TVS: ದಿನನಿತ್ಯದ ಬಳಕೆಗಾಗಿ ಟಿವಿಎಸ್ ದ್ವಿಚಕ್ರ ವಾಹನಗಳು ಉತ್ತಮ.. ನಿಮ್ಮ ಆಯ್ಕೆ ಯಾವುದು?

ಭಾರತದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಹೊಸೂರು ಮೂಲದ ಟಿವಿಎಸ್ ಮೋಟಾರ್ (TVS Motor) ಗುರುತಿಸಿಕೊಂಡಿದೆ. ಕಂಪನಿಯು ಮಧ್ಯಮ ವರ್ಗದ ಜನರಿಗೆ ದೊಡ್ಡಮಟ್ಟದ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ದರದಲ್ಲಿ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ನೀವು ದಿನನಿತ್ಯದ ಬಳಕೆಗೆ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ದ್ವಿಚಕ್ರ ವಾಹನವೊಂದನ್ನು ಖರೀದಿಸಲು ಯೋಚಿಸಿದ್ದೀರಾ... ಹಾಗಾದರೆ ಟಿವಿಎಸ್ ಮೋಟಾರ್‌ಸೈಕಲ್‌ ಮತ್ತು ಸ್ಕೂಟರ್‌ಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ಕಂಪನಿಯ ಜನಪ್ರಿಯ ದ್ವಿಚಕ್ರ ವಾಹನಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಟಿವಿಎಸ್ ಜೂಪಿಟರ್ 125 ಜನಪ್ರಿಯ ಸ್ಕೂಟರ್ ಆಗಿದ್ದು, ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ ರೂ.89,155 ದಿಂದ ರೂ.99,805 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.2 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 10.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

Best TVS Bikes And Scooters For Daily Use Jupiter Scooty Pep Plus Sport Star City Plus iQube

ಈ ಜೂಪಿಟರ್ ಸ್ಕೂಟರ್ 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಪಡೆದಿದೆ. ಮುಂಭಾಗ (ಫ್ರಂಟ್) ಮತ್ತು ಹಿಂಭಾಗ (ರೇರ್) 12-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಮಹಿಳೆಯರಿಗೆ ಹೆಚ್ಚು ಸೂಕ್ತವಾಗಿದೆ. ರೂ.63,060 ದಿಂದ ರೂ.66,160 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 87.8 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹ್ಯಾಲೊಜೆನ್ ಹೆಡ್‌ಲೈಟ್, ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳು (ಡಿಆರ್‌ಎಲ್‌) ಮತ್ತು ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Best TVS Bikes And Scooters For Daily Use Jupiter Scooty Pep Plus Sport Star City Plus iQube

ಟಿವಿಎಸ್ ಸ್ಪೋರ್ಟ್ ಜನಪ್ರಿಯ ಮೋಟಾರ್‌ಸೈಕಲ್‌ ಎಂದೇ ಹೆಸರುವಾಸಿಯಾಗಿದ್ದು, ರೂ.67,170 ದಿಂದ ರೂ.71,873 (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಪ್ಯಾನೆಲ್ ಸೇರಿದಂತೆ ಹಲವು ವೈಶಿಷ್ಟ್ಯಗಳಿವೆ.

ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್ ಸಾವಿರಾರು ಯುವ ಗ್ರಾಹಕರ ಮನಸ್ಸನ್ನು ಗೆದ್ದಿದೆ. ರೂ.77,138 ದಿಂದ ರೂ.80,288 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. 109 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 83.09 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಲಿದ್ದು, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Best TVS Bikes And Scooters For Daily Use Jupiter Scooty Pep Plus Sport Star City Plus iQube

ಟಿವಿಎಸ್ ಐಕ್ಯೂಬ್ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಪ್ರಖ್ಯಾತ ಎಲೆಕ್ಟ್ರಿಕ್ ಸ್ಕೂಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ರೂ.94,999 ದಿಂದ ರೂ.185,373 (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 2.2 ಕೆಡಬ್ಲ್ಯೂಹೆಚ್, 3.4 ಕೆಡಬ್ಲ್ಯೂಹೆಚ್ ಹಾಗೂ 5.1 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 75 ರಿಂದ 150 ಕಿಲೋಮೀಟರ್ ಕ್ರಮಿಸುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, July 6, 2024, 17:00 [IST]
English summary
Best tvs bikes and scooters for daily use jupiter scooty pep plus sport star city plus iqube
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+