ಸಾಮಾನ್ಯ ಜನರು ಖರೀದಿಸಬಹುದಾಗ ಸ್ಕೂಟರ್‌ಗಳಿವು.. ವರ್ಷಗಟ್ಟಲೇ ಬಾಳಿಕೆ, ಅತ್ಯಂತ ಕಡಿಮೆ ಬೆಲೆ!

ಭಾರತದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಕಚೇರಿಗೆ ಹೋಗುವುದು ಸೇರಿದಂತೆ ದಿನನಿತ್ಯದ ಬಳಕೆಗೆ ದ್ವಿಚಕ್ರ ವಾಹನಗಳು ತೀರಾ ಅಗತ್ಯವಾಗಿವೆ. ಬೈಕ್‌ಗಳಿಗೆ ಹೋಲಿಸಿದರೆ, ಸ್ಕೂಟರ್‌ಗಳು ಗೇರ್‌ಲೆಸ್ ಆಗಿರುವುದರಿಂದ ಪ್ರತಿಯೊಂದು ವಯೋಮಾನದ ಜನರಿಗೂ ಇಷ್ಟವಾಗುತ್ತವೆ. ನೀವು ಹೊಚ್ಚ ಹೊಸ ಸ್ಕೂಟರ್‌ನ್ನು ಮನೆಗೆ ತರಲು ಯೋಚಿಸಿದ್ದೀರಾ.. ಇಲ್ಲಿ 125 ಸಿಸಿ ವಿಭಾಗದಲ್ಲಿ ದೊರೆಯುವ ಜನಪ್ರಿಯ ಸುಜುಕಿ ಆಕ್ಸೆಸ್ (Suzuki Access), ಹೋಂಡಾ ಆಕ್ಟಿವಾ (Honda Activa) ಹಾಗೂ ಟಿವಿಎಸ್ ಎನ್‌ಟಾರ್ಕ್ (TVS NTORQ) ಸ್ಕೂಟರ್‌ಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಸುಜುಕಿ ಆಕ್ಸೆಸ್ 125 (Suzuki Access 125) ಬಗ್ಗೆ ಮಾತನಾಡೋಣ. ಈ ಸ್ಕೂಟರ್ ರೂ.82,586 ದಿಂದ ರೂ.94,082 ಬೆಲೆಯನ್ನು (ಎಕ್ಸ್ ಶೋರೂಂ) ಹೊಂದಿದೆ. 124 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.7 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 10 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best Scooters In 125 cc Segment Suzuki Access 125 TVS NTORQ 125 Honda Activa 125

ಹೊಸ ಆಕ್ಸೆಸ್ 125 ಸ್ಕೂಟರ್ ಎಲ್ಇಡಿ ಹೆಡ್ ಲೈಟ್, ಸೆಮಿ ಡಿಜಿಟಲ್ ಇನ್ಫಾರ್ಮಶನ್ ಪ್ಯಾನೆಲ್, ಸುಜುಕಿ ರೈಡ್ ಕನೆಕ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಸಿಂಗಲ್ ಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಗಳನ್ನು ಒಳಗೊಂಡಿದೆ.

ಹೋಂಡಾ ಆಕ್ಟಿವಾ 125 (Honda Activa 125) ಸ್ಕೂಟರ್ ಕುರಿತಂತೆ ಹೇಳುವುದಾದರೆ, ಇದು ರೂ.82,634 ದಿಂದ ರೂ.91,807 ಎಕ್ಸ್ ಶೋರೂಂ ದರವನ್ನು ಪಡೆದಿದೆ. 124 ಸಿಸಿ ಏರ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.3 ಪಿಎಸ್ ಪವರ್ ಮತ್ತು 10.4 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best Scooters In 125 cc Segment Suzuki Access 125 TVS NTORQ 125 Honda Activa 125

ನೂತನ ಆಕ್ಟಿವಾ 125 ಸ್ಕೂಟರ್ ಎಲ್‌ಇಡಿ ಹೆಡ್‌ಲೈಟ್, ಡಿಆರ್‌ಎಲ್‌ (ಡೇಟೈಮ್ ರನ್ನಿಂಗ್ ಲೈಟ್ಸ್), ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ. 109 ಕೆಜಿ ತೂಕವಿರುವ ಈ ಸ್ಕೂಟರ್, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.

ಟಿವಿಎಸ್ ಎನ್‌ಟಾರ್ಕ್ 125 (TVS NTORQ 125) ಮಾತನಾಡುವುದಾದರೆ, ಈ ಸ್ಕೂಟರ್ ರೂ.87,271 ದಿಂದ ರೂ.1.08 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 124.8 ಸಿಸಿ ಏರ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 9.38 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 10.6 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 54.33 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best Scooters In 125 cc Segment Suzuki Access 125 TVS NTORQ 125 Honda Activa 125

ಹೊಸ ಎನ್‌ಟಾರ್ಕ್ 125 ಸ್ಕೂಟರ್ ಎಲ್‌ಇಡಿ ಹೆಡ್‌ಲೈಟ್, ಟೈಲ್ ಲೈಟ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, June 29, 2024, 15:36 [IST]
English summary
Best scooter 125 cc segment suzuki access 125 tvs ntorq 125 honda activa 125
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+