ನಿಮ್ಮ ಹೆಂಡತಿಗೆ ಸ್ಕೂಟರ್ ಕೊಡಿಸಬೇಕೇ?.. ಶಾಪಿಂಗ್‌ಗೆ ಹೋಗಲು ಉತ್ತಮ, 50 Km ಮೈಲೇಜ್, ಕಡಿಮೆ ಬೆಲೆ!

ಭಾರತದಲ್ಲಿ ಬೈಕ್‌ಗಳಂತೆ ಸ್ಕೂಟರ್‌ಗಳು ಸಹ ದೊಡ್ಡಮಟ್ಟದಲ್ಲಿ ಜನಪ್ರಿಯತೆಯನ್ನು ಗಳಿಸಿವೆ. ಹೋಂಡಾ ಆಕ್ಟಿವಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವ ಸ್ಕೂಟರ್ ಆಗಿದೆ. ಬಹುತೇಕರ ಮನೆಗಳಲ್ಲಿ ದಿನನಿತ್ಯದ ಬಳಕೆಗಾಗಿ ಸ್ಕೂಟರ್‌ವೊಂದು ಇದ್ದೆ ಇರುತ್ತದೆ. ಮೋಟಾರ್‌ಸೈಕಲ್‌ಗಳಿಗೆ ಹೋಲಿಸಿದರೆ ಸ್ಕೂಟರ್‌ಗಳು 'ಗೇರ್ ಲೆಸ್' ಆಗಿರುವುದರಿಂದ ಮಹಿಳೆಯರಿಗೆ ತುಂಬಾ ಅಚ್ಚುಮೆಚ್ಚಾಗಿವೆ.

ಮಕ್ಕಳನ್ನು ಶಾಲೆಗೆ ಬಿಡುವುದು, ಶಾಪಿಂಗ್ ಹೋಗುವುದು ಸೇರಿದಂತೆ ಸ್ಕೂಟರ್‌ಗಳ ಸಹಾಯದಿಂದ ಎಲ್ಲ ಕೆಲಸವನ್ನು ಮಹಿಳೆಯರು ಬೇಗನೆ ಮಾಡಿ ಮುಗಿಸುತ್ತಾರೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಸ್ಕೂಟರ್‌ಗಳು, 125 ಸಿಸಿ ಸಾಮರ್ಥ್ಯದ ಎಂಜಿನ್‌ನ್ನು ಹೊಂದಿದ್ದು, ಸ್ವಲ್ಪ ಭಾರವಾಗಿರುತ್ತವೆ. ಇವುಗಳನ್ನು ಚಲಾಯಿಸುವಾಗ ಮಹಿಳೆಯರು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ.

Best Lightweight Scooter For Women And Senior Citizens TVS Scooty Pep Plus 50 Km Mileage Low Price

ಇಲ್ಲಿ ನಾವು ಅತ್ಯಂತ ಕಡಿಮೆ ತೂಕವನ್ನು ಹೊಂದಿರುವುದರೊಂದಿಗೆ ಗರಿಷ್ಠ ಮೈಲೇಜ್ ನೀಡುವ ಟಿವಿಎಸ್ ಕಂಪನಿಯ ಜನಪ್ರಿಯ ಸ್ಕೂಟರ್‌ವೊಂದರ ಕುರಿತು ಸಂಪೂರ್ಣವಾಗಿ ವಿವರಿಸಿದ್ದೇವೆ. ಈ ಸ್ಕೂಟರ್‌ ಮಹಿಳಾ ಸವಾರರಿಗೆ ಹೇಳಿ ಮಾಡಿಸಿದ ರೀತಿಯಲ್ಲಿದ್ದು, ದೀರ್ಘಕಾಲ ಬಾಳಿಕೆಯು ಬರುತ್ತದೆ. ವಿಶೇಷವಾಗಿ ಇದನ್ನು ಹಿರಿಯ ನಾಗರಿಕರು ಕೂಡ ಸುಲಭವಾಗಿ ಓಡಿಸಬಹುದು.

ಸದ್ಯ ಮಹಿಳೆಯರು ವೃದ್ಧರಿಗೆ ಹೆಚ್ಚು ಉಪಯುಕ್ತವಾಗಿರುವ ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ (TVS Scooty Pep Plus) ಸ್ಕೂಟರ್, ರೂಪಾಂತರ (ವೇರಿಯೆಂಟ್) ಗಳಿಗೆ ಅನುಗುಣವಾಗಿ ರೂ.63,060 ದಿಂದ ರೂ.66,160 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಬ್ಲೂ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

Best Lightweight Scooter For Women And Senior Citizens TVS Scooty Pep Plus 50 Km Mileage Low Price

ಈ ಹೊಚ್ಚ ಹೊಸ ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ 87.8 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 5.43 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 6.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇಂಧನ ದಕ್ಷತೆ (Fuel Efficiency) ವಿಚಾರವಾಗಿ ಬರುವುದಾದರೆ, 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್, ಹ್ಯಾಲೊಜೆನ್ ಹೆಡ್‌ಲೈಟ್, ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳು (ಡಿಆರ್‌ಎಲ್‌), ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್ ಸ್ಟ್ಯಾಂಡ್ ಅಲಾರಾಂ, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 93 ಕೆಜಿ ತೂಕವಿರುವ ಈ ಸ್ಕೂಟರ್, 4.2-ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ಈ ಸ್ಕೂಟರ್‌ನ ಸಸ್ಪೆನ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್, ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದ್ದು, 10-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಗ್ರೌಂಡ್ ಕ್ಲಿಯರೆನ್ಸ್ 135 ಎಂಎಂ & ಸೀಟ್ ಹೈಟ್ (ಆಸನ ಎತ್ತರ) 760 ಎಂಎಂ ಇದೆ. ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್‌ಗೆ ಹೀರೋ ಪ್ಲೆಷರ್ ಪ್ಲಸ್, ಪ್ರಬಲ ಪ್ರತಿಸ್ಪರ್ಧಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, May 22, 2024, 10:40 [IST]
English summary
Best lightweight scooter for women and senior citizens tvs scooty pep plus 50 km mileage low price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+