Second Hand Scooters: ಕಡಿಮೆ ಬೆಲೆಗೆ ದೊರೆಯುವ ಸೆಕೆಂಡ್ ಹ್ಯಾಂಡ್ ಸ್ಕೂಟರ್‌ಗಳಿವು.. ಹೆಚ್ಚು ಮೈಲೇಜ್

ನಮ್ಮ ದಿನನಿತ್ಯದ ಕೆಲಸಗಳಿಗೆ ದ್ವಿಚಕ್ರ ವಾಹನಗಳು ಅನಿವಾರ್ಯವಾಗಿದ್ದು, ಬಹುತೇಕರಿಗೆ ಹೊಸ ಬೈಕ್ ಅಥವಾ ಸ್ಕೂಟರ್‌ಗಳನ್ನು ಕೊಂಡುಕೊಳ್ಳಲು ಸಾಧ್ಯವಾಗುವುದಿಲ್ಲ. ಆ ಕಾರಣಕ್ಕೆ ಸೆಕೆಂಡ್ ಹ್ಯಾಂಡ್ ವಾಹನಗಳ ಮೊರೆಹೋಗುತ್ತಾರೆ. ಇಲ್ಲಿ ನಿಮ್ಮ ಬಜೆಟ್ ಬೆಲೆಗೆ ಸಿಗುವ ಹೋಂಡಾ ಆಕ್ಟಿವಾ, ಟಿವಿಎಸ್ ಜುಪಿಟರ್ ಹಾಗೂ ಸುಜುಕಿ ಆಕ್ಸೆಸ್ ಸ್ಕೂಟರ್‌ಗಳ ಬಗ್ಗೆ ವಿವರಿಸಿದ್ದೇವೆ.

ಸೆಕೆಂಡ್ ಹ್ಯಾಂಡ್ (Second hand) ಮಾರುಕಟ್ಟೆಯಲ್ಲಿ ದೊರೆಯುವ ಈ ಸ್ಕೂಟರ್‌ಗಳಿಗಿಂತ ನೂತನ ವಾಹನಗಳೇ ಕೈಗೆಟುಕುವ ದರವನ್ನು ಹೊಂದಿದ್ದು, ಗ್ರಾಹಕರ ಅನುಕೂಲಕ್ಕೆ ಇಎಂಐ ಆಯ್ಕೆ ಕೂಡ ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಹೊಸ ಹೋಂಡಾ ಆಕ್ಟಿವಾ 125 (Honda Activa 125) ರೂಪಾಂತರಗಳಿಗೆ ಅನುಗುಣವಾಗಿ ರೂ.82,634 ದಿಂದ ರೂ.91,807 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Best Selling Second Hand Scooters Honda activa 125 Tvs Jupiter 125 Suzuki Access 125

ಈ ಹೋಂಡಾ ಆಕ್ಟಿವಾ 125ನಲ್ಲಿ 124 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಎಂಜಿನ್ ಬಳಕೆ ಮಾಡಲಾಗಿದೆ. ಇದು 8.3 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 10.4 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದ್ದು, 60 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. ಎಲ್ಇಡಿ ಹೆಡ್‌ಲೈಟ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ನೂತನ ಟಿವಿಎಸ್ ಜುಪಿಟರ್ 125 (TVS Jupiter 125) ಸ್ಕೂಟರ್, ರೂ.89,155 ದಿಂದ ರೂ.99,805 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಇದು 124.8 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಎಂಜಿನ್ ಹೊಂದಿದ್ದು, 8.2 ಪವರ್ ಮತ್ತು 10.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 57.27 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

Best Selling Second Hand Scooters Honda activa 125 Tvs Jupiter 125 Suzuki Access 125

ಈ ಟಿವಿಎಸ್ ಜುಪಿಟರ್ 125 ಸ್ಕೂಟರ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್ ಲ್ಯಾಂಪ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್, ಸ್ಪೀಡೋಮೀಟರ್, ಓಡೋಮೀಟರ್, ಟ್ರಿಪ್ ಮೀಟರ್ ಮತ್ತು ಪುಯಲ್ ಗೇಜ್‌ನ್ನು ತೋರಿಸಲು ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. 108 ಕೆಜಿ ತೂಕವಿರುವ ಈ ಸ್ಕೂಟರ್, ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.

ಹೊಸ ಸುಜುಕಿ ಆಕ್ಸೆಸ್ 125 (Suzuki Access 125), ರೂ.83,482 ದಿಂದ ರೂ.94,082 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇದು ಕೂಡ 124 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಒಳಗೊಂಡಿದೆ. 8.7 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 10 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, 45 ಕೆಎಂಪಿಎಲ್ ವರೆಗೆ ಮೈಲೇಜ್ ನೀಡಬಲ್ಲದು.

Best Selling Second Hand Scooters Honda activa 125 Tvs Jupiter 125 Suzuki Access 125

ಈ ಸುಜುಕಿ ಆಕ್ಸೆಸ್ 125 ಸ್ಕೂಟರ್, ಎಲ್ಇಡಿ ಹೆಡ್‌ಲೈಟ್, ಸೆಮಿ ಡಿಜಿಟಲ್ ಇನ್ಫಾರ್ಮಶನ್ ಪ್ಯಾನೆಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದ್ದು, ರೂಪಾಂತರಗಳಿಗೆ ಅನುಗುಣವಾಗಿ ಡ್ರಮ್ ಅಥವಾ ಡಿಸ್ಕ್ ಬ್ರೇಕ್ ಆಯ್ಕೆಯಲ್ಲಿ ದೊರೆಯುತ್ತದೆ. ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗೆ ಹೀರೋ ಮೆಸ್ಟ್ರೋ ಎಡ್ಜ್ 125, ಯಮಹಾ ಫ್ಯಾಸಿನೊ 125 ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ನಿಮ್ಮ ಗಮನಕ್ಕೆ.. ಯಾವುದೇ ಸೆಕೆಂಡ್ ಹ್ಯಾಂಡ್ ಸ್ಕೂಟರ್‌ಗಳನ್ನು ಖರೀದಿಸುವಾಗ ಜಾಗ್ರತೆ ವಹಿಸುವುದು ತುಂಬಾ ಮುಖ್ಯವಾಗಿದೆ. ಪ್ರಮುಖವಾಗಿ ವಿಮೆ ಸೇರಿದಂತೆ ವಾಹನದ ಎಲ್ಲ ದಾಖಲೆಗಳು ಸರಿಯಾಗಿ ಇದೆಯೇ ಎಂಬುದನ್ನು ಪರಿಶೀಲಿಸಬೇಕು. ನುರಿತ ಮೈಕಾನಿಕ್ ನಿಂದ ವಾಹನದಲ್ಲಿ ಡೆಂಟ್, ಸ್ಕ್ರಾಚ್ ಒಳಗೊಂಡಂತೆ ಯಾವುದಾದರೂ ತಾಂತ್ರಿಕ ದೋಷವಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, April 5, 2024, 10:07 [IST]
English summary
Best selling second hand scooters honda activa 125 tvs jupiter 125 suzuki access 125
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+