಜಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಕುರಿತು ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಓಲಾ ಎಸ್1 ಪ್ರೊ (Ola S1 Pro) ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.1.30 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 4 ಕೆಡಬ್ಲ್ಯೂಹೆಚ್ (Kwh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 180 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಗಂಟೆಗೆ 120 ಕಿ.ಮೀ ಗರಿಷ್ಠ ವೇಗವನ್ನು ಪಡೆಯಲಿದೆ.

ಈ ಓಲಾ ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್, 2.6 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದ್ದು, 6.5 ಗಂಟೆಯಲ್ಲಿ ಇದರ ಬ್ಯಾಟರಿ 0-100% ಚಾರ್ಜ್ ಆಗುತ್ತದೆ. ಟಿಎಫ್‌ಟಿ ಡಿಸ್ಪ್ಲೇ, ವೈಫೈ/4ಜಿ ಮತ್ತು ಜಿಪಿಎಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡಿಸ್ಕ್ ಬ್ರೇಕ್ ಅನ್ನು ಪಡೆದಿದೆ.
ಬೆಂಗಳೂರಿನಲ್ಲಿ ಟಿವಿಎಸ್ ಐಕ್ಯೂಬ್ (TVS iQube) ಎಲೆಕ್ಟ್ರಿಕ್ ಸ್ಕೂಟರ್, ರೂಪಾಂತರಗಳಿಗೆ ಅನುಗುಣವಾಗಿ ರೂ.1,36,628 ದಿಂದ ರೂ.1,46,240 ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. ಇದು 3.04 ಕೆಡಬ್ಲ್ಯೂಹೆಚ್ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಭರ್ತಿ ಚಾರ್ಜ್ ನಲ್ಲಿ 100 ಕಿಲೋಮೀಟರ್ ಓಡುತ್ತದೆ. ಜೊತೆಗೆ ಗಂಟೆಗೆ 75 ಕಿ.ಮೀ ಗರಿಷ್ಠ ವೇಗವನ್ನು ಪಡೆಯಲಿದೆ.

ಬಜಾಜ್ ಚೇತಕ್ (Bajaj Chetak) ಎಲೆಕ್ಟ್ರಿಕ್ ಸ್ಕೂಟರ್, ರೂ.1.15 ದಿಂದ ರೂ.1.35 ಲಕ್ಷ ಎಕ್ಷ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 3.2 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಪೂರ್ತಿ ಚಾರ್ಜ್ ನಲ್ಲಿ 127 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಗಂಟೆಗೆ 63 ಕಿ.ಮೀ ಗರಿಷ್ಠ ವೇಗವನ್ನು ಪಡೆಯಲಿದೆ. ಇದರ ಬ್ಯಾಟರಿ ಪ್ಯಾಕ್ 3.15 ಗಂಟೆಯಲ್ಲಿ 0 - 80% ಚಾರ್ಜ್ ಆಗುತ್ತದೆ.
ದೇಶೀಯ ಮಾರುಕಟ್ಟೆಯಲ್ಲಿ ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್, ವಿ1 ಪ್ಲಸ್ ಹಾಗೂ ವಿ1 ಪ್ರೊ ಎಂಬ 2 ರೂಪಾಂತರಗಳ ಆಯ್ಕೆಯಲ್ಲಿ ದೊರೆಯಲಿದ್ದು, ರೂ.1.20 ಲಕ್ಷದಿಂದ ರೂ.1.50 ಲಕ್ಷ ಎಕ್ಷ್ ಶೋರೂಂ ಬೆಲೆಯನ್ನು ಹೊಂದಿದೆ. ವಿಡಾ ವಿ1 ಪ್ಲಸ್ 3.44 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 100 ಕಿ.ಮೀ ಕ್ರಮಿಸುತ್ತದೆ.

ಹೀರೋ ವಿಡಾ ವಿ1 ಪ್ರೊ 3.94 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್ ನಲ್ಲಿ 110 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಇವೆರೆಡು ಮಾದರಿಗಳು ಗಂಟೆ 80 ಕಿ.ಮೀ ಗರಿಷ್ಠ ವೇಗವನ್ನು ಹೊಂದಲಿವೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಲೈಟಿಂಗ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿವೆ.

ಸಿಂಪಲ್ ಒನ್ (Simple One) ಎಲೆಕ್ಟ್ರಿಕ್ ಸ್ಕೂಟರ್, ರೂ.1.65 ದಿಂದ ರೂ.1.70 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಪೂರ್ತಿ ಚಾರ್ಜ್ ನಲ್ಲಿ 212 ಕಿ.ಮೀ ಓಡುತ್ತದೆ. ಗಂಟೆಗೆ 105 ಕಿ.ಮೀ ಗರಿಷ್ಠ ವೇಗವನ್ನು ಪಡೆಯಲಿದೆ. ಇದರ ಬ್ಯಾಟರಿ 0-80% ಚಾರ್ಜ್ ಆಗಲು 5 ಗಂಟೆ ಸಮಯಾವಕಾಶವನ್ನು ತೆಗೆದುಕೊಳ್ಳುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








