ಪ್ರತಿನಿತ್ಯ ಕಚೇರಿಗೆ ಹೋಗಲು ಉತ್ತಮ ಬೈಕ್‌ಗಳಿವು.. ಕಡಿಮೆ ಬೆಲೆ, ಸಖತ್ ಮೈಲೇಜ್!

ಪ್ರತಿದಿನ ಆಫೀಸ್‌ಗೆ ಹೋಗಿ, ಬರಲು ಹಲವರಿಗೆ ಮೋಟಾರ್‌ಸೈಕಲ್‌ಗಳು ತುಂಬಾ ಅಗತ್ಯವಾಗಿವೆ. ಆದರೆ, ಯಾವುದನ್ನು ಖರೀದಿಸಬೇಕು ಎಂಬ ಗೊಂದಲ ಬಹುತೇಕರಲ್ಲಿರುತ್ತದೆ. ಇಲ್ಲಿ ಉತ್ತಮ ಮೈಲೇಜ್ ನೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವ ಟಿವಿಎಸ್ (TVS) ಕಂಪನಿ ಬೈಕ್‌ಗಳ ಬಗ್ಗೆ ವಿವರಿಸಿದ್ದೇವೆ.

ಮೊದಲಿಗೆ ಟಿವಿಎಸ್ ಸ್ಪೋರ್ಟ್ (TVS Sport) ಮೋಟಾರ್‌ಸೈಕಲ್‌ ಬಗ್ಗೆ ಮಾತನಾಡೋಣ. ಇದು ರೂ.66,320 ದಿಂದ ರೂ.71,023 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 109.7 ಸಿಸಿ, ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8.19 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 8.7 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ ಬಾಕ್ಸ್‌ನ್ನು ಪಡೆದಿದ್ದು, 70 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

Best Tvs Bikes In India Raider Sport Star City Plus Low price

ಈ ಟಿವಿಎಸ್ ಸ್ಪೋರ್ಟ್ 90 ಕೆಎಂಪಿಹೆಚ್ ಟಾಪ್ ಸ್ಪೀಡ್ (ಗರಿಷ್ಠ ವೇಗ)ನಲ್ಲಿ ಸಂಚರಿಸುವ ಸಾಮರ್ಥ್ಯವನ್ನು ಪಡೆದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಪ್ಯಾನೆಲ್, ಆಕರ್ಷಕ ಹೆಡ್‌ಲೈಟ್‌, ಎಲ್ಇಡಿ ಡಿಆರ್‌ಎಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದ್ದು, ಬರೋಬ್ಬರಿ 112 ಕೆಜಿ ತೂಕವಿದೆ.

ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ (TVS Star City Plus) ಬೈಕ್ ರೂ.77,138 ದಿಂದ ರೂ.80,288 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಇದು 109 ಸಿಸಿ ಏರ್ ಕೋಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 8.08 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 8.7 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4-ಸ್ಪೀಡ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

Best Tvs Bikes In India Raider Sport Star City Plus Low price

ಈ ಸ್ಟಾರ್ ಸಿಟಿ ಪ್ಲಸ್ 83.09 ಕೆಎಂಪಿಎಲ್ ಮೈಲೇಜ್ ನೀಡಲಿದ್ದು, 90 ಕೆಎಂಪಿಹೆಚ್ ಟಾಪ್ ಸ್ಪೀಡ್ (ಗರಿಷ್ಠ ವೇಗ) ಅನ್ನು ಹೊಂದಿದೆ. ಎಲ್ಇಡಿ ಹೆಡ್ ಲೈಟ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. 116 ಕೆಜಿ ತೂಕವಿರುವ ಈ ಬೈಕ್, 10-ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ರೈಡರ್ (TVS Raider) ಮೋಟಾರ್‌ಸೈಕಲ್‌ ರೂ.98,709 ದಿಂದ ರೂ.1.08 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಪಡೆದಿದ್ದು, 11.38 ಪಿಎಸ್ ಗರಿಷ್ಠ ಪವರ್ ಹಾಗೂ 11.2 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್ ಬಾಕ್ಸ್ ಹೊಂದಿದ್ದು, 71.94 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

Best Tvs Bikes In India Raider Sport Star City Plus Low price

ಈ ಟಿವಿಎಸ್ ರೈಡರ್ ಇಕೋ, ಸ್ಪೋರ್ಟ್ಸ್ ಎಂಬ ರೈಡಿಂಗ್ ಮೋಡ್ ಆಯ್ಕೆಯನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್, ಹ್ಯಾಲೊಜೆನ್ ಇಂಡಿಕೇಟರ್‌ಗಳು, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಒಳಗೊಂಡಿದೆ. 123 ಕೆಜಿ ತೂಕವಿರುವ ಈ ಬೈಕ್, 17-ಇಂಚಿನ ಅಲಾಯ್ ವೀಲ್ಸ್ ಕೂಡ ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, May 3, 2024, 19:00 [IST]
English summary
Best tvs bikes in india raider sport star city plus low price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+