80 ಸಾವಿರದೊಳಗೆ ಸಿಗುತ್ತವೆ ಈ 5 ಬೈಕ್‌ಗಳು.. ಭಾರೀ ಮೈಲೇಜ್

ದೇಶದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ.100ರ ಆಸುಪಾಸಿನಲ್ಲಿದ್ದು, ಹಲವರು ದೈನಂದಿನ ಬಳಕೆಗೆ ಹೆಚ್ಚಿನ ಮೈಲೇಜ್ ನೀಡುವ ಹೊಸ ಬೈಕ್‌ಗಳಿಗಾಗಿ ಹುಡುಕಾಟವನ್ನು ನಡೆಸುತ್ತಿರುತ್ತಾರೆ. ಇಲ್ಲಿ ಅತ್ಯುತ್ತಮ ಇಂಧನ ದಕ್ಷತೆ (Fuel efficiency) ಹಾಗೂ ರೂ.80 ಸಾವಿರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿರುವ ಜನಪ್ರಿಯ ಕಂಪನಿಯ ಮೋಟಾರ್‌ಸೈಕಲ್‌ಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಹೋಂಡಾ ಲಿವೋ (Honda Livo) ಬೈಕ್ ಕುರಿತು ಮಾತನಾಡೋಣ. ಇದು ರೂ.78,500 ದಿಂದ ರೂ.82,500 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. 109.51ಸಿಸಿ ಏರ್ ಕೋಲ್ಡ್ ಫ್ಯುಯೆಲ್ ಇಂಜೆಕ್ಟ್ದ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.79 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 9.30 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4-ಸ್ಪೀಡ್ ಗೇರ್ ಬಾಕ್ಸ್‌ನ್ನು ಒಳಗೊಂಡಿದೆ.

Best Mileage Bikes Under Rs 80 000 Honda Livo Shine 100 bajaj Platina hero Splendor TVS Sport

ಈ ಹೋಂಡಾ ಲಿವೋ 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಲಿದ್ದು, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಸ್ವಿಚ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. 113 ಕೆಜಿ ತೂಕವಿರುವ ಈ ಮೋಟಾರ್‌ಸೈಕಲ್‌, 9 ಲೀಟರ್ ಸಾಮರ್ಥ್ಯದ ಇಂಧನ (ಫ್ಯುಯೆಲ್) ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಬಜಾಜ್ ಪ್ಲಾಟಿನಾ 100 (Bajaj Platina 100) ಬಗ್ಗೆ ಹೇಳುವುದಾದರೆ, ಈ ಬೈಕ್ ರೂ.67,808 ಎಕ್ಸ್ ಶೋರೂಂ ದರವನ್ನು ಪಡೆದಿದೆ. 102-ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.9 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 8.3 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best Mileage Bikes Under Rs 80 000 Honda Livo Shine 100 bajaj Platina hero Splendor TVS Sport

ಈ ಪ್ಲಾಟಿನಾ 100 ಮೋಟಾರ್‌ಸೈಕಲ್‌ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗಲಿದ್ದು, ಹ್ಯಾಲೊಜೆನ್ ಹೆಡ್‌ಲೈಟ್, ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳು, ಸಿಂಗಲ್ ಪೀಸ್ ಸೀಟ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳು ಹಾಗೂ CBS (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್‍) ಅನ್ನು ಒಳಗೊಂಡಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಮೋಟಾರ್‌ಸೈಕಲ್‌ ಸಹ ಕೈಗೆಟುಕುವ ದರದಲ್ಲಿ ಸಿಗುತ್ತದೆ. ಇದು ರೂ.75,441 ದಿಂದ ರೂ.76,786 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 97.2 ಸಿಸಿ ಎಂಜಿನ್ ಪಡೆದಿದ್ದು, 8.02 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 8.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಿದ್ದು, 80.6 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

Best Mileage Bikes Under Rs 80 000 Honda Livo Shine 100 bajaj Platina hero Splendor TVS Sport

ಟಿವಿಎಸ್ ಸ್ಪೋರ್ಟ್ (TVS Sport) ಬೈಕ್ ಗರಿಷ್ಠ ಮೈಲೇಜ್ ನೀಡುವುದರೊಂದಿಗೆ ಅಗ್ಗದ ಬೆಲೆಗೆ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ. ರೂ.59,881 ದಿಂದ ರೂ.71,223 ಎಕ್ಸ್ ಶೋರೂಂ ದರವನ್ನು ಪಡೆದಿದೆ. 109.7 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8.19 ಪಿಎಸ್ ಪವರ್ ಹಾಗೂ 8.7 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಹಾಗೆಯೇ 70 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಕಡೆಯದಾಗಿ ಹೋಂಡಾ ಶೈನ್ 100 (Honda Shine 100) ಮೋಟಾರ್‌ಸೈಕಲ್‌ ಕುರಿತು ಮಾತನಾಡುವುದಾದರೆ, ಇದು ರೂ.64,900 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 98.98 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಎಂಜಿನ್ ಒಳಗೊಂಡಿದ್ದು, 55 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, May 27, 2024, 17:00 [IST]
English summary
Best mileage bikes under rs 80 thousand honda livo shine 100 bajaj platina hero splendor tvs sport
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+